ಬಿವಿಟಿಯಲ್ಲಿ ಉಚಿತ ವಸ್ತ್ರವಿನ್ಯಾಸ ತರಬೇತಿಗೆ ಅರ್ಜಿ ಆಹ್ವಾನ
ಮಣಿಪಾಲ, ಅ.5: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಅ.18 ರಿಂದ 4 ವಾರಗಳ ಉಚಿತ ವಸ್ತ್ರವಿನ್ಯಾಸ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಸ್ವ-ಉದ್ಯೋಗ ಮಾಡಲು ಆಸಕ್ತಿ ಇರುವ ಮಹಿಳೆಯರು/ವಿದ್ಯಾಭ್ಯಾಸ ಮುಗಿಸಿರುವ ಅಭ್ಯರ್ಥಿಗಳು ಈ ತರಬೇತಿಯ ಸದುಪಯೋಗ ಪಡೆದು ಕೊಳ್ಳಬಹುದು.
ಆಸಕ್ತ ಶಿಬಿರಾರ್ಥಿಗಳು ತಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ವಿದ್ಯಾರ್ಹತೆಯನ್ನು ಬಿಳಿ ಹಾಳೆಯಲ್ಲಿ ಬರೆದು ಅ.13ರೊಳಗೆ ಭಾರತೀಯ ವಿಕಾಸ ಟ್ರಸ್ಟ್, ಅನಂತ, ಪೆರಂಪಳ್ಳಿ, ಅಂಬಾಗಿಲು ರಸ್ತೆ, ಕುಂಜಿಬೆಟ್ಟು ಅಂಚೆ, ಉಡುಪಿ - 576102, ಈ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಿಕೊಡ ಬಹುದು. ಅಥವಾ ದೂರವಾಣಿ ಸಂಖ್ಯೆ (0820) 2570263ನ್ನು ಸಂಪರ್ಕಿಸಿ ತಮ್ಮ ಭಾಗವಹಿಸುವಿಕೆಯನ್ನು ದೃಢೀಕರಿಸಬಹುದು ಎಂದು ಬಿವಿಟಿ ಪ್ರಕಟಣೆ ತಿಳಿಸಿದೆ.
Next Story





