ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ಅ.5: ಬೆಳುವಾಯಿ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕ ಹುದ್ದೆ ಭರ್ತಿಗೆ ಅದೇ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಎಸೆಸೆಲ್ಸಿ ಉತ್ತೀರ್ಣರಾದ, ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮೇಲ್ವಿಚಾರಕ ಸ್ಥಾನ ಮೀಸಲಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಇತರ ದೃಢೀಕೃತ ದಾಖಲೆಗಳನ್ನು ಪಿಡಿಒಗೆ ಸಲ್ಲಿಸಲು ನ.6ರವರೆಗೆ ಅವಕಾಶವಿದೆ.
ಹೆಚ್ಚಿನ ಮಾಹಿತಿಗೆ ಗ್ರಾಮ ಪಂಚಾಯತ್ ಅಥವಾ ಮಂಗಳೂರು ಜಿಲ್ಲಾ ಕೇಂದ್ರ ಗ್ರಂಥಾಲಯದ ದೂ.ಸಂ.: 0824-2441905ನ್ನು ಸಂಪರ್ಕಿಸುವಂತೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯಗ್ರಂಥಾಲಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





