Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನಿನ...

ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನಿನ ಅರಿವು ಅವಶ್ಯಕ: ನ್ಯಾಯಾಧೀಶೆ ಶರ್ಮಿಳಾ

ವಾರ್ತಾಭಾರತಿವಾರ್ತಾಭಾರತಿ5 Oct 2021 8:40 PM IST
share
ಉತ್ತಮ ಸಮಾಜ ನಿರ್ಮಾಣಕ್ಕೆ ಕಾನೂನಿನ ಅರಿವು ಅವಶ್ಯಕ: ನ್ಯಾಯಾಧೀಶೆ ಶರ್ಮಿಳಾ

ಉಡುಪಿ, ಅ.5: ಪ್ರತಿಯೊಬ್ಬ ನಾಗರಿಕನೂ ಸಾಮಾನ್ಯ ಕಾನೂನಿನ ಅರಿವು ಹೊಂದಿದಾಗ ಮಾತ್ರ ಉತ್ತಮ ಸಾಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಹೇಳಿದ್ದಾರೆ.

ಮಣಿಪಾಲದ ಮಾಧವಕೃಪ ಶಾಲೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಕೀಲರ ಸಂಘ, ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಪೋಲಿಸ್ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೋವಿಡ್-19 ಜಾಗೃತಿ ಮತ್ತು ಲಸಿಕಾ ಅಭಿಯಾನ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಕಾನೂನಿನ ಚೌಕಟ್ಟಿನಲ್ಲಿಯೇ ತನ್ನ ಎಲ್ಲಾ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು. ಈ ಹಿನ್ನೆಲೆಯಲ್ಲಿ ಕಾನೂನಿನ ಸಾಮಾನ್ಯ ಜ್ಞಾನವನ್ನು ಹೊಂದುವುದು ಅವಶ್ಯವಾಗಿದೆ.ಕಾನೂನು ಅರಿವು ಮತ್ತು ನೆರವು ನೀಡುವ ಕಾರ್ಯವನ್ನು ಕಾನೂನು ಸೇವಾ ಪ್ರಾಧಿಕಾರವು ಹಲವು ವರ್ಷಗಳಿಂದ ನಿರಂತರವಾಗಿ ನಿರ್ವಹಿಸುತ್ತಿದೆ ಎಂದರು.

ಸರಕಾರವು ಕೋವಿಡ್ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ಅನೇಕ ಮಾರ್ಗದರ್ಶನಗಳನ್ನು ನೀಡಿ, ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಕೋವಿಡ್‌ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕಾನೂನಿನ ಅರಿವು ಹಾಗೂ ನೆರವಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು 45 ದಿನಗಳ ಸರಣಿ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದ ಅವರು ಕಾನೂನಿನ ಅರಿವು ಮೂಡಿಸಿ ಅವರ ಸಮಸ್ಯೆ ಗಳನ್ನು ಬಗೆಹರಿಸಿಕೊಳ್ಳಲು ಮಾರ್ಗದರ್ಶನವನ್ನು ಸಹ ಜಾಗೃತಿ ಕಾರ್ಯಕ್ರಮ ದಲ್ಲಿ ನೀಡಲಾಗುವುದು ಎಂದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್, ಮೆಘಾ ಲೋಕ್ ಅದಾಲತ್ ಗಳಲ್ಲಿ ರಾಜಿ ಸಂಧಾನದ ಮೂಲಕ 2,020 ಪ್ರಕರಣಗಳನ್ನು ಹಾಗೂ 132 ವ್ಯಾಜ್ಯ ಪೂರ್ವ ದಾವೆಗಳನ್ನು ಇತ್ಯರ್ಥ ಪಡಿಸಲಾಗಿದೆ.ಕಾನೂನು ಸೇವಾ ಪ್ರಾಧಿಕಾರವು ಸಮಾಜದ ದುರ್ಬಲ ವರ್ಗದವರಿಗೆ, ಅಸಹಾಯಕರಿಗೆ ಮತ್ತು ವಿಶೇಷಚೇತನರಿಗೆ, ಮಾನಸಿಕ ಅಸ್ವಸ್ಥರಿಗೆ ಹಾಗೂ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರುವವರಿಗೆ ಉಚಿತ ಕಾನೂನು ನೆರವು ನೀಡುತ್ತದೆ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶೆ ದೀಪಾ ಮಾತನಾಡಿ, ಸರಕಾರ ನೀಡುವ ಯೋಜನೆಗಳು ಹಾಗೂ ಸೌಲಭ್ಯವನ್ನು ಪಡೆಯುವುದರ ಜೊತೆಗೆ ಕಾನೂನು ಸೇವಾ ಪ್ರಾಧಿಕಾರ ಒದಗಿಸುವ ಅರಿವು ಮತ್ತು ನೆರವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಡಾ.ಅಶ್ವಿನಿ ಕುಮಾರ್ ಅವರು ಮಾತನಾಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ. ನಾಗರಾಜ ಮಕ್ಕಳ ಹಕ್ಕು ಮತ್ತು ರಕ್ಷಣೆ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಚಾರ್ಮಿನ್, ಬಿ.ವಿ.ಪಂಡಿತ್ ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ ಸ್ವಾಗತಿಸಿ, ರಾಜೇಶ್ ವಂದಿಸಿದರು, ಡಾ.ಅಂಜಲಿ ವಾಗ್ಲೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X