ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಅ.5: ಬ್ರಹ್ಮಾವರ ತಾಲೂಕಿನ ಆವರ್ಸೆ ಗ್ರಾಪಂ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು 2ಎ, ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಗ್ರಾಮದಲ್ಲಿ 2ಎ-ಮಾಜಿ ಸೈನಿಕ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅದೇ ಗ್ರಾಪಂ ವ್ಯಾಪ್ತಿಗೆ ಸೇರಿದ ಎಸೆಸೆಲ್ಸಿ ಉತ್ತೀರ್ಣರಾದ 2ಎ ಇತರೆ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅ.29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆವರ್ಸೆ ಗ್ರಾಪಂ ದೂ.ಸಂ: 0820- 2567909 ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯ ದೂ.ಸಂ: 0820- 2523438ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story





