ಅ.6ರಿಂದ ರಾಜ್ಯ ಹಜ್ ಸಮಿತಿ ಅಧ್ಯಕ್ಷರ ದ.ಕ. ಜಿಲ್ಲಾ ಪ್ರವಾಸ
ಮಂಗಳೂರು, ಅ.5: ರಾಜ್ಯ ಹಜ್ ಸಮಿತಿ ಅಧ್ಯಕ್ಷ ಮುಹಮ್ಮದ್ ರೌಫುದ್ದೀನ್ ಕಚೇರಿವಾಲೆ ಅ.6ರಿಂದ ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅ.6ರಂದು ರಾತ್ರಿ 8:10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು, ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ.7ರಂದು ಬೆಳಗ್ಗೆ 11 ಗಂಟೆಗೆ ನಗರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಸಂಬಂಧಿಸಿದ ಪರಿಶೀಲನೆ ನಡೆಸಲಿದ್ದಾರೆ. ಸ್ಥಳೀಯ ಎನ್‌ಜಿಒಗಳು ಹಾಗೂ ಸಂಬಂಧ ಪಟ್ಟವರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.
ಅ.8ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ, ಎನ್‌ಜಿಒಗಳು ಹಾಗೂ ಹಜ್ ಸ್ವಯಂ ಸೇವಕರ ಜೊತೆ ಸಭೆ ನಡೆಸಲಿದ್ದಾರೆ. ರಾತ್ರಿ ಮಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಅ.9ರಂದು ರಾತ್ರಿ 9:5ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಹೈದರಾಬಾದ್‌ಗೆ ವಾಪಸಾಗಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





