ರಾಷ್ಟ್ರರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ, ರಾಜ್ಯಕ್ಕೆ ಸೀಮಿತವಾಗಿರುವೆ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಷ್ಟ್ರರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ದೆಹಲಿಗೆ ಇಂದು ತೆರಳಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರ ರಾಷ್ಟ್ರ ರಾಜಕಾರಣದ ಬಗ್ಗೆ ಸುದ್ದಿಯಾಗಿದ್ದು, ಈ ಸಂಬಂಧ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
''ರಾಷ್ಟ್ರರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ನಮ್ಮ ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ಅವರು ಈ ಹಿಂದೆ ಆಹ್ವಾನಿಸಿದಾಗಲೇ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ''. ಎಂದು ಹೇಳಿದ್ದಾರೆ.
''ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಯವರ ಜೊತೆಗಿನ ಇಂದಿನ ಭೇಟಿ ಎಂದಿನಂತೆ ಸೌಹಾರ್ದಯುತವಾಗಿತ್ತು. ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಸಂಘಟನೆಯ ಬಗ್ಗೆ ಚರ್ಚೆ ನಡೆಯಿತು. ರಾಷ್ಟ್ರರಾಜಕಾರಣಕ್ಕೆ ಅವರು ನನಗೆ ಆಹ್ವಾನ ನೀಡಿರಲಿಲ್ಲ. ಇವೆಲ್ಲ ಊಹಾಪೋಹದ ಸುದ್ದಿ'' ಎಂದು ತಿಳಿಸಿದ್ದಾರೆ.
ರಾಷ್ಟ್ರರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ನಮ್ಮ
— Siddaramaiah (@siddaramaiah) October 5, 2021
ಕಾಂಗ್ರೆಸ್ ನಾಯಕರಾದ @RahulGandhi ಅವರು ಈ ಹಿಂದೆ ಆಹ್ವಾನಿಸಿದಾಗಲೇ
ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ.
2/2







