ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನುಡಿದ ಡಿ.ಕೆ.ಶಿವಕುಮಾರ್

ಸುಳ್ಯ : ವಿದ್ಯುತ್ ಸಮಸ್ಯೆ ಬಗ್ಗೆ ಬೆಳ್ಳಾರೆಯ ಸಾಯಿ ಗಿರಿಧರ್ ಮತ್ತು ಅಂದಿನ ಇಂಧನ ಸಚಿವ ಡಿ.ಕೆ ಶಿವಕುಮಾರ್ ನಡುವಿನ ಫೋನ್ ಸಂಭಾಷಣೆಯ ಪ್ರಕರಣವೊಂದಕ್ಕೆ ಸಂಬಂಧಿಸಿ ಸಾಕ್ಷ್ಯ ಹೇಳಲು ಮಂಗಳವಾರ ಸುಳ್ಯ ನ್ಯಾಯಾಲಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಜರಾಗಿ ಸಾಕ್ಷ್ಯ ನುಡಿದರು.
ಸುಳ್ಯ ನ್ಯಾಯಾಲಯಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ, ಮಾಜಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಸಹಾಯಕ ಅಭಿಯೋಜಕರು ಮತ್ತು ವಕೀಲರ ಜೊತೆ ಮಾತುಕತೆ ನಡೆಸಿದ ಬಳಿಕ ನ್ಯಾಯಾಲಯ ಕಲಾಪಗಳಿಗೆ ಹಾಜರಾಗಿ ಸಾಕ್ಷ್ಯ ನುಡಿದರು. 11 ಗಂಟೆಯ ವೇಳೆಗೆ ನ್ಯಾಯಾಲಯಕ್ಕೆ ಆಗಮಿಸಿದ ಅವರು ಅರ್ಧ ಗಂಟೆಗಳ ಕಾಲ ಎಪಿಪಿ ಮತ್ತು ವಕೀಲರ ಜೊತೆ ಮಾತುಕತೆ ನಡೆಸಿ 11.30ಕ್ಕೆ ನ್ಯಾಯಾಲಯ ಕಲಾಪಕ್ಕೆ ಹಾಜರಾಗಿ ಸುಳ್ಯ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಧೀಶ ಸೋಮಶೇಖರ್ ಎದುರು ಹಾಜರಾಗಿ ಸಾಕ್ಷ್ಯ ನುಡಿದರು.
Next Story





