Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಕುಟುಂಬ ರಾಜಕೀಯದ ಕೂಪದಿಂದ ಹೊರಬಂದು...

‘ಕುಟುಂಬ ರಾಜಕೀಯದ ಕೂಪದಿಂದ ಹೊರಬಂದು ಮಾತನಾಡಿ’: ಎಚ್‍ಡಿಕೆಗೆ ನಳಿನ್‍ಕುಮಾರ್ ಕಟೀಲು ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ6 Oct 2021 9:26 PM IST
share
‘ಕುಟುಂಬ ರಾಜಕೀಯದ ಕೂಪದಿಂದ ಹೊರಬಂದು ಮಾತನಾಡಿ’: ಎಚ್‍ಡಿಕೆಗೆ ನಳಿನ್‍ಕುಮಾರ್ ಕಟೀಲು ತಿರುಗೇಟು

ಬೆಂಗಳೂರು, ಅ.6: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಟುಂಬ ರಾಜಕೀಯದ ಕೂಪ ಮಂಡೂಕದಂತಿದ್ದಾರೆ. ಅದರಿಂದ ಕುಟುಂಬವೆಂಬ ಕೂಪದಿಂದ ಹೊರಬಂದು ಅವರು ಮಾತನಾಡುವುದು ಉಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ದೇಶ ಶಕ್ತಿಶಾಲಿಯಾಗಬೇಕೆಂಬ ಮಹತ್ವದ ಚಿಂತನೆಯನ್ನು ಆರೆಸ್ಸೆಸ್ ಹೊಂದಿದೆ. ಭಾರತ ವಿಶ್ವಗುರುವಾಗಬೇಕು ಎಂಬ ಚಿಂತನೆಯೊಂದಿಗೆ ಅದು ಕಾರ್ಯನಿರ್ವಹಿಸುತ್ತಿದ್ದು, ಆರೆಸ್ಸೆಸ್‍ನ ಸ್ವಯಂಸೇವಕರು ಜೀವನವನ್ನು ಸಮರ್ಪಣೆ ಮಾಡಿಕೊಂಡು ಕೆಲಸ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ವಿಶ್ವದ ದೊಡ್ಡ ಸಂಘಟನೆಯಾಗಿ ಹೊರಹೊಮ್ಮಿರುವ ಅಲ್ಲಿ ಯಾರೂ ಸ್ವಾರ್ಥಿಗಳಲ್ಲ. ಹಾಗೆಯೇ ನಾನು ನನ್ನ ಮಕ್ಕಳು, ಮರಿಮಕ್ಕಳೇ ಈ ರಾಜ್ಯ ದೇಶ ಆಳ್ವಿಕೆ ಮಾಡಬೇಕು ಎಂಬ ಸ್ವಾರ್ಥ ಅವರಲ್ಲಿಲ್ಲ. ಜೆಡಿಎಸ್ ಹಿರಿಯ ಮುಖಂಡ ಪಿ.ಜಿ.ಆರ್.ಸಿಂಧ್ಯಾ ಆರೆಸ್ಸೆಸ್ ಹಿನ್ನೆಲೆಯಿಂದ ಬಂದವರು. ಆರೆಸ್ಸೆಸ್ ಬಗ್ಗೆ ಅವರಿಂದ ಕುಮಾರಸ್ವಾಮಿ ಕೇಳಿ ತಿಳಿದುಕೊಳ್ಳಲಿ. ಅಥವಾ ಯಾವುದಾದರೂ ಶಾಖೆಗೆ ಬಂದು ಅಲ್ಲಿ ಮಾಹಿತಿ ಪಡೆಯಲು ಅವಕಾಶವಿದೆ ಎಂದು ಅವರು ಹೇಳಿದ್ದಾರೆ.

‘ಕೆಲವರು ಸೈನ್ಯಕ್ಕೆ ಸೇರುವವರು ಹೊಟ್ಟೆಪಾಡಿಗಾಗಿ ಸೇರುತ್ತಾರೆ’ ಎಂದು ಮಾಜಿ ಮುಖ್ಯಮಂತ್ರಿ ಸೈನಿಕರನ್ನೇ ಅವಮಾನಿಸಿದ್ದರು. ಈ ದೇಶದ ಸೈನಿಕ ಕಷ್ಟಗಳ ಬಗ್ಗೆ ಅವರಿಗೆ ಅರಿವಿಲ್ಲ. ಸೈನಿಕರಲ್ಲಿ ದೇಶಭಕ್ತಿಯಿರುತ್ತದೆ ಎಂಬ ಸಾಮಾನ್ಯ ಜ್ಞಾನವೂ ಇಲ್ಲದ ಇವರು ಒಂದು ಕೋಟಿ ರೂಪಾಯಿ ಸಂಬಳ ಕೊಟ್ಟರೂ ಇವರ ಮಕ್ಕಳನ್ನು ಸೇನೆಗೆ ಸೇರಿಸಲಾರರು. ಮಕ್ಕಳನ್ನು ಸೇನೆಗೆ ಸೇರಿಸುವ ಈ ಆಹ್ವಾನವನ್ನು ಕುಮಾರಸ್ವಾಮಿ ಸ್ವೀಕರಿಸಲಿ ಎಂದು ನಳಿನ್‍ಕುಮಾರ್ ಕಟೀಲ್ ಸವಾಲೆಸೆದಿದ್ದಾರೆ.

ಸೈನಿಕರು ಮಾತ್ರವಲ್ಲದೆ ಈಗ ಯುಪಿಎಸ್ಸಿಯ ಅಧಿಕಾರಿಗಳನ್ನು ಅವಮಾನ ಮಾಡಿರುವ ಮಾಜಿ ಮುಖ್ಯಮಂತ್ರಿ ತಮ್ಮ ಹುದ್ದೆಯ ಘನತೆಯನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಬೇಕು. ಕುಟುಂಬವನ್ನಷ್ಟೇ ಗಮನಿಸಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.

ಸಮಾಜದಲ್ಲಿರುವ ದೋಷಗಳಾದ ಅಸಮಾನತೆ, ಜಾತೀಯತೆ, ಅಸ್ಪøಶ್ಯತೆ, ಸ್ವಜನಪಕ್ಷಪಾತ ಇದು ದೂರವಾಗಬೇಕು ಎಂದು ಆರೆಸ್ಸೆಸ್ ಬಯಸುತ್ತದೆ. ಆರೆಸ್ಸೆಸ್‍ನ ಕನಸು ಭಾರತ ಸಶಕ್ತ ರಾಷ್ಟ್ರವಾಗಬೇಕು ಎಂಬುದಾಗಿದೆ. ಕೆಲವರು ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತ, ಭ್ರಷ್ಟಾಚಾರವನ್ನು ಹಾಸಿಗೆ ಮಾಡಿಕೊಂಡು ಹೊದ್ದು ಮಲಗಿದವರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಅನುಮಾನಿಸುತ್ತಾರೆ ಎಂದು ಅವರು ನುಡಿದಿದ್ದಾರೆ.

ಆರೆಸ್ಸೆಸ್ ಪರಿವಾರ ಸಂಸ್ಥೆಗಳ ಮೂಲಕ ಅನಾಥಾಶ್ರಮ, ಗುರುಕುಲ, ವಿಶೇಷ ಚೇತನ ಮಕ್ಕಳಿಗೆ ಸಾವಿರಾರು ಶಾಲೆಗಳನ್ನು ನಿಸ್ವಾರ್ಥವಾಗಿ ನಡೆಸಲಾಗುತ್ತಿದೆ. ಯುದ್ಧ, ನೆರೆ ಹಾವಳಿ, ಕೊರೋನ ಸಮಯದಲ್ಲಿ, ಮಲೆನಾಡಿನಲ್ಲಿ ನಕ್ಸಲರ ಹಾವಳಿ ಇದ್ದಾಗ ಅಲ್ಲಿಯ ಜನರಿಗೆ ನಿಸ್ವಾರ್ಥ ಸೇವೆ ಮಾಡಿ ದೇಶ ಸೇವೆಯ ಬಗ್ಗೆ ಅರಿವು ಮೂಡಿಸಿದ್ದಾರೆ. ಸ್ವಯಂಸೇವಕರಿಗೆ ದೇಶದ ಅಭಿವೃದ್ಧಿಯ ಬಗ್ಗೆ ಚಿಂತೆ ಬಿಟ್ಟರೆ ಅವರಿಗೆ ಬೇರೆ ಯೋಚನೆಗಳೇ ಇಲ್ಲ. ಆದರೆ, ಟೀಕೆಗಾಗಿಯೇ ಟೀಕಿಸುವವರಿಗೆ ಇವೆಲ್ಲವೂ ಅರ್ಥವಾಗುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.

ಪಿಎಚ್‍ಡಿ ಮಾಡಿರುವವರು, ಡಾಕ್ಟರ್ ಗಳು, ಎಂಜಿನಿಯರ್ ಗಳು ಆರೆಸ್ಸೆಸ್ ಕಾರ್ಯಕರ್ತರಾಗಿ ಸೇರಿ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಆರೆಸ್ಸೆಸ್‍ನ ಸಾವಿರಾರು ಶಾಖೆಗಳಿವೆ. ಕ್ರೀಡಾಭಾರತಿ, ವಿದ್ಯಾಭಾರತಿ ಸೇರಿದಂತೆ ನೂರಾರು ಕ್ಷೇತ್ರಗಳಲ್ಲಿ ಕಾರ್ಯಕರ್ತರು ನಿಸ್ವಾರ್ಥತೆಯಿಂದ ಕೆಲಸ ಮಾಡುತ್ತಿದ್ದಾರೆ. ರಾಜಕೀಯ ಕಾರ್ಯತಂತ್ರವಿರುವ ಸ್ವಾರ್ಥಿಗಳಿಗೆ ಇದು ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಯಾವುದಾದರೂ ಒಂದು ಆರೆಸ್ಸೆಸ್ ಶಾಖೆಗೆ ಬಂದು ಅಧ್ಯಯನ ಮಾಡಿ ಸಂಶೋಧನೆ ಮಾಡಿದರೆ ಸಂಘದ ಧೋರಣೆಗಳು ಏನು ಎಂದು ತಿಳಿಯುತ್ತದೆ. ಕೆಲವರ ಕೃಪಾಕಟಾಕ್ಷದಿಂದ 1989ರಲ್ಲಿ ಕೆಎಎಸ್‍ನಿಂದ ಐಎಎಸ್‍ಗೆ ಭಡ್ತಿ ಪಡೆದಿದ್ದ ಅಧಿಕಾರಿಯನ್ನು ಕೆಪಿಎಸ್ಸಿಗೆ 2007ರಲ್ಲಿ ನೇಮಿಸಿ ಕೈಗೊಂಬೆಯನ್ನಾಗಿ ಮಾಡಿಕೊಂಡು ಮಾಡಬಾರದ ಅಕ್ರಮಗಳನ್ನು ಮಾಡಿದ್ದು ನಿಮಗೆ ನೆನಪಿಲ್ಲವೇ ಎಂದು ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.

ಸೈನಿಕರ ಬಗ್ಗೆ, ಆರೆಸ್ಸೆಸ್ ಕಾರ್ಯಕರ್ತರ ಬಗ್ಗೆ ಮಾತನಾಡುವ ನೈತಿಕತೆಯನ್ನು ಕಳೆದುಕೊಂಡಿರುವ ಕುಮಾರಸ್ವಾಮಿ ಅವರಿಗೆ ಮುಂದಿನ ದಿನಗಳಲ್ಲಿ ಜನರೇ ಸೂಕ್ತ ಉತ್ತರ ನೀಡಿ ಮೂಲೆಗುಂಪು ಮಾಡಲಿದ್ದಾರೆ ಎಂದು ನಳಿನ್‍ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X