ಲಖಿಂಪುರ ಹಿಂಸಾಚಾರ ಪ್ರಕರಣ: ಗುರುವಾರ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರ್ಧಾರ

ಹೊಸದಿಲ್ಲಿ: ಇಡೀ ದೇಶದ ಗಮನ ಸೆಳೆದಿರುವ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದ ಭೀಕರ ಹಿಂಸಾಚಾರ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಸುಪ್ರೀಂಕೋರ್ಟ್ ನ್ಯಾಯಪೀಠ ಗುರುವಾರ ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ ಎಂದು NDTV ವರದಿ ಮಾಡಿದೆ.
ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶ ಪೊಲೀಸರು ತನಿಖೆಯನ್ನು ನಿರ್ವಹಿಸಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಳ್ಳಲು ನ್ಯಾಯಾಲಯ ನಿರ್ಧರಿಸಿದೆ.
ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಶ್ ಕಾರು ಹರಿಸಿದ್ದಾನೆ ಎಂದು ರೈತರು ಆರೋಪಿಸಿದ್ದು, ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ಕೇಂದ್ರ ಸಚಿವರ ಪುತ್ರನ ವಿರುದ್ಧ ಹತ್ಯೆ ಕೇಸ್ ದಾಖಲಾಗಿದ್ದರೂ ಇನ್ನೂ ಬಂಧಿಸಲಾಗಿಲ್ಲ.
Next Story