ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಪತ್ರಕರ್ತ ಸಾವು : ಉ.ಪ್ರ. ಸರಕಾರದಿಂದ ವರದಿ ಕೋರಿದ ಪ್ರೆಸ್ ಕೌನ್ಸಿಲ್

Photo: Newslaundry
ಹೊಸದಿಲ್ಲಿ, ಅ. 6: ಅಕ್ಟೋಬರ್ 3ರಂದು ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಹಿಂಸಾಚಾರದ ಸಂದರ್ಭ ಪತ್ರಕರ್ತ ಸಾವನ್ನಪ್ಪಿರುವ ಘಟನೆಯನ್ನು ಭಾರತೀಯ ಪತ್ರಿಕಾ ಮಂಡಳಿ ಸ್ವಯಂಪ್ರೇರಿತವಾಗಿ ಪರಿಗಣಿಸಿದೆ ಹಾಗೂ ಈ ಘಟನೆಗೆ ಸಂಬಂಧಿಸಿದ ವರದಿಯನ್ನು ಆದಷ್ಟು ಬೇಗ ಸಲ್ಲಿಸುವಂತೆ ಉತ್ತರಪ್ರದೇಶ ಸರಕಾರಕ್ಕೆ ಸೂಚಿಸಿದೆ.
ಸಾಧನಾ ಟಿವಿಯ ಸ್ಥಳೀಯ ವರದಿಗಾರ ಹಾಗೂ ಲಖಿಂಪುರ ಖೇರಿ ಜಿಲ್ಲೆಯ ನಿಘಾಸನ್ ಪ್ರದೇಶದ ನಿವಾಸಿ ರಾಮನ್ ಕಶ್ಯಪ್ (30) ಅವರು ರೈತರ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ಸಂದರ್ಭ ಮೃತಪಟ್ಟಿದ್ದರು. ನಾವು ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸುತ್ತೇವೆ. ಘಟನೆ ಕುರಿತ ವರದಿಯನ್ನು ಆದಷ್ಟು ಬೇಗ ಸಲ್ಲಿಸುವಂತೆ ಉತ್ತರಪ್ರದೇಶ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿ ಮೂಲಕ ಉತ್ತರಪ್ರದೇಶ ಸರಕಾರಕ್ಕೆ ನಿರ್ದೇಶಿಸಿದ್ದೇವೆ ಎಂದು ಹೇಳಿಕೆ ತಿಳಿಸಿದೆ. ಕಶ್ಯಪ್ ಅವರ ಹತ್ಯೆಗೆ ಭಾರತೀಯ ಪತ್ರಿಕಾ ಮಂಡಳಿಯ ಅಧ್ಯಕ್ಷ ಚಂದ್ರವೌಳಿ ಕುಮಾರ್ ಪ್ರಸಾದ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
Next Story





