ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಸದಸ್ಯರ ನೇಮಕ; ರಾಜ್ಯದ ನಾಯಕರಿಗೆ ಸ್ಥಾನ

ಬೆಂಗಳೂರು, ಅ.7: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಸದಸ್ಯರು, ವಿಶೇಷ ಆಹ್ವಾನಿತರು, ಖಾಯಂ ಆಹ್ವಾನಿತರನ್ನು ನೇಮಿಸಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.
ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಸದಸ್ಯರಾಗಿ ಕರ್ನಾಟಕದಿಂದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ನೇಮಿಸಲಾಗಿದೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ವಿಶೇಷ ಆಹ್ವಾನಿತರಾಗಿ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್, ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್, ಬಿ.ಎಸ್. ಯಡಿಯೂರಪ್ಪ, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಗೋವಿಂದ ಕಾರಜೋಳ, ಡಾ. ಸಿ.ಎನ್.ಅಶ್ವತ್ಥನಾರಾಯಣ್, ಕೋಟ ಶ್ರೀನಿವಾಸ ಪೂಜಾರಿ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಆಹ್ವಾನಿತರಾಗಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





