ಮಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್

ಮಂಗಳೂರು, ಅ.7: ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ರಾಮನಾಥ ಕೋವಿಂದ ಮೈಸೂರಿನಿಂದ ಗುರುವಾರ ಸಂಜೆ ಹೊರಟು ಸಂಜೆ 6.45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ವಿಮಾನ ನಿಲ್ದಾಣದಿಂದ 7:15ಕ್ಕೆ ಹೊರಟ ರಾಷ್ಟ್ರಪತಿ 7:25ಕ್ಕೆ ಮಂಗಳೂರಿನ ಸರ್ಕ್ಯೂಟ್ ಹೌಸ್‌ಗೆ ಆಗಮಿಸಿದ್ದು, ಇಂದು ರಾತ್ರಿ ವಾಸ್ತವ್ಯ ಮಾಡಲಿದ್ದಾರೆ.
ಅ.8ರಂದು ಬೆಳಗ್ಗೆ 10:30ಕ್ಕೆ ಮಂಗಳೂರಿನಿಂದ ವಿಮಾನ ನಿಲ್ದಾಣಕ್ಕೆ, ಅಲ್ಲಿಂದ 10:55ಕ್ಕೆ ಶೃಂಗೇರಿ ಹೆಲಿಪ್ಯಾಡ್‌ಗೆ ಪ್ರಯಾಣಿಸಲಿದ್ದಾರೆ. ಶೃಂಗೇರಿಯಲ್ಲಿ ಕಾರ್ಯಕ್ರಮ ಮುಗಿಸಿ ಸಂಜೆ 4.20ಕ್ಕೆ ಹೊರಟು ಮಂಗಳೂರಿಗೆ 4.55ಕ್ಕೆ ತಲಪುವರು. ಮಂಗಳೂರಿನಿಂದ ದೆಹಲಿಗೆ ಸಂಜೆ 5.10ಕ್ಕೆ ತೆರಳಲಿದ್ದಾರೆ. ರಾಷ್ಟ್ರಪತಿ ಅವರೊಂದಿಗೆ ಪತ್ನಿ ಹಾಗೂ ಪುತ್ರಿ ಕೂಡ ಆಗಮಿಸಿದ್ದಾರೆ.
Next Story





