Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂಬರುವ ದಿನಗಳಲ್ಲಿ ಅಂತರಾಷ್ಟ್ರೀಯ...

ಮುಂಬರುವ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮೈಸೂರು ದಸರಾ ಸರ್ಕಿಟ್ ಆರಂಭ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ7 Oct 2021 7:25 PM IST
share
ಮುಂಬರುವ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮೈಸೂರು ದಸರಾ ಸರ್ಕಿಟ್ ಆರಂಭ: ಸಿಎಂ ಬೊಮ್ಮಾಯಿ

ಮೈಸೂರು,ಅ.7: ಮುಂಬರುವ ದಿನಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮೈಸೂರು ದಸರಾ ಸರ್ಕಿಟ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತಿ ತಿಳಿಸಿದರು.

ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಗುರುವಾರ  ವಿಶ್ವವಿಖ್ಯಾತ 411ನೇ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯಲ್ಲಿ ಭಾಗವಹಿಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ದಸರಾ ಟೂರ್ ಪ್ಯಾಕೇಜ್ ಮಾಡುವಂತೆ ಸೂಚಿಸಿದ್ದಾರೆ. ಇದನ್ನು ಮಾಡಬೇಕು ಎಂದು ನಾವು ಅಂದುಕೊಂಡಿದ್ದೆವು. ಮುಂಬರುವ ದಿನಗಳಲ್ಲಿ ಪ್ರವಾಸೋದ್ಯಮ ಸೇರಿದಂತೆ ಪ್ರಸಿದ್ದ ಸಂಸ್ಥೆ, ವ್ಯಕ್ತಿಗಳೊಂದಿಗೆ ಚರ್ಚಿಸಿ ಇದರ ಬಗ್ಗೆ ರೂಪಿಸಿ  ಅಂತರಾಷ್ಟ್ರೀಯ ಮಟ್ಟದಲ್ಲಿ ದಸರಾ ಸರ್ಕಿಟ್ ಮಾಡಲಾಗುವುದು ಎಂದು ಹೇಳಿದರು.

ವಿಶ್ವದ ವಿವಿಧ ದೇಶಗಳು ಹಬ್ಬಗಳನ್ನು ಆಚರಿಸುವ ವೇಳೆ ವಿಶೇಷ ಟೂರಿಸಂ ಸರ್ಕಿಟ್ ಮಾಡಿ ಬಹಳ ಪ್ರಚಾರ ಕೊಟ್ಟು ಜನರನ್ನು ಆಕರ್ಷಿಸುತ್ತಿದ್ದಾರೆ. ಅದೇ ಮಾದರಿಯಲ್ಲಿ ಕರ್ನಾಟಕವನ್ನು ಕೊಂಡೊಯ್ಯುವ ಕೆಲಸವನ್ನು ಮಾಡಲಾಗುವುದು ಎಂದು ಹೇಳಿದರು.

ದಸರಾ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಆದರೆ, ಕೋವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ದಸರಾ ವೈಭವದ ಕಳೆ ಸ್ವಲ್ಪ ಕಳೆಗುಂದಿದೆ. ಕೊರೋನಾ ನಿಯಂತ್ರಣಕ್ಕೆ ಬಂದರೆ ಮುಂದಿನ ದಸರಾವನ್ನು ಅತ್ಯಂತ ಸಂಭ್ರಮ ಮತ್ತು ವಿಜೃಂಭಣೆಯಿಂದ ಆಚರಣೆ ಮಾಡಲಾಗುವುದು ಎಂದು ಹೇಳಿದರು.

ಪ್ರತಿ ಮನೆಯಲ್ಲೂ ಸಂಭ್ರಮ, ಸಡಗರ ತುಂಬಿರಬೇಕಾದರೆ ಸುಭೀಕ್ಷವಾದ ನಾಡು ಕಟ್ಟುವುದು ನಮ್ಮೆಲ್ಲರ ಗುರಿ. ಕೊರೋನ ಸಾಂಕ್ರಾಮಿಕ ನಾಡಿನಿಂದ ದೂರಾಗಲಿ, ನಮ್ಮ ಜನತೆಗೆ ಸುಖ, ಶಾಂತಿ, ನೆಮ್ಮದಿಯಿಂದ ಜೀವನ ನಡೆಸುವಂತಾಗಲಿ ಎಂದು ಪ್ರಾರ್ಥಿಸಿದರು.

ಈ ನಾಡಹಬ್ಬವನ್ನು ಉದ್ಘಾಟಿಸಿದವರೆಲ್ಲಾ ಸರ್ವಶ್ರೇಷ್ಠರು. ತಮ್ಮ ಬದುಕನ್ನು ಆದರ್ಶಪ್ರಾಯವಾಗಿ ನಡೆಸಿಕೊಂಡು ಹೋದವರು. ಹಲವಾರು ಮೌಲ್ಯ ಬಿತ್ತಿದವರು. ಅವರ ಬಗ್ಗೆ ಅಪಾರ ಗೌರವ ಇದೆ. ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಕೊಡುಗೆ ನೀಡಿದವರನ್ನು ನಾವು ಗುರುತಿಸಿ ಅವಕಾಶ  ಕಲ್ಪಿಸಿದ್ದೇವೆ ಎಂದು ಹೇಳಿದರು.

ಎಲ್ಲರನ್ನೂ ಎಲ್ಲವನ್ನೂ ಒಪ್ಪಿಕೊಳ್ಳುವ ಗುಣಸ್ವಭಾವ ನಮ್ಮ ಕನ್ನಡ ನಾಡಿನ ಜನರದ್ದು, ಸಜ್ಜನ, ಪ್ರಾಮಾಣಿಕ, ಜನಸೇವೆ ಮಾಡಿದ ಎಸ್.ಎಂ.ಕೃಷ್ಣ ಅವರನ್ನು ನಾಡಿನ ಜನತೆ ಅಪ್ಪಿ, ಒಪ್ಪಿಕೊಳ್ಳೂತ್ತಾರೆಂಬ ವಿಶ್ವಾಸ ನನಗಿತ್ತು. ನನ್ನ ವಿಶ್ವಾಸಕ್ಕೆ ಮೀರಿ ಇಡೀ ಕನ್ನಡ ಲೋಕ ಅತ್ಯಂತ ಆತ್ಮೀಯವಾಗಿ ಎಸ್.ಎಂ.ಕೃಷ್ಣ ಅವರ ದಸರಾ ಉದ್ಘಾಟನೆಯನ್ನು ಗೌರವಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮನುಷ್ಯನಿಗೆ ಅವಕಾಶಗಳು ಸಿಕ್ಕಾಗ ಅವರ ಚಿತ್ತ, ಚಿಂತನೆ ಏನು ಎಂಬುದು ತಿಳಿಯುತ್ತದೆ. ಮುಖ್ಯಮಂತ್ರಿಯಾದಾಗ ಎಸ್.ಎಂ.ಕೃಷ್ಣ ಅವರು ತೆಗೆದುಕೊಂಡ ನಿರ್ಣಯಗಳು ಸ್ಮರಣೀಯ, ಎಸ್.ಎಂ.ಕೃಷ್ಣ ಅವರನ್ನು ಹತ್ತಿರದಿಂದ ಕಂಡಿದ್ದೇನೆ. ನಮ್ಮ ತಂದೆಯವರೊಂದಿಗೆ  ಒಡನಾಟ ಹೊಂದಿದ್ದರು. ಆಡಳಿತದ ಅಲೆಯ ವಿರುದ್ಧ ಬಂದವರು, ಅವರು ಸಿಎಂ ಆದಾಗ ವಿರೋಧ ಪಕ್ಷದಲ್ಲಿದ್ದ ನಾನು ಕೆಲಸ ಮಾಡಿದ್ದೇನೆ. ಅವರ ಸೌಜನ್ಯ ಹಾಗೂ ಪ್ರಜಾಪ್ರಭುತ್ವದಂತೆಯೇ ಎಲ್ಲರನ್ನೂ ನಡೆಸಿಕೊಳ್ಳುವ ರೀತಿ ಮೆಚ್ಚುವಂತಹದು ಎಂದು ಹೇಳಿದರು.

ಮೈಸೂರು: ಯಶಸ್ವಿ ಯೋಜನೆ ಜಾರಿಗೆ ತರಲು ಚಿಂತಿಸಲಾಗಿದ್ದು,ರಾಜ್ಯದ ಆರ್ಥಿಕ ಪರಿಸ್ಥಿತಿ ಗಮನಿಸಿ ಮುಂದಿನ ದಿನಗಳಲ್ಲಿ ಯಶಸ್ವಿನಿ ಯೋಜನೆ ಜಾರಿಗೆ ತರಲಾಗುವುದು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಯಶಸ್ವಿನಿ ಯೋಜನೆ ಸಾಕಷ್ಟು ಬಡವರು, ರೈತರು ಸಹಕಾರಿ ಕ್ಷೇತ್ರದಲ್ಲಿರುವವರಿಗೆ ಅನುಕೂಲವಾಗಿತ್ತು. ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದಾಗ ಈ ಯೋಜನೆ ಜಾರಿಗೆ ತಂದಿದ್ದರು, ಸದ್ಯ ಅದು ನಿಂತು ಹೋಗಿದ್ದು, ಈ ಯೋಜನೆ ಪುನರಾರಂಭಿಸಲು ರೈತರು ನಮ್ಮಲ್ಲಿ ಮನವಿ ಮಾಡುತ್ತಿದ್ದಾರೆ. ಈಗಾಗಲೇ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಜೊತೆ ಎರಡು ಬಾರಿ ಚರ್ಚಿಸಿದ್ದೇನೆ. ಆರ್ಥಿಕ ಕ್ಷೇತ್ರದಲ್ಲಿ ಸುಧಾರಣೆ ಕಂಡರೆ ಯಶಸ್ವಿನಿ ಯೋಜನೆ ಜಾರಿ ಮಾಡುತ್ತೇನೆ ಎಂದು ಹೇಳಿದರು.

ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಶಾಲೆಯಲ್ಲಿ ಮಕ್ಕಳ ಮಧ್ಯಾಹ್ನದ ಬಿಡಿಯೂಟ ಯೋಜನೆ ಜಾರಿಗೆ ತಂದು ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ಐಟಿ-ಬಿಟಿಗೆ ಬಹಳ ಪ್ರೋತ್ಸಾಹ ಕೊಟ್ಟ ಕಾರಣ ಅಂತಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ವಿಶ್ವದ ಗಮನ ಸೆಳೆದಿದೆ ಎಂದು ಹೇಳಿದರು.

ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಮೈಸೂರಿನಲ್ಲಿ ನೀರಾವರಿ ವ್ಯವಸ್ಥೆ ಕುರಿತು ಗಮನಿಸಲು ಬಂದಿದ್ದೆ. ಕೆಆರ್‍ಎಸ್ ಅಣೆಕಟ್ಟು ಗೇಟ್‍ಗಳ ಬಳಿ ರಂಧ್ರಗಳು ಬಿದ್ದು ನೀರು ಹರಿದು ಹೋಗುತ್ತಿತ್ತು. ಅದನ್ನು ಗಂಭೀರವಾಗಿ ಪರಿಗಣಿಸಿ, 16 ಗೇಟ್‍ಗಳನ್ನು ಸಂಪೂರ್ಣ ಹೊಸದು ಮಾಡಿ ಕೇವಲ ಒಂದು ಬಟನ್ ಒತ್ತಿದರೆ ಮೇಲಕ್ಕೆ ಬರುವಂತೆ ಮಾಡಿದೆವು ಎಂದು ನೆನಪು ಮಾಡಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X