ಅತಿಥಿ ಉಪನ್ಯಾಸಕರನ್ನು ಮುಂದುವರಿಸುವಂತೆ ಆದೇಶ

ಸಾಂದರ್ಭಿಕ ಚಿತ್ರ
ಬೆಂಗಳೂರು, ಅ.7: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೂ ಅನ್ವಯಿಸುವಂತೆ ಈಗಾಗಲೇ 2020-21 ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದವರನ್ನೇ ಪುನಃ ಒಂದು ವರ್ಷಕ್ಕೆ ನೇಮಕ ಮಾಡಿಕೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ್ ಆದೇಶಿಸಿದ್ದಾರೆ.
ಕೋವಿಡ್ ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ವಿಷಮ ಪರಿಸ್ಥಿತಿಯನ್ನು ಪರಿಶೀಲಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
Next Story





