ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣ; ಆರೋಪಿ ಬಾಲಚಂದ್ರ ಭಟ್ ಜಾಮೀನು ಅರ್ಜಿ ತಿರಸ್ಕೃತ

ಕುಂದಾಪುರ, ಅ.7: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಆರೋಪಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್ ಎಂಬಾತನ ಜಾಮೀನು ಅರ್ಜಿಯನ್ನು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿ ಆದೇಶ ನೀಡಿದೆ.
ಕೊಲೆ ಸಂಚು ರೂಪಿಸಿದ ಆರೋಪದಡಿಯಲ್ಲಿ ಬಂಧಿತನಾಗಿರುವ ಬಾಲಚಂದ್ರ ಭಟ್ ಈ ಹಿಂದೆ ಪ್ರಕರಣದ ತನಿಖೆ ಸಂದರ್ಭದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಇದೀಗ ದೋಷಾರೋಪಣಾ ಪಟ್ಟಿ ಸಲ್ಲಿಕೆಯ ಬಳಿಕ ಮತ್ತೊಂದು ಬಾರಿ ಸಲ್ಲಿಸಿರುವ ಅರ್ಜಿಯನ್ನು ಕೂಡ ನ್ಯಾಯಾಧೀಶ ರವೀಂದ್ರ ಎಂ.ಜೋಷಿ ತಿರಸ್ಕರಿಸಿ ಆದೇಶ ನೀಡಿದ್ದಾರೆ.
ಪ್ರಾಸಿಕ್ಯೂಶನ್ ಪರ ಜಿಲ್ಲಾ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು.
ಜೂ.5ರಂದು ರಾತ್ರಿ ವೇಳೆ ಯಡಮೊಗೆ ಗ್ರಾಪಂ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಆತನ ತಂಡ ಉದಯ್ ಗಾಣಿಗ ಅವರ ಮೈಮೇಲೆ ಕಾರು ಹತ್ತಿಸಿ ಆ ಬಳಿಕ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





