ಅ.8ರಂದು ಉಡುಪಿ ಜಿಲ್ಲೆಯಲ್ಲಿ ಲಸಿಕಾ ಮಹಾಮೇಳ
ಉಡುಪಿ, ಅ.7: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್-19 ಲಸಿಕಾ ಮಹಾಮೇಳ ನಡೆಯಲಿದೆ. ಇದರಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆಯನ್ನು ಜಿಲ್ಲೆಯ ಎಲ್ಲಾ ಲಸಿಕಾ ಕೇಂದ್ರಗಳಲ್ಲೂ ಬೆಳಗ್ಗೆ 9 ರಿಂದ ಸಂಜೆ 4:30ರವರೆಗೆ ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಲಸಿಕೆ ನೀಡುವ ವೇಳೆ ಯಾವುದೇ ಲಸಿಕಾ ಕೇಂದ್ರದಲ್ಲಿ ಕೋವಿಡ್-19 ಮಾದರಿ ಪರೀಕ್ಷೆ (ಸ್ವಾಬ್ ಟೆಸ್ಟ್) ಇರುವುದಿಲ್ಲ. ನಾಳೆಗೆ ಜಿಲ್ಲೆಯಲ್ಲಿ ಒಟ್ಟು 50,000 ಡೋಸ್ ಲಸಿಕೆ ವಿತರಣೆಗೆ ಲಭ್ಯವಿದ್ದು, 18 ವರ್ಷ ಮೇಲ್ಪಟ್ಟವರು ಈವರೆಗೆ ಪಡೆಯದಿದ್ದರೆ ಮೊದಲ ಡೋಸ್ ಹಾಗೂ ಕೋವಿಶೀಲ್ಡ್ ಪ್ರಥಮ ಡೋಸ್ ಪಡೆದು 84 ದಿನ ಮೀರಿದವರಿಗೆ ಹಾಗೂ ಕೋವ್ಯಾಕ್ಸಿನ್ ಲಸಿಕೆ ಮೊದಲ ಡೋಸ್ ಲಸಿಕೆ ಪಡೆದು 28 ದಿನ ಮೀರಿದವರು ಎರಡನೇ ಡೋಸ್ ಪಡೆಯಬಹುದು.
ಲಸಿಕಾ ಕೇಂದ್ರದಲ್ಲಿ ಬೇಕಷ್ಟು ಲಸಿಕೆಯ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಲಸಿಕಾ ಕೇಂದ್ರದಲ್ಲಿ ಲಸಿಕೆ ಕೊರತೆಯಾದಲ್ಲಿ ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ:9663957222ನ್ನು ಸಂಪರ್ಕಿಸುವಂತೆ ಡಿಎಚ್‌ಒ ತಿಳಿಸಿದ್ದಾರೆ.





