ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಗೆ ಜಾಮೀನು ನಿರಾಕರಿಸಿದ ಮುಂಬೈ ನ್ಯಾಯಾಲಯ

ಮುಂಬೈ: ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. "ಈ ಜಾಮೀನು ಅರ್ಜಿಯನ್ನು ನಿರ್ವಹಿಸಲಾಗದು" ಎಂದ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು, ಡ್ರಗ್ಸ್ ಗಳನ್ನು ವಶಪಡಿಸಿಕೊಂಡಿರುವುದರಿಂದ ಇದನ್ನು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕೆ ಹೊರತು ಮ್ಯಾಜಿಸ್ಟೃೇಟ್ ನ್ಯಾಯಾಲಯದಲ್ಲಲ್ಲ ಎಂದು ನ್ಯಾಯಾಧೀಶರು ಹೇಳಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಮಾತ್ರವಲ್ಲದೇ ಸ್ನೇಹಿತರಾದ ಅರ್ಬಾಝ್ ಮರ್ಚೆಂಟ್ ಹಾಗೂ ಮುನ್ಮುನ್ ಧಮೇಚಾರವರ ಜಾಮೀನು ಅರ್ಜಿಯನ್ನು ನಿರಾಕರಿಸಲಾಗಿದೆ ಎಂದು ತಿಳಿದು ಬಂದಿದೆ.
Next Story