ಭಾರತ-ಚೀನಾ ಗಡಿ ಬಿಕ್ಕಟ್ಟು: ಮುಂದಿನ ವಾರ ಮಾತುಕತೆ
ಹೊಸದಿಲ್ಲಿ, ಅ. 8: ಗಡಿ ಬಿಕ್ಕಟ್ಟು ಪರಿಹರಿಸಲು ಭಾರತ ಹಾಗೂ ಚೀನಾದ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ಮುಂದಿನ ವಾರ ನಡೆಯಲಿದೆ. ‘‘ಮುಂದಿನ ನಾಲ್ಕೈದು ದಿನಗಳಲ್ಲಿ ಮಾತುಕತೆ ನಡೆಸಲು ಚಿಂತಿಸಲಾಗಿದೆ.
ದಿನಾಂಕವನ್ನು ಶೀಘ್ರ ಅಂತಿಮಗೊಳಿಸಲಾಗುವುದು’’ ಎಂದು ಸೇನಾ ಮೂಲಗಳು ತಿಳಿಸಿವೆ. ಭಾರತ-ಚೀನಾ ಮಾತುಕತೆ ಅಕ್ಟೋಬರ್ ಎರಡನೇ ವಾರದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಭಾರತೀಯ ಸೇನಾ ವರಿಷ್ಠ ಜನರಲ್ ಮನೋಜ್ ಮುಕುಂದ್ ನರವಣೆ ಅವರು ಸುದ್ದಿವಾಹಿನಿಯೊಂದಕ್ಕೆ ಇತ್ತೀಚೆಗೆ ತಿಳಿಸಿದ್ದರು.
Next Story