ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಕ್ಲೀನ್ ಇಂಡಿಯಾ ಕಾರ್ಯಕ್ರಮ

ಉಡುಪಿ, ಅ.9: ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಅಂಗವಾಗಿ ಉಡುಪಿ ನಗರಸಭೆ ಸಹಯೋಗದೊಂದಿಗೆ ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ತನ್ನ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಶನಿವಾರ ಸ್ವಚ್ಛಾ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು/ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಹಾಗೂ ಸಿಬ್ಬಂದಿಗಳು ಮತ್ತು ಸಮಿತಿಯ ಸದಸ್ಯರಾದ ಕಿರಣ್ ಕುಮಾರ್, ರಾಘವೇಂದ್ರ ನಾಯ್ಕ, ಲತಾ ಎಸ್. ಶೆಟ್ಟಿ ಹಾಗೂ ಪ್ರಾಂಗಣದಲ್ಲಿರುವ ವರ್ತಕರು ಹಾಗೂ ಕಾರ್ಯಕರ್ತರು ಸೇರಿ ಮಾರುಕಟ್ಟೆ ಪ್ರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು.
Next Story





