ಪದವಿಪೂರ್ವ ಕಾಲೇಜುಗಳಿಗೆ ದಸರಾ ರಜೆ ಘೋಷಣೆ
ಬೆಂಗಳೂರು, ಅ.9: ರಾಜ್ಯದ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಇಂದಿನಿಂದ(ಅ.10) ಅ.17ರವರೆಗೆ ದಸರಾ ರಜೆ ಘೋಷಿಸಲಾಗಿದೆ.
2021-22ನೆ ಶೈಕ್ಷಣಿಕ ಸಾಲಿನ ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಇತ್ತೀಚೆಗಷ್ಟೇ ಆರಂಭಗೊಂಡಿದ್ದು, ಸದ್ಯ ದಸರಾ ರಜೆಯನ್ನು ಘೋಷಿಸಲಾಗಿದೆ.
ಉಪನ್ಯಾಸಕರ ಸಂಘದ ಕೋರಿಕೆ ಹಿನ್ನೆಲೆಯಲ್ಲಿ ದಸರಾ ರಜಾ ಅವಧಿಯನ್ನು ಮಾರ್ಪಾಡು ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Next Story





