ಮಂಗಳೂರು: ಅ.10ರಂದು ದಸರಾ ಮಹೋತ್ಸವ ಉದ್ಘಾಟನೆ
ಮಂಗಳೂರು, ಅ.9: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವವನ್ನು ಅ.10ರಂದು ಸಂಜೆ 6ಗಂಟೆಗೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ.
ಮಂಗಳೂರು ದಸರಾ ಮಹೋತ್ಸವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅ.7ರಂದು ಸಂಭ್ರಮದ ಚಾಲನೆ ನೀಡಲಾಗಿತ್ತು. ಮೂರು ದಿನಗಳಲ್ಲಿ ಸಾವಿರಾರು ಮಂದಿ ದಸರಾ ಮಹೋತ್ಸವನ್ನು ವೀಕ್ಷಣೆ ಮಾಡಿದ್ದು, ಪ್ರತಿನಿತ್ಯ 5ಸಾವಿರಕ್ಕೂ ಅಧಿಕ ಮಂದಿಗೆ ಅನ್ನಪ್ರಸಾದ ಸ್ವೀಕರಿಸಿದ್ದಾರೆ. ಕುದ್ರೋಳಿ ಕ್ಷೇತ್ರದ ಅಭಿವೃದ್ಧಿ ರೂವಾರಿ ಜನಾರ್ದನ ಪೂಜಾರಿ ಸಂಜೆ ಕುದ್ರೋಳಿ ಕ್ಷೇತ್ರಕ್ಕೆ ಆಗಮಿಸಿ, ನಾನಾ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆಂದು ಕ್ಷೇತ್ರದ ಆಡಳಿತ ಮಂಡಳಿ ಪ್ರಕಟನೆ ತಿಳಿಸಿದೆ.
Next Story





