Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅವಿದ್ಯಾವಂತರು ದೇಶಕ್ಕೆ ಹೊರೆ, ಅವರು...

ಅವಿದ್ಯಾವಂತರು ದೇಶಕ್ಕೆ ಹೊರೆ, ಅವರು ಯಾವತ್ತೂ ದೇಶದ ಉತ್ತಮ ನಾಗರಿಕರಾಗಲು ಸಾಧ್ಯವಿಲ್ಲ: ಅಮಿತ್‌ ಶಾ

ವಾರ್ತಾಭಾರತಿವಾರ್ತಾಭಾರತಿ11 Oct 2021 12:54 PM IST
share
ಅವಿದ್ಯಾವಂತರು ದೇಶಕ್ಕೆ ಹೊರೆ, ಅವರು ಯಾವತ್ತೂ ದೇಶದ ಉತ್ತಮ ನಾಗರಿಕರಾಗಲು ಸಾಧ್ಯವಿಲ್ಲ: ಅಮಿತ್‌ ಶಾ

ಹೊಸದಿಲ್ಲಿ: ಅಶಿಕ್ಷಿತ ಜನರು ದೇಶಕ್ಕೆ  ಒಂದು ಹೊರೆಯಾಗಿದ್ದಾರೆ ಹಾಗೂ ಅಶಿಕ್ಷಿತರು ಯಾವತ್ತೂ ಭಾರತದ ಉತ್ತಮ ನಾಗರಿಕರಾಗಿರಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಗುಜರಾತ್ ಸೀಎಂ ಆಗಿ ಹಾಗೂ ನಂತರ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರದಲ್ಲಿ 20 ವರ್ಷ ಪೂರೈಸಿದ ಸಂದರ್ಭ ಸಂಸದ್ ಟಿವಿ ಜತೆಗಿನ ಸಂದರ್ಶನದಲ್ಲಿ ಮಾತನಾಡಿದ ಶಾ, ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ಹಾಲಿ ಸರಕಾರ ಹೇಗೆ ಶ್ರಮಿಸುತ್ತಿದೆ ಎಂದು ವಿವರಿಸುವ ಸಂದರ್ಭ ಮೇಲಿನ ಮಾತುಗಳನ್ನಾಡಿದ್ದಾರೆ. "ಒಬ್ಬ ಅಶಿಕ್ಷಿತ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ಪ್ರದತ್ತವಾದ ಹಕ್ಕುಗಳ ಬಗ್ಗೆ ಹಾಗೂ ಆತನಿಂದ ನಿರೀಕ್ಷಿತ ಕರ್ತವ್ಯಗಳ ಬಗ್ಗೆ ತಿಳಿದಿಲ್ಲ. ಇಂತಹ ವ್ಯಕ್ತಿ ಹೇಗೆ ಉತ್ತಮ ನಾಗರಿಕನಾಗಲು ಸಾಧ್ಯ,?" ಎಂದು ಪ್ರಶ್ನಿಸಿದರು.

"ಆ ಸಮಯ (ನರೇಂದ್ರ ಮೋದಿ ಗುಜರಾತ್ ಸೀಎಂ ಆಗಿದ್ದಾಗ) ಶಿಕ್ಷಣವನ್ನು ಅರ್ಧದಲ್ಲಿಯೇ ಕೈಬಿಡುವ ಸಮಸ್ಯೆ ದೊಡ್ಡದಾಗಿತ್ತು. ಅವರು  ದಾಖಲಾತಿ ಅಭಿಯಾನವನ್ನು ಹಬ್ಬದಂತೆ ಮಾಡಿ ಅದನ್ನು ಶೇ100ರಷ್ಟು ಸಾಧಿಸಿದರು" ಎಂದು ಶಾ ಹೇಳಿದರಲ್ಲದೆ ಪ್ರಧಾನಿ ನರೇಂದ್ರ ಮೋದಿಯನ್ನು "ಒಬ್ಬ ಪ್ರಜಾಪ್ರಭುತ್ವವಾದಿ ನಾಯಕ" ಎಂದು ಬಣ್ಣಿಸಿದರು. 

ಮೋದಿ ಓರ್ವ ಸವಾಧಿಕಾರಿ ನಾಯಕ ಎಂಬ ಆರೋಪಗಳನ್ನು ನಿರಾಕರಿಸಿದ ಶಾ, "ನಾನು ಮೋದಿ ಅವರ ಜತೆಗೆ ನಿಕಟವಾಗಿ ಕೆಲಸ ಮಾಡಿದ್ದೇನೆ ಹಾಗೂ ಅವರ ಕಾರ್ಯಶೈಲಿ ತಿಳಿದಿದ್ದೇನೆ. ಅವರು ಅತ್ಯಂತ ಸಹನೆಯಿಂದ  ಆಲಿಸುತ್ತಾರೆ. ಯಾವುದೇ ವಿಚಾರವಿರಲಿ ಎಲ್ಲರ ಮಾತುಗಳನ್ನು ಆಲಿಸುತ್ತಾರೆ ಆದರೆ ತಾವು ಕಡಿಮೆ ಮಾತನಾಡುತ್ತಾರೆ, ನಂತರ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ" ಎಂದರು.

"ತಾವು ಅಧಿಕಾರದಲ್ಲಿರುವುದು ದೇಶದಲ್ಲಿ ಬದಲಾವಣೆ ತರಲು ಕೇವಲ ಸರಕಾರ ನಡೆಸಲು ಅಲ್ಲ ಎಂದು ಮೋದಿ ನಂಬಿದ್ದಾರೆ. ಇದೇ ಕಾರಣದಿಂದ ಅವರು  ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ" ಎಂದು ಶಾ ಹೇಳಿದರು..

share
ವಾರ್ತಾಭಾರತಿ
ವಾರ್ತಾಭಾರತಿ
Next Story
X