ಲಕ್ನೋಗೆ ಬರುವಂತೆ ಕೇಂದ್ರ ಸಚಿವ ಅಜಯ್ ಮಿಶ್ರಾಗೆ ಸಮನ್ಸ್ ನೀಡಿದ ಉತ್ತರಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್

ಅಜಯ್ ಮಿಶ್ರಾ
ಹೊಸದಿಲ್ಲಿ: ಉತ್ತರ ಪ್ರದೇಶ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಅವರು ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರಿಗೆ ಲಕ್ನೋಗೆ ಬರುವಂತೆ ಸಮನ್ಸ್ ನೀಡಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ಸಂಜೆಯೊಳಗೆ ಸಿಂಗ್ ಅವರನ್ನು ಭೇಟಿ ಮಾಡುವಂತೆ ಮಿಶ್ರಾ ಅವರಿಗೆ ಸೂಚಿಸಲಾಗಿದೆ. ಅಕ್ಟೋಬರ್ 3 ರ ಘಟನೆಯ ನಂತರ ಮಿಶ್ರಾ ಇಲ್ಲಿಯವರೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರನ್ನು ಭೇಟಿ ಮಾಡುವುದನ್ನು ತಪ್ಪಿಸಿದ್ದಾರೆ ಎಂದು IANS ವರದಿ ಮಾಡಿದೆ.
ಘಟನೆಯ ಬಗ್ಗೆ ತನ್ನ ವಿಷಾದವನ್ನು ವ್ಯಕ್ತಪಡಿಸಲು ನಿರಾಕರಿಸಿರುವ ಕೇಂದ್ರ ಸಚಿವ ಮಿಶ್ರಾ ಅವರೊಂದಿಗೆ ಪಕ್ಷದ ಹೈಕಮಾಂಡ್ ಅಸಮಾಧಾನಗೊಂಡಿದೆ ಎಂದು ಐಎಎನ್ಎಸ್ ವರದಿ ಮಾಡಿದೆ.
Next Story





