Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಹತ್ಯೆ ಪ್ರಕರಣ: ಕೇಂದ್ರ ಸಚಿವ ಅಜಯ್...

ರೈತರ ಹತ್ಯೆ ಪ್ರಕರಣ: ಕೇಂದ್ರ ಸಚಿವ ಅಜಯ್ ಮಿಶ‍್ರಾ ವಜಾಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ11 Oct 2021 6:47 PM IST
share
ರೈತರ ಹತ್ಯೆ ಪ್ರಕರಣ: ಕೇಂದ್ರ ಸಚಿವ ಅಜಯ್ ಮಿಶ‍್ರಾ ವಜಾಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ

ಬೆಂಗಳೂರು, ಅ 11;   ರೈತ ವಿರೋಧಿ ಕೃಷಿ ಕಾನೂನುಗಳು ಮತ್ತು ಬಿಜೆಪಿ ದುರಾಡಳಿತಕ್ಕೆ  ಬಲಿಯಾದ  ರೈತರ ಸ್ಮರಣಾರ್ಥ ನಗರದ ರೇಸ್ ಕೋರ್ಸ್ ನ ಕಾಂಗ್ರೆಸ್ ಭವನದ ಮುಂದೆ ರಾಜ್ಯ ಕಾಂಗ್ರೆಸ್ ಮುಖಂಡರು ಸೋಮವಾರ ಮೌನ ಪ್ರತಿಭಟನೆ ನಡೆಸಿದರು. ರೈತರನ್ನು ಹಾಡು ಹಗಲೇ ಕೊಂದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರೈತರ ಜೀವಕ್ಕೆ ಕಂಟಕವಾಗಿರುವ ಬಿಜೆಪಿ ಸರ್ಕಾರದ ಕೃಷಿ ಕಾನೂನುಗಳು ಹಾಗೂ ಅನ್ನದಾತರನ್ನು ಶೋಷಿಸುತ್ತಿರುವ ಧೋರಣೆ ವಿರುದ್ಧ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಕೆಪಿಸಿಸಿ ಮತ್ತು ಜೆಪಿವೈಸಿಸಿ ಯಿಂದ ಆಯೋಜಿಸಲಾದ ಮೌನ ಪ್ರತಿಭಟನೆಯಲ್ಲಿ

ಹುತಾತ್ಮರಾದ ರೈತರ ಬಗ್ಗೆ ಬಿಜೆಪಿ ನಾಯಕರಿಗೆ ಕರುಣೆ, ಕನಿಕರ, ಕಾಳಜಿ ಇಲ್ಲ ಎಂದು ಭಿತ್ತಿಚಿತ್ರಗಳ ಮೂಲಕ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ  ಅಜಯ್ ವಿಶ್ರಾ ಅವರನ್ನು ತಕ್ಷಣ ಸಂಪುಟದಿಂದ ವಜಾ ಮಾಡಬೇಕು ಹಾಗೂ ಹತ್ಯಾಕಾಂಡದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಒಕ್ಕೂರಲಿನಿಂದ ಒತ್ತಾಯಿಸಿದರು.

 ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಮಾತನಾಡಿ, ಉತ್ತರ ಪ್ರದೇಶದ ಲಖಿಂಪುರದಲ್ಲಿ ನಡೆದ ಘಟನೆ ಅಮಾನವೀಯವಾದದ್ದು. ಕೇಂದ್ರದ ಗೃಹ ಮಂತ್ರಿ ಮಗ ರೈತರ ಮೇಲೆ ವಾಹನ ಹರಿಸಿ ಹಾಡುಹಗಲೇ ಹತ್ಯೆ ಮಾಡಿದ್ದಾರೆ. ಆದರೆ ಕೊಲೆಗಡುಕರನ್ನು ಬಿಜೆಪಿ ಸರ್ಕಾರ ಮನೆಯ ಅತಿಥಿಗಳಂತೆ ನೋಡಿಕೊಳ್ಳುತ್ತಿದೆ. ಆರೋಪಿಗಳು ಶರಣಾಗುವವರೆಗೆ ಬಂಧಿಸುವ ಧೈರ್ಯ ತೋರಿಲ್ಲ. ಈ ದೇಶ ಯಾವ ಕಡೆಗೆ ಸಾಗುತ್ತಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದರು.

ಪ್ರಧಾನಿ ತಮ್ಮ ಹೆಸರನ್ನು ನರೇಂದ್ರ ಮೋದಿ ಬದಲು ಮೌನೇಂದ್ರ ಮೋದಿ ಎಂದು ಬದಲಾಯಿಸಿಕೊಂಡರೆ ಉತ್ತಮ. ಕೋವಿಡ್ ಸಂಧರ್ಭದಲ್ಲಿ ಸಾಕಷ್ಟು ಜನ ಮೃತಪಟ್ಟರು. ಅದರ ಬಗ್ಗೆ ಬಿಜೆಪಿ ಧ್ವನಿ ಎತ್ತಲಿಲ್ಲ. ರೈತರ ಹತ್ಯೆಯಾಗಿದೆ, ಆಗಲೂ ಧ್ವನಿಯೆತ್ತಿಲ್ಲ. ಪ್ರಧಾನಿ ಮೋದಿಯಿಂದ ರೈತರಿಗೂ ನ್ಯಾಯ ಸಿಕ್ಕಿಲ್ಲ. ಸಾಮಾನ್ಯ ಜನರಿಗೂ ನ್ಯಾಯ ದೊರೆತಿಲ್ಲ ಎಂದರು.

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಬಿ.ವಿ. ಮಾತನಾಡಿ, ಐದು ಮಂದಿ ರೈತರು ಮತ್ತು ಒಬ್ಬ ಪತ್ರಕರ್ತರು ಮೃತಪಟ್ಟಿದ್ದು, ಸರ್ಕಾರ ಏನೂ ಆಗಿಯೇ ಇಲ್ಲ ಎನ್ನುವಂತೆ ವರ್ತಿಸುತ್ತಿದೆ. ಇ‍ಷ್ಟೆಲ್ಲಾ ಆದರೂ ಸರ್ಕಾರ ನಿದ್ರೆ ಮಾಡುವಂತೆ ನಟಿಸುತ್ತಿದ್ದು, ಇವರನ್ನು ಆನೆ ಮೂಲಕವೂ ಎಬ್ಬಿಸಲು ಸಾಧ್ಯವಿಲ್ಲ. ಕೊಲೆಗಡುಕರಿಗೆ ಸರ್ಕಾರ ರಾಜ ಮರ್ಯಾದೆ ನೀಡುತ್ತಿದೆ ಎಂದು ಆರೋಪಿಸಿದರು.

ಅಮಾನವೀಯವಾಗಿ ರೈತರನ್ನು ಹತ್ಯೆ ಮಾಡಿರುವ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಟ್ಟು, ಆತನ ಮಗನ ಜತೆ ಶಾಮೀಲಾಗಿರುವ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ, ಬಂಧಿಸಬೇಕು. ಈ ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ. ನಾವು ಜೈಲ್ ಬರೋ ಚಳವಳಿ ನಡೆಸುತ್ತೇವೆ. ಸ್ವಾತಂತ್ರ್ಯಪೂರ್ವದಿಂದಲೂ ನಾವು ಹೋರಾಟ, ಜೈಲು ವಾಸ ಅನುಭವಿಸಿ ಅನುಭವ ಹೊಂದಿದ್ದೇವೆ. ರಾಜೀವ್ ಗಾಂಧಿ, ಇಂದಿರಾಗಾಂಧಿ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಇಂತಹ ಕುಟುಂಬದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರನ್ನು ಹೆದರಿಸಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಹೇಳಿದರು.

ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ರೈತವಿರೋಧಿಯಾಗಿದ್ದು, ರೈತರ ವಿಚಾರದಲ್ಲಿ ನೀತಿ, ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ಒಂದೂವರೆ ವರ್ಷದಿಂದಲೂ ಸಹಸ್ರಾರು ರೈತರು ದೆಹಲಿ ಸುತ್ತಮುತ್ತ ಹೋರಾಟ ಮಾಡುತ್ತಿದ್ದು, ಹಲವಾರು ಮಂದಿ ರೈತರು ಜೀವ ಕಳೆದುಕೊಂಡಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಕ್ತ ಬೆಲೆ ತೆರಬೇಕು. ಕೇಂದ್ರದ ವಿರುದ್ಧ ಹೋರಾಟ ಮಾಡುತ್ತಿದ್ದವರನ್ನು ಅಮಾನವೀಯವಾಗಿ ಕೊಂದಿದ್ದು, ರೈತಪರವಾದ ನಮ್ಮ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದರು.

ಶಾಸಕರಾದ ರಿಜ್ವಾನ್ ಅರ್ಷದ್, ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವ ಎಚ್.ಎಂ. ರೇವಣ್ಣ, ಮಹಿಳಾ ಕಾಂಗ್ರೆಸ್ ಅಧ‍್ಯಕ್ಷೆ ಪುಷ್ಪಾ ಅಮರನಾಥ್, ಏಐಸಿಸಿ ಕಾರ್ಯದರ್ಶಿ ಸಂದೀಪ್  ರಾಜ್ಯ ಎನ್ ಎಸ್ ಯುಐ ಅಧ್ಯಕ್ಷ ಕೀರ್ತಿ ಗಣೇಶ್, ಬೆಂಗಳೂರು ಮೂರು ಜಿಲ್ಲಾಧ್ಯಕ್ಷರಾದ ರಾಜಕುಮಾರ್, ಕೃಷ್ಣಪ್ಪ, ಜಿ.ಶೇಖರ್ ಮತ್ತಿತರ ನಾಯಕರು ಪ್ರತಿಭಟನೆಯಲ್ಲಿ  ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X