Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದಲ್ಲಿಯೇ ಪ್ರಥಮ ಬಾರಿಗೆ ಉದ್ಯೋಗ ನೀತಿ...

ದೇಶದಲ್ಲಿಯೇ ಪ್ರಥಮ ಬಾರಿಗೆ ಉದ್ಯೋಗ ನೀತಿ ಜಾರಿ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ11 Oct 2021 6:54 PM IST
share
ದೇಶದಲ್ಲಿಯೇ ಪ್ರಥಮ ಬಾರಿಗೆ ಉದ್ಯೋಗ ನೀತಿ ಜಾರಿ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಅ. 11: `ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಉದ್ಯೋಗ ನೀತಿಯನ್ನು ರೂಪಿಸಲಾಗುವುದು. ಈ ನೀತಿಯ ಅಡಿ ಉದ್ಯೋಗ ಸೃಜನೆ ಆಧಾರದ ಮೇಲೆ ಹೆಚ್ಚು  ಪ್ರೋತ್ಸಾಹ ಸವಲತ್ತು ನೀಡಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸೋಮವಾರ ನಗರದ ಅರಮನೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಿರುವ `ಉದ್ಯಮಿಯಾಗು-ಉದ್ಯೋಗ ನೀಡು' ಕಾರ್ಯಾಗಾರದಲ್ಲಿ ಮಾತನಾಡಿದ ಅವರು, `ಉದ್ಯೋಗ ನೀತಿಯ ರಚನೆ ಕುರಿತು ಚಿಂತನೆ ನಡೆಸಲಾಗುತ್ತಿದೆ. ಸದ್ಯದಲ್ಲಿಯೇ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಗರಿಷ್ಠ ಉದ್ಯೋಗ ನೀಡುವ ಕೈಗಾರಿಕೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪ್ರೋತ್ಸಾಹಕಗಳನ್ನು ರಾಜ್ಯದಲ್ಲಿ ನೀಡಲಾಗುವುದು ಎಂದರು.

`ಕರ್ನಾಟಕ ಉದ್ಯಮಸ್ನೇಹಿ ರಾಜ್ಯ. ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ರಾಜ್ಯದಲ್ಲಿ ಸಾಧ್ಯವಾಗಿಸಿದೆ. ಉದ್ಯಮಗಳು ಸ್ಥಾಪನೆಯಾಗಲು ಸೂಕ್ತ ವಾತಾವರಣ ನಿರ್ಮಾಣ ಮಾಡಿ, ಅವಕಾಶಗಳನ್ನು ಕಲ್ಪಿಸಲಾಗಿದೆ. 180ಕ್ಕೂ ಹೆಚ್ಚು ಅಂತರರಾಷ್ಟ್ರೀಯ ಮಟ್ಟದ ಆರ್ ಎಂಡ್ ಡಿ ಸೆಕ್ಟರ್ ರಾಜ್ಯದಲ್ಲಿದೆ. ಬಯೋಟೆಕ್ನಾಲಜಿ, ಇಂಜಿನಿಯರಿಂಗ್, ಸ್ಪೇಸ್ ವಿಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳ ಆರ್ ಎಂಡ್ ಡಿ ಸೆಕ್ಟರ್ ಸಿಲಿಕಾನ್ ವ್ಯಾಲಿ ಬೆಂಗಳೂರಿನಲ್ಲಿದೆ. ಕೈಗಾರಿಕಾ ಅಭಿವೃದ್ಧಿ ಮತ್ತು ಇದರಿಂದ ಕೌಶಲ್ಯಭರಿತ ಮಾನವ ಸಂಪನ್ಮೂಲ ಬರಲು ಸಹಕಾರಿ. ಇದರ ಮುಖಾಂತರ ಹೊಸ ಉದ್ಯಮಗಳು ಬರುತ್ತವೆ' ಎಂದರು.

`ಸ್ಟಾರ್ಟ್ ಅಪ್ ನೀತಿ, ಆರ್ ಅಂಡ್ ಡಿ ಎಲ್ಲ ವಲಯಗಳಲ್ಲಿ ತರಲಾಗುತ್ತಿದೆ. ಶೇ.34ರಷ್ಟು 2ನೆ ಮತ್ತು 3ನೆ ಸ್ತರದ ನಗರಗಳಲ್ಲಿ ಪ್ರಾರಂಭಿಸಲಾಗಿದೆ. ಸ್ಟಾರ್ಟ್ ಅಪ್ ಪ್ರಾರಂಭಿಸಿದರೆ, 50ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡುವ ಏಕೈಕ ರಾಜ್ಯ ಕರ್ನಾಟಕ. ವಲಯವಾರು ತರಬೇತಿಯನ್ನು ನೀಡುವ ತೀರ್ಮಾನವನ್ನು ಕೈಗಾರಿಕಾ ಇಲಾಖೆ ಕೈಗೊಂಡಿದೆ. ಯುವಕರಲ್ಲಿ ಹೊಸ ಉತ್ಸಾಹ, ಚೈತನ್ಯ ಹಾಗೂ ವೃತ್ತಿ ಮಾರ್ಗದರ್ಶನ ನೀಡುವ ತುಂಬುವ ಕೆಲಸ ಮಾಡುತ್ತಿದ್ದು, ಯುವಜನರಲ್ಲಿ ಸಮಯ ಪ್ರಜ್ಞೆ, ಶ್ರಮ, ದುಡಿಮೆ ಇದ್ದರೆ ಮಾತ್ರ ಯಶಸ್ಸು ಸಾಧ್ಯ. ಯುವಕರು ಉದ್ಯಮವನ್ನು ಸ್ಥಾಪಿಸುವ ಸಂಕಲ್ಪವನ್ನು ಮಾಡಬೇಕು ಎಂದು ಕರೆ ನೀಡಿದರು.

`ಕೈಗಾರಿಕಾ ಅದಾಲತ್ ಆಯೋಜಿಸಲಾಗಿದೆ. ಉದ್ಯಮ ಸ್ಥಾಪನೆಗೆ ಸೂಕ್ತ ತಂತ್ರಜ್ಞಾನ, ಹಣಕಾಸಿನ ನೆರವನ್ನು ನೀಡಲಾಗುವುದು, ಎಸ್ಸಿ-ಎಸ್ಟಿ ಹಾಗೂ ಹಿಂದುಳಿದ ವರ್ಗಗಳೂ ಕೌಶಲ್ಯಾಭಿವೃದ್ಧಿ ತರಬೇತಿ ಪಡೆದು ಉದ್ಯಮಿಗಳಾಗಬೇಕು. ಮಹಿಳೆಯರು ದೇಶದ ಜಿಡಿಪಿಗೆ ಕೊಡುಗೆ ನೀಡುವಂತಾಗಬೇಕು ಎಂಬ ಆಶಯ ವ್ಯಕ್ತಪಡಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X