ಅ.13ರಂದು ಉಡುಪಿ ಗ್ರಾಮೀಣ ಬಂಟರ ಸಂಘದಿಂದ ಕನ್ವೆನ್ಷನ್ ಸೆಂಟರ್ -ಕೌಶಲ್ಯ ತರಬೇತಿ ಕೇಂದ್ರ ಉದ್ಘಾಟನೆ
ಉಡುಪಿ, ಅ.11: ಉಡುಪಿ ಗ್ರಾಮೀಣ ಬಂಟರ ಸಂಘದ ವತಿಯಿಂದ ಉಡುಪಿ ಕುಂತಳನಗರದಲ್ಲಿ ನಿರ್ಮಿಸಲಾಗಿರುವ ನೂತನ ಕನ್ವೆನ್ಷನ್ ಸೆಂಟರ್ ಹಾಗೂ ಕೌಶಲ್ಯ ತರಬೇತಿ ಕೇಂದ್ರದ ಉದ್ಘಾಟನೆಯು ಅ.13ರಂದು ಮಧ್ಯಾಹ್ನ 2ಗಂಟೆಗೆ ನಡೆಯಲಿದೆ.
ಆರು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಹಾಲ್ ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿರು ವರು. ಸಚಿವರಾದ ಶೋಭಾ ಕರಂದ್ಲಾಜೆ, ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್ ಮೊದಲಾದವರು ಭಾಗವಹಿಸಲಿರುವರು ಎಂದು ಸಂಘದ ಅಧ್ಯಕ್ಷ ಸಕಾರಾಮ ಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.
ಕೌಶಾಲ್ಯಾಭಿವೃದ್ಧಿ ತರಬೇತಿ ಕೇಂದ್ರವನ್ನು ನಿಟ್ಟೆ ವಿವಿಯ ಚಾನ್ಸಲರ್ ಎನ್. ವಿನಯ ಹೆಗ್ಡೆ, ಕನ್ವೆನ್ಶನ್ ಸೆಂಟರ್‌ನ್ನು ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಕೆ. ಪ್ರಕಾಶ್ ಶೆಟ್ಟಿ, ಡೈನಿಂಗ್ ಹಾಲ್‌ನ್ನು ಆಲ್‌ಕಾರ್ಗೊ ಲಾಜಿಸ್ಟಿಕ್ ಲಿ.ನ ಸ್ಥಾಪಕಾಧ್ಯಕ್ಷ ಶಶಿಕಿರಣ್ ಶೆಟ್ಟಿ, ಪಶ್ಚಿಮ ಪ್ರವೇಶ ದ್ವಾರವನ್ನು ಬೆಳ್ಳೆ ಸೀತಾರಾಮ ಶೆಟ್ಟಿ, ಸಂಘದ ಆಡಳಿತ ಕಚೇರಿಯನ್ನು ಮಾಹೆ ಸಹಕುಲಾಧಿಪತಿ ಡಾ.ಎಚ್. ಎಸ್.ಬಲ್ಲಾಳ್, ದಕ್ಷಿಣ ಪ್ರವೇಶದ್ವಾರವನ್ನು ಪ್ರಸಾದ್ ಕುಮಾರ್ ಶೆಟ್ಟಿ ಉದ್ಘಾಟಿಸಲಿರುವರು.
ಬಳಿಕ ಗ್ರಾಮೀಣ ಪ್ರದೇಶದಲ್ಲಿ ಕೌಶಲ್ಯ ತರಬೇತಿ ಕೇಂದ್ರದಿಂದ ಯುವಕರು, ಮಹಿಳೆಯರ ಮತ್ತು ರೈತರ ಸಬಲೀಕರಣದ ಕುರಿತು ಯಶಸ್ವಿ ಉದ್ಯಮಿಗಳ ಜೊತೆ ಮುಖ್ಯಮಂತ್ರಿಗಳು ಛಾಯ್ ಪೇ ಚರ್ಚೆ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಅಶೋಕ್ ಕುಮಾರ್ ಶೆಟ್ಟಿ, ಪದ್ಮನಾಭ ಹೆಗ್ಡೆ, ವಿಜಿತ್ ಶೆಟ್ಟಿ, ಗಿರೀಶ್ ಶೆಟ್ಟಿ, ಹರೀಶ್ ಶೆಟ್ಟಿ, ದಯಾನಂದ ಶೆಟ್ಟಿ, ವೈ.ರಮೇಶ್ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ಶೆಟ್ಟಿ, ದಯಾನಂದ ಶೆಟ್ಟಿ ಬೆಳ್ಳೆ ಉಸ್ಥಿತರಿದ್ದರು.







