ಅ.13: ಉಡುಪಿಗೆ ಸಿಎಂ ಬೊಮ್ಮಾಯಿ ಭೇಟಿ
ಮಂಗಳೂರು, ಅ.11: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅ.13ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಉಡುಪಿಗೆ ತೆರಳುವರು. ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮಂಗಳೂರಿಗೆ ಸಂಜೆ 5:30ಕ್ಕೆ ಆಗಮಿಸುವ ಅವರು, ಸಂಜೆ 6:55ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





