Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅ.14ರಿಂದ ನ.14: ‘ಯಕ್ಷ ಮೋಹಿನಿ’...

ಅ.14ರಿಂದ ನ.14: ‘ಯಕ್ಷ ಮೋಹಿನಿ’ ಕೋಳ್ಯೂರಿಗೆ 90ರ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ11 Oct 2021 9:35 PM IST
share
ಅ.14ರಿಂದ ನ.14: ‘ಯಕ್ಷ ಮೋಹಿನಿ’ ಕೋಳ್ಯೂರಿಗೆ 90ರ ಸಂಭ್ರಮ

ಉಡುಪಿ, ಅ.11: ಯಕ್ಷಗಾನರಂಗದಲ್ಲಿ ಸ್ತ್ರೀಪಾತ್ರಧಾರಿಯಾಗಿ ಶೃಂಗಾರ, ಕರುಣಾ, ವೀರರಸ ಸೇರಿದಂತೆ ಎಲ್ಲಾ ಪಾತ್ರಗಳನ್ನು ರಂಗದ ಮೇಲೆ ಸುಮಾರು ಏಳು ದಶಕಗಳ ಕಾಲ ನಿರ್ವಹಿಸಿದ ಕೋಳ್ಯೂರು ರಾಮಚಂದ್ರ ರಾಯರ 90ರ ಸಂಭ್ರಮವನ್ನು ಅ.14ರಿಂದ ನ.14ರವರೆಗೆ ಒಂದು ತಿಂಗಳ ಕಾಲ ಹಮ್ಮಿ ಕೊಳ್ಳಲಾಗಿದೆ ಎಂದು ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಳ್ಯೂರು ಎಂಬ ಪುಟ್ಟ ಊರನ್ನು ವಿಶ್ವವೇ ಗುರುತಿಸುವಂತೆ ಮಾಡಿದ ಕೋಳ್ಯೂರು ರಾಮಚಂದ್ರ ರಾಯರು, ಮೋಹಿನಿಯಂಥ ಶೃಂಗಾರ ಪಾತ್ರದಿಂದ ತೊಡಗಿ, ಚಂದ್ರಮತಿ, ದಮಯಂತಿಯಂಥ ಕರುಣರಸ, ಪ್ರಮೀಳೆ, ಶಶಿಪ್ರಭೆ ಯಂಥ ವೀರರಸದ ಪಾತ್ರಗಳೊಂದಿಗೆ ತುಳು ತಿಟ್ಟಿನಲ್ಲಿ ಬೊಮ್ಮಕ್ಕೆ, ನಾಗ್ವಕ್ಕೆಯಂಥ ಭಿನ್ನ ಮನೋಧರ್ಮದ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿ ಜನಮಾನಸದಲ್ಲಿ ಶಾಶ್ವತವಾಗಿ ನೆಲೆ ನಿಂತವರು ಎಂದು ಬಣ್ಣಿಸಿದರು.

ಇಂಥ ಕೋಳ್ಯೂರರಿಗೆ ಈಗ 90ರ ಹರೆಯ. ಈ ಸಂಭ್ರಮವನ್ನು ಕುಟುಂಬಿಕರು, ಯಕ್ಷಗಾನ ಕಲಾರಂಗ, ಶ್ರೀಕೃಷ್ಣ ಮಠ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮೂಲಕ ಸರಣಿ ಕಾರ್ಯಕ್ರಮದೊಂದಿಗೆ ಹಂಚಿಕೊಳ್ಳಲಿದ್ದಾರೆ ಎಂದರು.

ಅ.14ರಿಂದ ನ.14ರವರೆಗೆ ಒಂದು ತಿಂಗಳ ಪರ್ಯಾಂತ ಕಾರ್ಯಕ್ರಮ ನಡೆಯಲಿದೆ. ಅ.14ರಂದು ಧರ್ಮಸ್ಥಳದಲ್ಲಿ ಕಾರ್ಯಕ್ರಮ ಉದ್ಘಾಟನೆ ಗೊಳ್ಳಲಿದೆ. ಎಡನೀರು ಮಠಾಧೀಶರು ಅನುಗ್ರಹ ಸಂದೇಶ ನೀಡಲಿದ್ದಾರೆ. ನಂತರ ಆನ್‌ಲೈನ್ ಮೂಲಕ ಪ್ರತಿದಿನ ಒಬ್ಬೊಬ್ಬ ಮೇರು ಕಲಾವಿದರ ನೆನಪಿಗೆ ಕಾರ್ಯಕ್ರಮವನ್ನು ಸಮರ್ಪಿಸಲಾಗುತ್ತದೆ. ದಿನಕ್ಕೊಬ್ಬರಂತೆ ಕಲಾಪೋಷಕರು, ಮೇಳದ ಯಜಮಾನರು, ಕೋಳ್ಯೂರು ಅವರ ಒಡನಾಡಿ ಕಲಾವಿದರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಪ್ರತಿದಿನ ಕೋಳ್ಯೂರು ಮುಖ್ಯ ಭೂಮಿಕೆ ಯಲ್ಲಿರುವ ಆಖ್ಯಾನವನ್ನು ಪ್ರದರ್ಶಿಸಲಾಗುವುದು.

ನ.14ರಂದು ಬೆಳಗ್ಗೆ 9 ರಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಇಡೀ ದಿನ ಪರ್ಯಾಯ ಅದಮಾರು ಮಠಾಧೀಶ ಶ್ರೀ ಈಶಪ್ರಿಯತೀರ್ಥರು ಮತ್ತು ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥರ ಉಪಸ್ಥಿತಿಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಹಿರಿಯ ಕಲಾವಿದ ಪೆರ್ವೋಡಿ ನಾರಾಯಣ ಭಟ್ ಕಾರ್ಯಕ್ರಮ ಉದ್ಘಾಟಿಸಲಿದ್ದು ಅಂತಾರಾಷ್ಟ್ರೀಯ ಮಟ್ಟದ ಕಲಾವಿದರು ಸೇರಿದಂತೆ ಅನೇಕ ಹಿರಿಯ ಕಲಾವಿದರು ಇದರಲ್ಲಿ ಭಾಗವಹಿಸಲಿದ್ದಾರೆ. ಸುಮಾರು 90 ಜನ ಸ್ತ್ರೀ ವೇಷಧಾರಿಗಳನ್ನು ಕೋಳ್ಯೂರು ರಾಮಚಂದ್ರ ರಾಯರು ಗೌರವಿಸಲಿದ್ದಾರೆ ಎಂದು ಕಡೆಕಾರ್ ವಿವರಿಸಿದರು.

ಹಿರಿಯ ವಿದ್ವಾಂಸರಾದ ಲಕ್ಷ್ಮೀಶ ತೋಳ್ಪಾಡಿ, ಅರುವ ಕೊರಗಪ್ಪ ಶೆಟ್ಟಿ, ಎ.ಪಿ. ಮಾಲತಿ, ಮಂಟಪ ಪ್ರಭಾಕರ ಉಪಾಧ್ಯ, ಎಚ್.ಎಸ್. ಬಲ್ಲಾಳ್, ಪಿ. ಎಸ್.ಯಡಪಡಿತ್ತಾಯ, ಪದ್ಮಾ ಸುಬ್ರಹ್ಮಣ್ಯಂ, ಕಲಾಮಂಡಲಂ ಗೋಪಿ, ರಾಜ್ ಕೆ. ಶೆಟ್ಟಿ, ಪೆರುವೋಡಿ ನಾರಾಯಣ ಭಟ್ ಕಾಯರ್ಕ್ರಮದಲ್ಲಿ ಭಾಗವಹಿಸಲಿರುವರು.

ಹಿರಿಯ ವಿದ್ವಾಂಸರಾದ ಲಕ್ಷ್ಮೀಶ ತೋಳ್ಪಾಡಿ, ಅರುವ ಕೊರಗಪ್ಪ ಶೆಟ್ಟಿ, ಎ. ಪಿ. ಮಾಲತಿ, ಮಂಟಪ ಪ್ರಾಕರಉಪ್ಯಾ, ಎಚ್.ಎಸ್. ಬಲ್ಲಾಳ್, ಪಿ. ಎಸ್.ಯಡಪಡಿತ್ತಾಯ, ಪದ್ಮಾ ಸುಬ್ರಹ್ಮಣ್ಯಂ, ಕಲಾಮಂಡಲಂ ಗೋಪಿ, ರಾಜ್ ಕೆ. ಶೆಟ್ಟಿ, ಪೆರುವೋಡಿ ನಾರಾಯಣ ಟ್‌ಕಾರ್ಯಕ್ರಮದಲ್ಲಿಾಗವಹಿಸಲಿರುವರು. ಇದೇ ಸಂದರ್ಭದಲ್ಲಿ ಕೋಳ್ಯೂರ್‌ರ ಕುರಿತಾದ ಗ್ರಂಥ ಪ್ರಕಟಣೆಗೊಳ್ಳಲಿದೆ. ಕೊನೆಯಲ್ಲಿ ಕಥಕಳಿ-ಯಕ್ಷಗಾನ ಜುಗಲ್‌ಬಂದಿ ಕಲಾ ಕಾರ್ಯಕ್ರಮ ಪ್ರಸ್ತುತಗೊಳ್ಳಲಿದೆ. ಪ್ರತಿದಿನದ ಕಾರ್ಯಕ್ರಮಗಳು ಯೂ-ಟ್ಯೂಬ್ ಸ್ಟ್ರೀಮ್‌ನಲ್ಲಿ ಪ್ರಸಾರಗೊಳ್ಳಲಿದೆ ಎಂದು ಮುರಲಿ ಕಡೆಕಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಲಾರಂಗದ ಅಧ್ಯಕ್ಷ ಗಂಗಾಧರ ರಾವ್, ಎಸ್.ವಿ.ಭಟ್, ಬಿ.ಜಿ.ಶೆಟ್ಟಿ, ಪ್ರೊ.ಎಂ.ನಾರಾಯಣ ಹೆಗಡೆ, ಕೋಳ್ಯೂರು ಪುತ್ರ ಕೆ.ಶ್ರೀಧರ ರಾವ್, ಮೊಮ್ಮಗ ನಟರಾಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X