ಕಾರು ಢಿಕ್ಕಿ: ಸ್ಕೂಟರ್ ಸಹಸವಾರ ಮೃತ್ಯು
ಬ್ರಹ್ಮಾವರ, ಅ.12: ಕಾರೊಂದು ಸ್ಕ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸಹಸವಾರ ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಹೇರಾಯಿಬೆಟ್ಟು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅ.12ರಂದು ಬೆಳಗ್ಗೆ 8.45ರ ಸುಮಾರಿಗೆ ನಡೆದಿದೆ.
ಮೃತರನ್ನು ನಾಗರಾಜ ಎಂದು ಗುರುತಿಸಲಾಗಿದೆ. ಸ್ಕೂಟರ್ ಸವಾರ ಕೊಪ್ಪಳ ಜಿಲ್ಲೆಯ ಮಹಾತೆಂಶ ಬೆಳ್ಳಿ(41) ಎಂಬವರು ಗಾಯಗೊಂಡು ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿಯಿಂದ ಸಾಸ್ತಾನಕ್ಕೆ ಹೋಗುತ್ತಿದ್ದ ಸ್ಕೂಟರ್ಗೆ ಹಿಂದಿನಿಂದ ಬಂದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸವಾರರಿಬ್ಬರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ನಾಗರಾಜ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story