Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನಕ ಕೀರ್ತನ ಗಂಗೋತ್ರಿ: 21 ಗಾಯಕರಿಗೆ...

ಕನಕ ಕೀರ್ತನ ಗಂಗೋತ್ರಿ: 21 ಗಾಯಕರಿಗೆ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ12 Oct 2021 11:08 PM IST
share

ಮಂಗಳೂರು, ಅ.12: ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನ ಕೇಂದ್ರದಿಂದ ಇತ್ತೀಚೆಗೆ ನಡೆದ ‘ಕನಕ ಕೀರ್ತನ ಗಂಗೋತ್ರಿ’ ಕನಕದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮದಲ್ಲಿ ಏಳು ವಿಭಾಗಗಳಲ್ಲಿ ಭಾಗವಹಿಸಿದ 92 ಅಭ್ಯರ್ಥಿಗಳಲ್ಲಿ 21 ಗಾಯಕರನ್ನು ಕನಕ ಕೀರ್ತನ ಗಂಗೋತ್ರಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಸಾಮುದಾಯಿಕ ಪಾಲ್ಗೊಳ್ಳುವಿಕೆಯ ಆಶಯದ ಈ ಕಾರ್ಯಕ್ರಮದಲ್ಲಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು, ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಸಂಯೋಜಿತ ಹಾಗೂ ಸ್ವಾಯತ್ತ ಕಾಲೇಜುಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲಾ ವ್ಯಾಪ್ತಿಯ ರಾಜೀವ್‌ಗಾಂಧಿ ವೈದ್ಯಕೀಯ ಶಿಕ್ಷಣ, ವಿಶ್ವೇಶ್ವರಯ್ಯ ತಾಂತ್ರಿಕ ಶಿಕ್ಷಣ, ವಿಶ್ವವಿದ್ಯಾನಿಲಯ ಕಾಲೇಜುಗಳ ವಿದ್ಯಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿದ್ದರು.

ಪ್ರತಿ ವಿಭಾಗದಲ್ಲಿ ಮೂರು ಅತ್ಯುತ್ತಮ ಗಾಯಕರನ್ನು ಆಯ್ಕೆ ಮಾಡಲಾಗಿದ್ದು, ತಲಾ ಕನಕ ಪುರಸ್ಕಾರ ಸ್ಮರಣಿಕೆ, ಪ್ರಮಾಣಪತ್ರ ಮತ್ತು 2000 ರೂ. ನಗದನ್ನು ಡಿಸೆಂಬರ್‌ನಲ್ಲಿ ನಡೆಯುವ ‘ಕನಕ ಸ್ಮತಿ’ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ತಿಳಿಸಿದ್ದಾರೆ.

ಮೌಲ್ಯಮಾಪಕರಾಗಿ ಸಂಗೀತ ವಿದ್ವಾನ್ ನಾರಾಯಣ ಭಂಡಾರಿ, ಮುರಳೀಧರ ಕಾಮತ್, ಡಾ. ಬಾಲಕೃಷ್ಣ ಭಾರದ್ವಾಜ್, ಮಂಜುಳಾ ಜಿ. ರಾವ್ ಇರಾ, ಸುಮನ್ ಪಿ. ಮೂಡುಬಿದಿರೆ, ಶ್ರೀದೇವಿ ಕಲ್ಲಡ್ಕ ಭಾಗವಹಿಸಿದ್ದರು.

ಆಯ್ಕೆಯಾದ ಗಾಯಕರ ವಿವರ

ಪ್ರೌಢ ಶಾಲೆ ವಿಭಾಗ: ಕೊಣಾಜೆಯ ವಿಶ್ವಮಂಗಳ ಪ್ರೌಢಶಾಲೆ ವಿದ್ಯಾರ್ಥಿನಿ ಶ್ರೀರಕ್ಷಾ ಎಸ್.ಎಚ್. ಪೂಜಾರಿ, ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಸಮೀಪದ ಶ್ರೀರಾಮಕೃಷ್ಣ ಪ್ರೌಢಶಾಲೆಯ ಪ್ರತೀಕ್ಷ ಆರ್., ಸುರತ್ಕಲ್‌ನ ವಿದ್ಯಾದಾಯಿನಿ ಆಂಗ್ಲ ಮಾಧ್ಯಮ ಶಾಲೆಯ ಶ್ರೀಕರಿ.

ಪದವಿ ಪೂರ್ವ ವಿಭಾಗ: ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ಕಾಲೇಜಿನ ಅವನಿ ಎಸ್. ಭಟ್, ಮೂಡುಬಿದಿರೆ ಮಹಾವೀರ ಪ.ಪೂ. ಕಾಲೇಜಿನ ವೆಂಕಟೇಶ್ ಮಲ್ಯ, ರವಿಚಂದ್ರ.

ಪದವಿ ವಿಭಾಗ: ಮಂಗಳೂರು ಕೆನರಾ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿ ಆರ್. ಸುಧೀಕ್ಷ, ಪುತ್ತೂರು ಶ್ರೀವಿವೇಕಾನಂದ ಕಾಲೇಜಿನ ಬಿಸಿಎ ದ್ವಿತೀಯ ವರ್ಷದ ವಿಭಾಶ್ರೀ ಎಂ.ಎಸ್., ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಶರಣ್ಯ ಕೆ.ಎನ್.

ಸ್ನಾತಕೋತ್ತರ-ಸಂಶೋಧನ ವಿಭಾಗ: ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗದ ಶ್ರೀವಾಣಿ ಕಾಕುಂಜೆ, ಮಂಗಳೂರು ವಿಶ್ವವಿದ್ಯಾನಿಲಯದ ಕಂಪ್ಯೂಟರ್ ವಿಭಾಗದ ಚೈತ್ರಾ ಕೊಪ್ಪಳ, ಪುತ್ತೂರು ಶ್ರೀವಿವೇಕಾನಂದ ಕಾಲೇಜಿನ ಎಂ.ಕಾಂ. ಪ್ರಥಮ ವರ್ಷದ ರೂಪಾ.

ಬೋಧಕ ವಿಭಾಗ: ಮಣಿಪಾಲದ ಎಂಐಟಿ ಸಹಾಯಕ ಪ್ರಾಧ್ಯಾಪಕ ಪೃಥ್ವಿ ಶೆಣೈ, ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅನಿತಾ ಎಸ್., ಮಂಗಳೂರಿನ ಡೊಂಗರಕೇರಿಯ ಕೆನರಾ ಪ್ರೌಢಶಾಲೆಯ ಶಿಕ್ಷಕಿ ರಚನಾ ಕಾಮತ್.

ಬೋಧಕೇತರ ವಿಭಾಗ: ಮಂಗಳೂರು ವಿಶ್ವವಿದ್ಯಾನಿಲಯದ ವಾಹನ ಚಾಲಕ ಯಶವಂತ, ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗದ ಬೇಬಿ, ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ರಮೇಶ್ ಯು.

ಸಾರ್ವಜನಿಕ ವಿಭಾಗ: ಬಿಜೈನ ಅಶ್ವನಿಕುಮಾರ್ ಎನ್.ಕೆ.ಆರ್., ಕಾರ್ಪೊರೇಷನ್ ಬ್ಯಾಂಕ್‌ನ ಮಂಗಳೂರು ವಾುನ ಪೈ, ಬಗಂಬಿಲ ಗಣೇಶ್ ಪೂಜಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X