ಯಲ್ಲಾಪುರದಲ್ಲಿ ಕೆಮಿಕಲ್ ಟ್ಯಾಂಕರ್ ಪಲ್ಟಿಯಾಗಿ ಸ್ಫೋಟ

ಯಲ್ಲಾಪುರ: ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ಯಲ್ಲಾಪುರ ತಾಲೂಕಿನ ಆರೆಬೈಲ್ ಕ್ರಾಸ್‍ನ ಇಡಗುಂದಿ ಬಳಿ ಬುಧವಾರ ನಡೆದಿದೆ.
ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಅಂಕೋಲ ರಾಷ್ಟ್ರೀಯ ಹೆದ್ದಾರಿ 66ರ ಸಂಚಾರವನ್ನು ಕೆಲಕಾಲ ಬಂದ್ ಮಾಡಲಾಗಿತ್ತು. ಇದೀಗ ಸಂಚಾರ ಮುಕ್ತವಾಗಿದೆ.
ಅಂಕೋಲ ಭಾಗದ ಕಡೆ ತೆರಳುತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಘಾಟಿಯಲ್ಲಿ ಪಲ್ಟಿಯಾಗಿ ಸ್ಫೋಟಗೊಂಡಿದೆ. ಈ ವೇಳೆ ಚಾಲಕನಿಗೆ ಗಾಯವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.








.jpeg)

