Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಗತಿ ಶಕ್ತಿ ಯೋಜನೆ'ಯ ಮೂಲಕ ಸ್ಥಳೀಯ...

‘ಗತಿ ಶಕ್ತಿ ಯೋಜನೆ'ಯ ಮೂಲಕ ಸ್ಥಳೀಯ ಉತ್ಪಾದಕರಿಗೆ ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ: ಸಚಿವ ವಿ.ಸೋಮಣ್ಣ

ಪ್ರಧಾನಮಂತ್ರಿ ‘ಗತಿ ಶಕ್ತಿ’ ಯೋಜನೆಗೆ ನರೇಂದ್ರ ಮೋದಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ13 Oct 2021 6:23 PM IST
share
‘ಗತಿ ಶಕ್ತಿ ಯೋಜನೆಯ ಮೂಲಕ ಸ್ಥಳೀಯ ಉತ್ಪಾದಕರಿಗೆ ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ: ಸಚಿವ ವಿ.ಸೋಮಣ್ಣ

ಬೆಂಗಳೂರು, ಅ.13: ಸಮಗ್ರ ಮೂಲಸೌಕರ್ಯಕ್ಕೆ ಅಡಿಪಾಯವಾಗಲಿರುವ 100 ಲಕ್ಷ ಕೋಟಿಯ ಗತಿಶಕ್ತಿ ಉಪಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ದಿಲ್ಲಿಯ ಪ್ರಗತಿ ಮೈದಾನದಲ್ಲಿ ಬುಧವಾರ ಚಾಲನೆ ನೀಡಿದರು. 

ಕೊರೋನ, ಲಾಕ್‍ಡೌನ್‍ನಿಂದ ಹಳಿ ತಪ್ಪಿದ್ದ ದೇಶದ ಆರ್ಥಿಕತೆ ಮತ್ತೆ ನಿಧಾನಗತಿಗೆ ಹಳಿಗೆ ಮರಳುತ್ತಿದ್ದು, ಅದಕ್ಕೆ ಮತ್ತಷ್ಟು ಉತ್ತೇಜನ ನೀಡಲು, ‘ಗತಿಶಕ್ತಿ' ಯೋಜನೆ ಪೂರಕವಾಗಿದೆ. 100 ಲಕ್ಷ ಕೋಟಿ ರಾಷ್ಟ್ರೀಯ ಮೂಲಸೌಕರ್ಯ ಮಾಸ್ಟರ್ ಪ್ಲಾನ್ ಇದಾಗಿದ್ದು, ದೇಶದ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿದೆ. ಜತೆಗೆ ಲಾಜಿಸ್ಟಿಕ್ ವೆಚ್ಚವನ್ನೂ ತಗ್ಗಿಸಲಿದೆ.

ನಗರದ ಅಶೋಕ ಹೊಟೇಲ್‍ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರು ರಾಜ್ಯ ಸರಕಾರದ ಪರವಾಗಿ ಪಾಲ್ಗೊಂಡು, ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನಾ ಕಾರ್ಯಕ್ರಮ ವೀಕ್ಷಿಸಿ ಮಾತನಾಡಿದರು.

ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಗುರಿ ಹೊಂದಿದೆ. ಈ ಯೋಜನೆಯು ದೇಶದ ಪ್ರಗತಿಯ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಲ್ಲಿ ಮತ್ತು ಮೂಲಸೌಕರ್ಯದ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಯೋಜನೆಯ ಮೂಲಕ ಸ್ಥಳೀಯ ಉತ್ಪಾದಕರನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವ ಗುರಿ ಇದೆ. ಇದು ಕೈಗಾರಿಕೆಗಳ ಅಭಿವೃದ್ಧಿಗೆ ಕಾರಣವಾಗಲಿದೆ ಎಂದು ಸೋಮಣ್ಣ ತಿಳಿಸಿದರು. 

ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಸುಲಲಿತ ವ್ಯವಹಾರಕ್ಕೆ ಒತ್ತು ನೀಡಲಾಗುತ್ತಿದೆ. ರಾಷ್ಟ್ರೀಯ ಯೋಜನೆಗೆ ಅನುಗುಣವಾಗಿ ರಾಜ್ಯದಲ್ಲಿನ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಗೊಳಿಸಲು ಕೇಂದ್ರ ಸರಕಾರದೊಂದಿಗೆ ಕೈ ಜೋಡಿಸುತ್ತದೆ. ರಾಜ್ಯದ ಪೂರ್ವ, ಪಶ್ಚಿಮ, ಉತ್ತರ ಹಾಗೂ ದಕ್ಷಿಣ ವಲಯಗಳಲ್ಲಿ ವಿಮಾನ ನಿಲ್ದಾಣಗಳನ್ನು ನಿರ್ಮಿಸುವುದರಿಂದ ವಿವಿಧ ಆರ್ಥಿಕ ವಲಯಗಳಿಗೆ ತ್ವರಿತಗತಿಯ ಸಂಪರ್ಕ ದೊರೆಯಲಿದೆ ಎಂದು ಅವರು ಹೇಳಿದರು.

ರಾಜ್ಯ ಹಾಗೂ ಅಂತರ್‍ರಾಜ್ಯ ರೈಲು ಮಾರ್ಗಗಳ ನಿರ್ಮಾಣ ವೆಚ್ಚದಲ್ಲಿ ಶೇ.50ರಷ್ಟು ಭಾಗವನ್ನು ರಾಜ್ಯ ಸರಕಾರ ಭರಿಸುವುದಲ್ಲದೆ, ಅಗತ್ಯ ಭೂಮಿಯನ್ನು ಉಚಿತವಾಗಿ ನೀಡುತ್ತದೆ. 9 ಹೊಸ ರೈಲು ಮಾರ್ಗಗಳ ಯೋಜನೆಯನ್ನು ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಕೈಗೊಳ್ಳಲಾಗುತ್ತದೆ. ಬಂದರು ಹಾಗೂ ಜಲ ಸಾರಿಗೆ ಅಭಿವೃದ್ಧಿ ಮೂಲಕ ಆರ್ಥಿಕ ಹಾಗೂ ಔದ್ಯಮಿಕ ಪ್ರಗತಿ ಹೆಚ್ಚಲಿದೆ ಎಂದು ಅವರು ವಿವರಿಸಿದರು. 

ದಾಬಸ್ ಪೇಟೆಯಲ್ಲಿ ಲಾಜಿಸ್ಟಿಕ್ ಪಾರ್ಕ್: ದಾಬಸ್‍ಪೇಟೆಯಲ್ಲಿ ಮಲ್ಟಿ ಮೋಡಲ್ ಲಾಜಿಸ್ಟಿಕ್ ಪಾರ್ಕ್ (ಎಂಎಂಎಲ್) ಅಭಿವೃದ್ಧಿಗೆ 400 ಎಕರೆ ಭೂಮಿ ಗುರುತಿಸಲಾಗಿದೆ. ದೇಶದ ಅತಿ ಹೆಚ್ಚು ಲಾಜಿಸ್ಟಿಕ್ ಜಾಲ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದ್ದು, ನೂತನ ಕೈಗಾರಿಕಾ ನೀತಿಯ ಅನುಸ್ಠಾನದ ಮೂಲಕ ಮೊದಲ ಸ್ಥಾನಕ್ಕೇರುವುದು ನಮ್ಮ ಗುರಿ ಎಂದು ಸೋಮಣ್ಣ ವಿವರಿಸಿದರು.

ಕಾರ್ಯಕ್ರಮದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಣಮಣರೆಡ್ಡಿ, ಕೆಐಎಡಿಬಿ ಸಿಇಓ ಡಾ.ಎನ್.ಶಿವಶಂಕರ್,  ಇನ್ವೆಸ್ಟ್ ಕರ್ನಾಟಕದ ಸಿಓಓ ಬಿ.ಕೆ. ಶಿವಕುಮಾರ್ ಉಪಸ್ಥಿತರಿದ್ದರು.

ಏನಿದು ಗತಿಶಕ್ತಿ ಯೋಜನೆ?: 100 ಲಕ್ಷ ಕೋಟಿ ರೂ.ಗತಿಶಕ್ತಿ ಉಪಕ್ರಮವು ಸಮಗ್ರ ಮೂಲಸೌಕರ್ಯ ಬೆಳವಣಿಗೆಗೆ ಪೂರಕವಾಗಿದ್ದು, ವಿವಿಧ ಆರ್ಥಿಕ ವಲಯಗಳಿಗೆ ಬಹುಮುಖ ಸಂಪರ್ಕ ಕಲ್ಪಿಸುವ ಯೋಜನೆಯಾಗಿದೆ. ಇದು ರೈಲ್ವೆ, ರಸ್ತೆಗಳು ಮತ್ತು ಹೆದ್ದಾರಿಗಳು, ಪೆಟ್ರೋಲಿಯಂ ಮತ್ತು ಅನಿಲ, ವಿದ್ಯುತ್, ದೂರಸಂಪರ್ಕ, ಹಡಗು, ವಾಯುಯಾನ ಮತ್ತು ಕೈಗಾರಿಕಾ ಪಾರ್ಕ್ ಇಲಾಖೆಗಳು ಸೇರಿದಂತೆ ಕೇಂದ್ರ ಸರಕಾರದ 16 ಇಲಾಖೆಗಳು ಒಳಗೊಳ್ಳಲಿವೆ. ಕೇಂದ್ರದ ಎಲ್ಲ 16 ಇಲಾಖೆಗಳ ಉನ್ನತ ಅಧಿಕಾರಿಗಳ ನೆಟ್‍ವರ್ಕ್ ಪ್ಲಾನಿಂಗ್ ಗ್ರೂಪ್ ಸಹ ರಚಿಸಲಾಗುತ್ತಿದೆ.

ಭಾಸ್ಕರಾಚಾರ್ಯ ನ್ಯಾಷನಲ್ ಇನ್ಸ್‍ಟಿಟ್ಯೂಟ್ ಫಾರ್ ಸ್ಪೇಸ್ ಅಪ್ಲಿಕೇಶನ್ ಸಹಯೋಗದಲ್ಲಿ ಜಿಯೋ-ಇನ್ಫಾಮ್ರ್ಯಾಟಿಕ್ಸ್ ಅಭಿವೃದ್ಧಿಪಡಿಸಿರುವ ಜಿಐಎಸ್-ಆಧಾರಿತ ಇಆರ್‍ಪಿ ವ್ಯವಸ್ಥೆಯು, ಮೂಲಸೌಕರ್ಯ ಸಂಪರ್ಕ ಸಚಿವಾಲಯಗಳನ್ನು ಒಳಗೊಂಡ ನೆಟ್‍ವರ್ಕ್ ಗುಂಪಿಗೆ ಯೋಜನೆಯ  ಕ್ಷಣ ಕ್ಷಣದ ಮೇಲ್ವಿಚಾರಣೆ ನಡೆಸಲು ನೆರವಾಗಲಿದೆ.

-ಡಾ.ಇ.ವಿ.ರಣಮಣರೆಡ್ಡಿ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X