ಲಖಿಂಪುರ ಹಿಂಸಾಚಾರ ಪ್ರಕರಣ: ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ
ಲಕ್ನೊ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ನ್ಯಾಯಾಲಯ ಬುಧವಾರ ಜಾಮೀನು ನಿರಾಕರಿಸಿದೆ.
ಆಶಿಶ್ ಮಿಶ್ರಾ ಹಾಗೂ ಇನ್ನೋರ್ವ ಆರೋಪಿ ಆಶಿಶ್ ಪಾಂಡೆಯ ಜಾಮೀನು ಅರ್ಜಿಗಳನ್ನು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಚಿಂತಾ ರಾಮ್ ತಿರಸ್ಕರಿಸಿದ್ದಾರೆ ಎಂದು ಹಿರಿಯ ಪ್ರಾಸಿಕ್ಯೂಷನ್ ಅಧಿಕಾರಿ (ಎಸ್‌ಪಿಒ) ಎಸ್.ಪಿ. ಯಾದವ್ ಪಿಟಿಐಗೆ ತಿಳಿಸಿದ್ದಾರೆ.
12 ಗಂಟೆಗಳ ವಿಚಾರಣೆಯ ನಂತರ ವಿಶೇಷ ತನಿಖಾ ತಂಡದಿಂದ ಅಕ್ಟೋಬರ್ 9 ರಂದು ಬಂಧಿಸಲ್ಪಟ್ಟ ಆಶಿಶ್ ಮಿಶ್ರಾನನ್ನು ಮಂಗಳವಾರದಿಂದ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿತ್ತು. ಇದೀಗ ಆಶಿಶ್ ಪಾಂಡೆಯನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
Next Story