ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾದ ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ

ಹೊಸದಿಲ್ಲಿ: ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್ ನಾಯಕ ಡಾ.ಮನಮೋಹನ್ ಸಿಂಗ್ ಅವರನ್ನುದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಡಾ.ಮನಮೋಹನ್ ಸಿಂಗ್ ಅವರು ಬುಧವಾರ ಸಂಜೆ ಜ್ವರ ಹಾಗೂ ನಿಶ್ಶಿಕ್ತಿಯ ಕಾರಣಕ್ಕೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರುಗಳು ತಿಳಿಸಿದ್ದಾರೆ.
Next Story