ಪೆಟ್ರೋಲ್, ಡೀಸೆಲ್ ಬೆಲೆ ಮತ್ತೊಮ್ಮೆ ಏರಿಕೆ

ಹೊಸದಿಲ್ಲಿ: ಪೆಟ್ರೋಲ್ ,ಡೀಸೆಲ್ ಬೆಲೆಯನ್ನು ಎರಡು ದಿನಗಳ ವಿರಾಮದ ನಂತರ ಗುರುವಾರ ತೈಲ ಮಾರುಕಟ್ಟೆ ಕಂಪನಿಗಳು ಹೆಚ್ಚಿಸಿವೆ.
ರಾಷ್ಟ್ರ ರಾಜಧಾನಿಯಲ್ಲಿ ಇಂದು ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 104.79 ರೂ.ಆಗಿದ್ದು, ನಿನ್ನೆಗಿಂತ 35 ಪೈಸೆ ಹೆಚ್ಚಾಗಿದೆ. ರಾಜಧಾನಿಯಲ್ಲಿ ಡೀಸೆಲ್ ಪ್ರತಿ ಲೀಟರ್‌ಗೆ 93.52 ರೂ. ಏರಿಕೆಯಾಗಿದೆ.
ಅಕ್ಟೋಬರ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು 10 ಪಟ್ಟು ಹೆಚ್ಚಾಗಿದೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ , ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಪ್ರತಿದಿನ ಬೆಂಚ್ ಮಾರ್ಕ್ ಅಂತರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಯನ್ನು ಪರಿಷ್ಕರಿಸುತ್ತದೆ.
ಮುಂಬೈನ ಪೆಟ್ರೋಲ್ ಬೆಲೆ ಈಗಲೂ ಮೆಟ್ರೋ ನಗರಗಳಲ್ಲಿ ಅತಿ ಹೆಚ್ಚಾಗಿದ್ದು, ಪ್ರತಿ ಲೀಟರ್‌ಗೆ ರೂ. 110.75 ತಲುಪಿದೆ. ದೇಶದ ವಾಣಿಜ್ಯ ರಾಜಧಾನಿಯಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 101.40 ರೂ. ತಲುಪಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 108.44 ರೂ. ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 99.26 ರೂ.ಗೆ ಏರಿಕೆಯಾಗಿದೆ.