ಕಿರುಕುಳ ಆರೋಪ; ಅಲ್ಪಸಂಖ್ಯಾತರ ನಿಗಮದ ದ.ಕ. ಜಿಲ್ಲಾ ವ್ಯವಸ್ಥಾಪಕಗೆ ಜಾಮೀನು
ಮಂಗಳೂರು : ಕಚೇರಿ ಸಹೋದ್ಯೋಗಿಗೆ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತನಾಗಿದ್ದ ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಮುಹಮ್ಮದ್ ಫಾರೂಕ್ ಎಂಬಾತನಿಗೆ ನಗರದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಫಾರೂಕ್ ನನ್ನು ವಶಕ್ಕೆ ಪಡೆಯಲಾಗಿತ್ತು.
ಗುರುವಾರ ಫಾರೂಕ್ ನನ್ನು ನಗರದ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
Next Story





