ಅ.16 : ಉಡುಪಿ ಜಿಲ್ಲಾಧಿಕಾರಿಯಿಂದ ಜಡ್ಕಲ್‌ನಲ್ಲಿ ಗ್ರಾಮ ವಾಸ್ತವ್ಯ

ಉಡುಪಿ, ಅ.14: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ಅ.16ರ ಶನಿವಾರ ಜಿಲ್ಲೆಯ ಬೈಂದೂರು ತಾಲೂಕಿನ ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಪ್ರತಿ ತಿಂಗಳ ಮೂರನೇ ಶನಿವಾರದಂದು ನಡೆಸಲಾಗುತಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನವನ್ನು ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಅ.16ರಿಂದ ಪುನರಾರಂಭಿ ಸಲು ಸರಕಾರದ ಮಟ್ಟದಲ್ಲಿ ತೀರ್ಮಾನಿಸಲಾಗಿದೆ.
ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯ ವಾಗಿ ನಿಗದಿಪಡಿಸಿಕೊಂಡ ಗ್ರಾಮ/ಹಳ್ಳಿಗಳಲ್ಲಿ ಅ.16ರಂದು ವಾಸ್ತವ್ಯ ಹೂಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಕ್ರಮಕೈಗೊಳ್ಳುವಂತೆ ಸರಕಾರ ಸುತ್ತೋಲೆಯಲ್ಲಿ ತಿಳಿಸಿತ್ತು.
Next Story





