Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಕೋಳ್ಯೂರು ವೈಭವ’ಕ್ಕೆ ಧರ್ಮಸ್ಥಳದಲ್ಲಿ...

‘ಕೋಳ್ಯೂರು ವೈಭವ’ಕ್ಕೆ ಧರ್ಮಸ್ಥಳದಲ್ಲಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ15 Oct 2021 7:38 PM IST
share
‘ಕೋಳ್ಯೂರು ವೈಭವ’ಕ್ಕೆ ಧರ್ಮಸ್ಥಳದಲ್ಲಿ ಚಾಲನೆ

ಉಡುಪಿ, ಅ.15: ಯಕ್ಷಗಾನ ಕ್ಷೇತ್ರದ ಶ್ರೇಷ್ಠ ಕಲಾಸಾಧಕರಾದ ಪ್ರಸಿದ್ಧ ಸ್ತ್ರೀ ವೇಷಧಾರಿ ಕೋಳ್ಯೂರು ರಾಮಚಂದ್ರ ರಾಯರಿಗೆ ತೊಂಭತ್ತು ವರ್ಷ ತುಂಬಿದ ಶುಭಾವಸರದಲ್ಲಿ ಉಡುಪಿಯ ಯಕ್ಷಗಾನ ಕಲಾರಂಗ ಒಂದು ತಿಂಗಳ ಕಾಲ ಆಯೋಜಿಸಿರುವ ‘ಕೋಳ್ಯೂರು ವೈಭವ’ದ ಸರಣಿ ಕಾರ್ಯಕ್ರಮಗಳಿಗೆ ಗುರುವಾರ ಧರ್ಮಸ್ಥಳದಲ್ಲಿ ಚಾಲನೆ ನೀಡಲಾಯಿತು.

ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ನಿನ್ನೆ ಸಂಪನ್ನಗೊಂಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ನ.14ರವರೆಗೆ ನಡೆಯಲಿರುವ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರಲ್ಲದೇ ಇದೇ ಸಂದರ್ಭ ದಲ್ಲಿ ಕೋಳ್ಯೂರರ ಕುರಿತು ಸಮಗ್ರ ಪರಿಚಯ ಒಳಗೊಂಡಿರುವ ‘ಕ್ವೀನ್ ಆಫ್ ಯಕ್ಷಗಾನ’ ಜಾಲತಾಣವನ್ನು ಉದ್ಘಾಟಿಸಿದರು.

ನಾವು ಎಲ್ಲವನ್ನೂ ಸರಕಾರದಿಂದ ನಿರೀಕ್ಷಿಸುವುದು ಸರಿಯಲ್ಲ. ಕಲೆ, ಕಲಾವಿದರ ಕ್ಷೇಮ ಚಿಂತನೆ ಸೇರಿದಂತೆ ಯಕ್ಷಗಾನ ಕಲಾರಂಗ ಮಾಡುತ್ತಿರುವ ಸಮಾಜಮುಖಿ ಕಾರ್ಯಗಳು ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ಡಾ.ಹೆಗ್ಗಡೆ ಹೇಳಿದರು.

ರಂಗದ ಮೇಲೆ ರಾಣಿಯಾಗಿ ಮೆರೆದ ಕೋಳ್ಯೂರರು ನಿಜ ಬದುಕಿನಲ್ಲಿ ನಿರ್ಗವಿಯಾಗಿ ಎಲ್ಲರೊಂದಿಗೆ ಆತ್ಮೀಯತೆಯಿಂದ ಬೆರೆಯುವುದು ಅನುಕರ ಣೀಯವಾದ ನಡವಳಿಕೆ. ಎಲ್ಲ ಪ್ರತಿಕೂಲಗಳ ನಡುವೆ ಏಳು ದಶಕಗಳ ಕಾಲ ನಿರಂತರವಾಗಿ ಯಕ್ಷಗಾನ ಕ್ಷೇತ್ರದಲ್ಲಿ ಕಲಾಸೇವೆ ಮಾಡುತ್ತಾ ಬಂದ ಕೊಳ್ಯೂರರ ಕಲಾತಪಸ್ಸು ಈಗಿನ ಕಲಾವಿದರಿಗೆ ಆದರ್ಶಪ್ರಾಯ. ವೆಬ್‌ಸೈಟ್ ನಿರ್ಮಾಣದ ಮೂಲಕ ಅವರ ಕಲಾಸಾಧನೆ ಶಾಶ್ವತವಾಗಿ ಉಳಿಯುವಂತಾದುದು ಸ್ತುತ್ಯರ್ಹ ಕಾರ್ಯ ಎಂದು ನುಡಿದರು. ಶ್ರೀಕ್ಷೇತ್ರದ ವತಿಯಿಂದ ಅವರು ಕೋಳ್ಯೂರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಯಕ್ಷಗಾನ ಕಲಾರಂಗದ ಉಪಾಧ್ಯಕ್ಷರಾದ ಪಿ.ಕಿಶನ್ ಹೆಗ್ಡೆ ಹಾಗೂ ವಿ.ಜಿ.ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ.ಗಂಗಾ ಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿ ಜತೆಕಾರ್ಯದರ್ಶಿ ಪ್ರೊ. ನಾರಾಯಣ ಎಂ. ಹೆಗಡೆ ವಂದಿಸಿದರು.

ಸಮಾರಂಭದಲ್ಲಿ ಕೋಳ್ಯೂರರ ಪತ್ನಿ ಭಾಗೀರಥಿ ರಾವ್, ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ, ಕಲಾವಿದ ಚಂದ್ರಶೇಖರ ಧರ್ಮಸ್ಥಳ, ಯಕ್ಷಗಾನ ಕಲಾರಂಗದ ಸದಸ್ಯರಾದ ಅನಂತರಾಜ ಉಪಾಧ್ಯ, ಪೃಥ್ವಿರಾಜ ಕವತ್ತಾರ್, ಎಚ್.ಎನ್. ಶೃಂಗೇಶ್ವರ, ಕಿಶೋ ರ್ ಸಿ. ಉದ್ಯಾವರ ಉಪಸ್ಥಿತರಿದ್ದರು.

ಕೋಳ್ಯೂರರ ಪುತ್ರ ಕೆ.ಶ್ರೀಧರ ರಾವ್ ಹಾಗೂ ಮೊಮ್ಮಗ ನಟರಾಜ್ ಗೋಾಡಿ ಕಾರ್ಯಕ್ರಮದ ಸಂಯೋಜಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X