ಕೊಣಾಜೆ : ನೇಣು ಬಿಗಿದು ಯುವಕ ಆತ್ಮಹತ್ಯೆ

ಕೊಣಾಜೆ: ಕೊಣಾಜೆ ಠಾಣೆ ವ್ಯಾಪ್ತಿಯ ಅಡ್ಕರೆ ಸಮೀಪ ಅವಿವಾಹಿತ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.
ಕೊಣಾಜೆ ಸಮೀಪದ ನಾರಾಯಣ ಶೆಟ್ಟಿ ಎಂಬವರ ಪುತ್ರ ಮಹೇಶ್ ಶೆಟ್ಟಿ(35) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.
ಓರ್ವನೆ ಪುತ್ರನಾಗಿದ್ದ ಮಹೇಶ್ ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಎಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದ ಈತ ಆತ್ಮಹತ್ಯೆಗೈಯ್ಯಲು ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





