Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿ ಸಮ್ಮಾನ್ ಯೋಜನೆಯ ಸದುಪಯೋಗಕ್ಕೆ...

ಕೃಷಿ ಸಮ್ಮಾನ್ ಯೋಜನೆಯ ಸದುಪಯೋಗಕ್ಕೆ ಸಚಿವ ಕೋಟ ಕರೆ

ಮಡಿಕೇರಿಯಲ್ಲಿ ಹಾಪ್ ಕಾಮ್ಸ್ ನೂತನ ಕಟ್ಟಡ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 Oct 2021 8:03 PM IST
share
ಕೃಷಿ ಸಮ್ಮಾನ್ ಯೋಜನೆಯ ಸದುಪಯೋಗಕ್ಕೆ ಸಚಿವ ಕೋಟ ಕರೆ

ಮಡಿಕೇರಿ ಅ.16 : ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗುವಂತಾಗಬೇಕು. ಕೃಷಿ ಸಮ್ಮಾನ್ ಯೋಜನೆಯು ಹಲವಾರು ಸೌಲಭ್ಯಗಳನ್ನು ಒದಗಿಸಿಕೊಟ್ಟಿದೆ. ಅದರ ಸದುಪಯೋಗವನ್ನು ಎಲ್ಲಾ ರೈತರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವÀ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

 ಕೊಡಗು ಜಿಲ್ಲಾ ಹಾಪ್ ಕಾಮ್ಸ್, ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾ ಮಂಡಳ ಇವರ ಸಹಯೋಗದೊಂದಿಗೆ ಶನಿವಾರ ನಗರದ ಮುಖ್ಯ ರಸ್ತೆಯಲ್ಲಿ ನಿರ್ಮಿಸಿರುವ ಹಾಪ್‍ಕಾಮ್ಸ್ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

  ಮಡಿಕೇರಿ ನಗರದ ಹೃದಯ ಭಾಗದಲ್ಲಿ ಹಾಪ್‍ಕಾಮ್ಸ್ ಕಟ್ಟಡ ನಿರ್ಮಾಣ ಮಾಡಿರುವುದು ನಿಜಕ್ಕೂ ಶ್ಲಾಘನೀಯ. ರೈತರು  ಅವಶ್ಯಕವಾಗಿ ಇದರ ಸದ್ಬಳಕೆ ಮಾಡಿಕೊಳ್ಳುವಂತಾಗಬೇಕು ಎಂದು  ಸಚಿವರು ಹೇಳಿದರು.

ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ರೈತರು ಬೆಳೆದ ಬೆಳೆಗೆ ರೈತರೇ ದರ ನಿಗದಿ ಮಾಡುವಂತಾಗಬೇಕು. ಯಾವ ಮೂಲದಿಂದಲೂ ಅವರಿಗೆ ನಷ್ಟ ಆಗಬಾರದು.  ಜಿಲ್ಲಾ ಹಾಪ್‍ಕಾಮ್ಸ್‍ನಲ್ಲಿ ಕೋಲ್ಡ್ ಸ್ಟೋರೇಜ್ ವ್ಯವಸ್ಥೆಯು ಆದಷ್ಟು ಬೇಗ ಆಗಬೇಕು ಎಂದರು.

ಪ್ರಧಾನಮಂತ್ರಿಯವರ ಕೃಷಿಯೆಡೆಗಿನ ಚಿಂತನೆಗಳು ಅತ್ಯಮೂಲ್ಯವಾಗಿದೆ. ಅವರೊಂದಿಗೆ ನಾವುಗಳು ಕೈ ಜೋಡಿಸಬೇಕು. ಹೊಂದಾಣಿಕೆಯಿಂದ ನಡೆದುಕೊಂಡು ಹೋಗಲಿ ಎಂದು ಶುಭ ಹಾರೈಸಿದರು.

  ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಮಾತನಾಡಿ, ಸರ್ಕಾರದ ವ್ಯವಸ್ಥೆಯಲ್ಲಿ ಶ್ರಮವಹಿಸಿ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಅದೇ ರೀತಿ ಎಲ್ಲಾ ರೈತರು ಕಟ್ಟಡದ ಸದುಪಯೋಗ ಪಡೆದುಕೊಳ್ಳುವಂತಾಗಲಿ ಎಂದು ಹೇಳಿದರು.

 ಸಚಿವರು ಕೊಡಗಿನಲ್ಲಿ ಅಭಿವೃದ್ಧಿ ಸಂಬಂಧಿಸಿದಂತೆ ಉತ್ತಮ ಸ್ಪಂದನೆಯನ್ನು ನೀಡುತ್ತಾ ಬಂದಿದ್ದಾರೆ, ಇದೇ ರೀತಿ ಮುಂದೆಯೂ ಸಹ ಬೆಂಬಲಿಸಬೇಕಾಗಿ ಕೋರಿಕೊಂಡರು.

ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷರಾದ ಬಿದ್ದಾಟಂಡ ಎ.ರಮೇಶ್ ಚಂಗಪ್ಪ ಅವರು ಮಾತನಾಡಿ ಹಾಪ್‍ಕಾಮ್ಸ್ ಕಟ್ಟಡ ನಿರ್ಮಾಣವೂ 20 ವರ್ಷದ ಕನಸಾಗಿತ್ತು, ಬಹಳಷ್ಟು ಶ್ರಮವಹಿಸಿ ಕಟ್ಟಡ ನಿರ್ಮಾಣ ಮಾಡಲಾಯಿತು. ಎಲ್ಲರಿಗೂ ಇದರ ಉತ್ತಮ ಸೇವೆ ತಲುಪುವಂತಾಗಲಿ ಎಂದು ಹಾರೈಸಿದರು.

  ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾ ಮಂಡಳದ ಅಧ್ಯಕ್ಷರಾದ ಡಾ.ಬಿ.ಡಿ.ಭೂಕಾಂತ್ ಅವರು ಮಾತನಾಡಿ ಕೊಡಗಿನ ಕಿತ್ತಳೆ ಒಂದು ಉತ್ತಮ ಬೆಳೆಯಾಗಿದೆ, ಅದಕ್ಕೆ ಉತ್ತಮ ದರ ನಿಗದಿ ಪಡಿಸಿ ನ್ಯಾಯ ಒದಗಿಸಿಕೊಡಬೇಕು ಎಂದರು.

ಪ್ರಧಾನಮಂತ್ರಿಯವರು ಆತ್ಮ ನಿರ್ಭರ ಭಾರತ್ ಯೋಜನೆಯು ರೈತರಿಗೆ ಹಲವು ಸೌಲಭ್ಯಗಳನ್ನು ಒದಗಿಸಿಕೊಟ್ಟಿದೆ. ಪ್ರತಿದಿನವು ನಾವು ರೈತರನ್ನು ನೆನೆಸಿಕೊಳ್ಳಬೇಕು ಏಕೆಂದರೆ, ಇಂದು ನಾವೂ ಆಹಾರ ಸೇವಿಸುತ್ತಿರುವುದು ರೈತರಿಂದಲೆ. ಹಾಲು ಉತ್ಪಾದಕರ ಸಂಘಕ್ಕೆ ಸರ್ಕಾರದಿಂದ ಬೆಂಬಲ ಸಿಕ್ಕಾಗ ಅದು ಯಶಸ್ಸುಗಳಿಸಲು ಸಾಧ್ಯವಾಯಿತು, ಅದೇ ರೀತಿ ಹಾಪ್‍ಕಾಮ್ಸ್‍ಗೂ ಸಹ ಸರ್ಕಾರದ ಬೆಂಬಲ ದೊರಕಬೇಕು ಎಂದು ಹೇಳಿದರು.

 ರಾಜ್ಯದಲ್ಲಿ 23 ಹಾಪ್ ಕಾಮ್ಸ್‍ಗಳಿದ್ದು, 11 ಹಾಪ್‍ಕಾಮ್ಸ್‍ಗಳಿಗೆ ಮೊಬೈಲ್ ವಾಹನದ ವ್ಯವಸ್ಥೆಯಿರುತ್ತದೆ. ಕೊಡಗು ಜಿಲ್ಲೆಗೂ ಸಹ ಆದಷ್ಟು ಬೇಗ ಮೊಬೈಲ್ ವಾಹನದ ವ್ಯವಸ್ಥೆ ಸಿಗುವಂತಾಗಲಿ ಎಂದು ಶುಭ ಹಾರೈಸಿದರು.

 ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾ ಮಂಡಳದ ಉಪಾಧ್ಯಕ್ಷರಾದ ಸೂರ್ಯಕುಮಾರ್, ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾ ಮಂಡಳದ ವ್ಯವಸ್ಥಾಪಕ ನಿರ್ದೇಶಕರಾದ ಎಚ್.ಎನ್.ಹೇಮ, ಮಡಿಕೇರಿ ಸಹಕಾರ ಇಲಾಖೆಯ ಉಪ ನಿಬಂಧಕರಾದ ಬಿ.ಕೆ.ಸಲೀಂ, ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಸಂಘದ ಆಡಳಿತ ಮಂಡಳಿಯ ನಿರ್ದೇಶಕರುಗಳಾದ ಎಸ್.ಪಿ ಪೊನ್ನಪ್ಪ, ಬೇಬಿ ಪೂವಯ್ಯ, ಲೀಲಾ ಮೇದಪ್ಪ, ಕೋಣೇರಿರ ಎಂ.ಮನೋಹರ್, ಎಂ.ಡಿ.ಸುವಿನ್ ಗಣಪತಿ, ಪಾಡಿಯಮ್ಮನ ಎ.ಮಹೇಶ್, ಕೆ.ಪೂವಪ್ಪ ನಾಯ್ಕ, ಡಿ.ಹೆಚ್.ಉಮೇಶ್ ರಾಜ್ ಅರಸ್, ಎಚ್.ಎಂ.ಸುಧೀರ್,   ಬಿ.ಎ.ಹರೀಶ್, ಸತೀಶ್ ಕಾಂಗೀರ ಎನ್, ಪದನಿಮಿತ್ತ ವ್ಯವಸ್ಥಾಪಕ ನಿರ್ದೇಶಕರು ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಮೋದ್ ಸಿ. ಎಂ, ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಮುಖ್ಯಕಾರ್ಯನಿರ್ವಾಹಕರಾದ  ಗಿರೀಶ್, ಕೊಡಗು ಜಿಲ್ಲಾ ಹಾಪ್ ಕಾಮ್ಸ್‍ನ ಮಾರಾಟ ಸಹಾಯಕರಾದ ಮಹಾಲಿಂಗೇಗೌಡ.ಎಲ್, ಡಿಸಿಸಿ ಬ್ಯಾಂಕ್ ಮನುಮುತ್ತಪ್ಪ ಇತರರು ಪಾಲ್ಗೊಂಡಿದ್ದರು.

 ಆರ್.ಮಂಜುಳ ಪ್ರಾರ್ಥಿಸಿ, ನಿರೂಪಿಸಿದರು, ನಾಗೇಶ್ ಕುಂದಲ್ಪಾಡಿ ಸ್ವಾಗತಿಸಿದರು, ಮಧು ದೇವಯ್ಯ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X