Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಸರಕಾರದಲ್ಲಿ ಕಾಳಸಂತೆಯ ದರ್ಬಾರ್:...

ಬಿಜೆಪಿ ಸರಕಾರದಲ್ಲಿ ಕಾಳಸಂತೆಯ ದರ್ಬಾರ್: ಡಿ.ಕೆ.ಶಿವಕುಮಾರ್

''ಸಿದ್ದರಾಮಯ್ಯ ಯಾರನ್ನೂ ಮುಗಿಸುವುದಿಲ್ಲ. ನಾಯಕರನ್ನು ಬೆಳೆಸುವ , ಸಮಾಜಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ''

ವಾರ್ತಾಭಾರತಿವಾರ್ತಾಭಾರತಿ16 Oct 2021 8:40 PM IST
share
ಬಿಜೆಪಿ ಸರಕಾರದಲ್ಲಿ ಕಾಳಸಂತೆಯ ದರ್ಬಾರ್: ಡಿ.ಕೆ.ಶಿವಕುಮಾರ್

ಸಿಂದಗಿ, ಅ.16: ರಾಜ್ಯ ಬಿಜೆಪಿ ಸರಕಾರದ ಆಡಳಿತದಲ್ಲಿ ರಸಗೊಬ್ಬರದಿಂದ ಹಿಡಿದು ಪ್ರತಿಯೊಂದರಲ್ಲೂ ಕಾಳಸಂತೆಯದೇ ದರ್ಬಾರು. ಇದರಿಂದ ರೈತರಿಗೆ, ಅಡುಗೆ ಅನಿಲ, ಅಡುಗೆ ಎಣ್ಣೆ ಹೆಚ್ಚಳದಿಂದ ಮಹಿಳೆಯರಿಗೆ, ಉದ್ಯೋಗವಿಲ್ಲದೆ ಯುವಕರಿಗೆ ಸೇರಿದಂತೆ ಎಲ್ಲರಿಗೂ ಬೆಲೆ ಏರಿಕೆ ಬಿಸಿ ತಟ್ಟಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶನಿವಾರ ಸಿಂದಗಿಯ ಕಾಂಗ್ರೆಸ್ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೀಗಾಗಿ ಜನ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಕಾಯುತ್ತಿರುವ ಅವಕಾಶ ಈಗ ಸಿಕ್ಕಿದೆ. ಈ ಅವಕಾಶವನ್ನು ಸಿಂದಗಿ ಹಾಗೂ ಹಾನಗಲ್ ಮತದಾರರು ಬಳಸಿಕೊಳ್ಳುತ್ತಾರೆ. ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸವಿದೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ ಎಂದರು.

ನಮ್ಮ ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಕಾರ್ಯಾಧ್ಯಕ್ಷರು ಸೇರಿದಂತೆ ಹಲವು ನಾಯಕರು ಇಲ್ಲೇ ಇದ್ದು ಪ್ರಚಾರ ಮಾಡುತ್ತಿದ್ದಾರೆ. ಅಗತ್ಯ ಬಿದ್ದರೆ ನಾನು ಕೂಡ ಇಲ್ಲೇ ವಾಸ್ತವ್ಯ ಹೂಡಿ ಪ್ರಚಾರ ಮಾಡುತ್ತೇನೆ. ಇಲ್ಲಿನ ಮತದಾರರಲ್ಲಿ ಬಹಳ ಉತ್ಸಾಹ ಕಾಣುತ್ತಿದೆ ಎಂದು ಅವರು ಹೇಳಿದರು.

ಇನ್ನು ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ತಮ್ಮ ಕ್ಷೇತ್ರವನ್ನು ತೆಲಂಗಾಣಕ್ಕೆ ಸೇರಿಸಬೇಕೆಂದು ನೀಡಿರುವ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 'ಈ ಹಿಂದೆ ಉಮೇಶ್ ಕತ್ತಿ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡಿದ್ದರು. ಈಗ ಶಿವರಾಜ್ ಪಾಟೀಲ್ ಈ ರೀತಿ ಹೇಳಿಕೆ ನೀಡಿದ್ದಾರೆ. ಇದು ಬಿಜೆಪಿ ಸಂಸ್ಕøತಿ ಎಂದು ಕಿಡಿಗಾರಿದರು.

ಬಿಜೆಪಿಗೆ ಅಖಂಡ ರಾಜ್ಯದ ಬಗ್ಗೆ ಕನಿಷ್ಠ ಕಾಳಜಿ, ಗೌರವವೂ ಇಲ್ಲ. ಇದ್ದಿದ್ದರೆ ರಾಜ್ಯದ ಭಾಗವನ್ನು ತೆಲಂಗಾಣಕ್ಕೆ ಸೇರಿಸಿ ಎಂದು ಹೇಳುತ್ತಿರಲಿಲ್ಲ. ಅಖಂಡ ಕರ್ನಾಟಕಕ್ಕೆ ಧಕ್ಕೆ ತಂದಿದ್ದಾರೆ. ನಾವು ರಾಜ್ಯದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಅಭಿವೃದ್ಧಿ ಕಾರ್ಯ ಮಾಡಿದ್ದೇವೆ. ಶಿವರಾಜ್ ಪಾಟೀಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಬೇಕು. ಶಾಸಕ ಸ್ಥಾನಕ್ಕೆ ಅವರ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ಅವರ ಹೇಳಿಕೆಗೆ ಬಿಜೆಪಿ ಪಕ್ಷದ ಬೆಂಬಲ ಇದೆ, ಪಕ್ಷದಲ್ಲಿ ಆಂತರಿಕವಾಗಿ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದೇ ಅರ್ಥ. ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಶಿವಕುಮಾರ್ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೈತಿಕ ಪೊಲೀಸ್ ಗಿರಿ ಬಗ್ಗೆ ಮಾತನಾಡಿದ್ದಾರೆ. ಅವರ ಹೇಳಿಕೆ ಅವಮಾನಕಾರಿ, ಖಂಡನೀಯ. ಇದಕ್ಕೆ ಅವರು ಕ್ಷಮೆ ಕೊರಬೇಕು. ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, 'ಸಿದ್ದರಾಮಯ್ಯ ಅವರ ಹಾದಿಯಾಗಿ ನಮ್ಮ ಪಕ್ಷದ ನಾಯಕರು ಯಾರನ್ನೂ ಮುಗಿಸುವುದಿಲ್ಲ. ಒಬ್ಬರು ಮತ್ತೊಬ್ಬ ನಾಯಕರನ್ನು ಬೆಳೆಸುವ ಹಾಗೂ ಸಮಾಜಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರು ರಾಜಕೀಯವಾಗಿ ಮಾತನಾಡಿರಬೇಕು. ಅದರಲ್ಲಿ ವಾಸ್ತವಾಂಶ ಇಲ್ಲ ಎಂದರು.

ಸಲೀಮ್ ಹಾಗೂ ಉಗ್ರಪ್ಪ ಅವರ ಸಂಭಾಷಣೆಗೆ ಸಂಬಂಧಿಸಿದಂತೆ ಸಾಕ್ಷ್ಯ ಸಿಕ್ಕರೆ ಪ್ರಕರಣ ದಾಖಲಿಸಿಕೊಳ್ಳುತ್ತೇವೆ ಎಂಬ ಸಚಿವ ಗೋವಿಂದ ಕಾರಜೋಳ ಅವರ ಹೇಳಿಕೆಗೆ ಉತ್ತರಿಸಿದ ಅವರು, 'ಈ ವಿಚಾರದಲ್ಲಿ ಸಮಯ ವ್ಯರ್ಥ ಮಾಡುವುದೇಕೆ? ಕೂಡಲೇ ಪ್ರಕರಣ ದಾಖಲಿಸಿಕೊಳ್ಳಲಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X