Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ...

ನವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ16 Oct 2021 10:06 PM IST
share
ನವೀನ್ಯತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ಆಸಕ್ತಿ: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ದುಬೈ, ಅ.16: ನವೋದ್ಯಮಗಳ ತೊಟ್ಟಿಲಾಗಿರುವ ಕರ್ನಾಟಕವು ಸಂಯುಕ್ತ ಅರಬ್ ಸಂಸ್ಥಾನದಲ್ಲಿ (ಯುಎಇ) ತಂತ್ರಜ್ಞಾನವನ್ನು ಆಧರಿಸಿದ ಹಲವು ಕ್ಷೇತ್ರಗಳಲ್ಲಿ ಸಮರ್ಥ ಪರಿಹಾರಗಳನ್ನು ಒದಗಿಸಲು ಉತ್ಸುಕವಾಗಿದೆ ಎಂದು ಐಟಿ-ಬಿಟಿ ಹಾಗೂ ವಿಜ್ಞಾನ- ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಶನಿವಾರ ಇಲ್ಲಿ ಆರಂಭವಾದ `ವರ್ಲ್ಡ್ ದುಬೈ ಎಕ್ಸ್-ಪೋ-2020’ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದ ನವೋದ್ಯಮಗಳು ಯುಎಇಯಲ್ಲಿ ಸಾಗಣೆ, ಆರೋಗ್ಯ ಸೇವೆ, ತ್ಯಾಜ್ಯ ನಿರ್ವಹಣೆ ಮತ್ತು ಮೂಲಸೌಲಭ್ಯ ಸೇರಿದಂತೆ ಹತ್ತಾರು ಕ್ಷೇತ್ರಗಳಲ್ಲಿ ನೆರವಿಗೆ ಬರಲಿವೆ’ ಎಂದರು.

ಉದ್ಘಾಟನಾ ಕಾರ್ಯಕ್ರಮ ದಲ್ಲಿ ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು. ದುಬೈ ಎಕ್ಸ್ ಪೋ-2020ರಲ್ಲಿ ಭಾಗವಹಿಸಿ, ರಾಜ್ಯಕ್ಕೆ ಉದ್ಯಮಿಗಳನ್ನು ಹೂಡಿಕೆ ಮಾಡುವಂತೆ ಆಹ್ವಾನಿಸಲು ಬಂದಿರುವ ಕರ್ನಾಟಕ ಸರಕಾರದ ನಿಯೋಗದಲ್ಲಿ ಅಶ್ವತ್ಥನಾರಾಯಣ ಅವರೂ ಇದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತವನ್ನು 5 ಟ್ರಿಲಿಯನ್ ಡಾಲರ್ ಸಾಮಥ್ರ್ಯದ ಆರ್ಥಿಕ ಶಕ್ತಿಯಾಗಿ ಬೆಳೆಸುವ ದೂರದೃಷ್ಟಿಯನ್ನು ಇಟ್ಟುಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಕರ್ನಾಟಕವು ತಂತ್ರಜ್ಞಾನವನ್ನು ಆಧರಿಸಿದ ಎಲ್ಲ ಉಪಕ್ರಮಗಳನ್ನೂ ಕೈಗೊಂಡಿದೆ. ಯುಎಇಯಲ್ಲಿರುವ ಉದ್ಯಮಿಗಳು ಕರ್ನಾಟಕಕ್ಕೆ ಬಂದು ಹೂಡಿಕೆ ಮಾಡಲು ಮುಕ್ತ ಸ್ವಾಗತವಿದೆ ಎಂದು ಅವರು ಈ ಸಂದರ್ಭದಲ್ಲಿ ಆಹ್ವಾನವಿತ್ತರು.

ಐಐಎಸ್ಸಿ, ಐಐಎಂ, ಐಐಐಟಿಯಂತಹ ಉನ್ನತ ಶಿಕ್ಷಣ ಸಂಸ್ಥೆಗಳನ್ನು ರಾಜ್ಯವು ಹೊಂದಿದೆ. ಇದರ ಜತೆಗೆ ಕರ್ನಾಟಕವು ಐಟಿ, ಬಿಟಿ, ಇಎಸ್ ಡಿಎಂ, ಅನಿಮೇಷನ್, ವಿಶುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ಇನ್ನೂ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಕಾರ್ಯನೀತಿಗಳನ್ನು ಹೊಂದಿದೆ. ಅಲ್ಲದೆ, ನಮ್ಮಲ್ಲಿಗೆ ಬರುವ ಉದ್ದಿಮೆಗಳಿಗೆ ಆಕರ್ಷಕ ಸೌಲಭ್ಯಗಳು ಮತ್ತು ಪ್ರೋತ್ಸಾಹಗಳನ್ನು ನೀಡುವುದಕ್ಕೆ ರಾಜ್ಯ ಸರಕಾರವು ಒತ್ತು ಕೊಡುತ್ತದೆ ಎಂದು ಅವರು ವಿವರಿಸಿದರು.

ಯುಎಇಯಂತಹ ದೇಶಗಳೊಂದಿಗೆ ಹೊಂದಿರುವ ಸಹಭಾಗಿತ್ವದಿಂದಾಗಿ ಕರ್ನಾಟಕವು ಇಂದು ಜಾಗತಿಕ ಮಟ್ಟದ ಆವಿಷ್ಕಾರಗಳ ಆಗರವಾಗಿದೆ. ಉದ್ದಿಮೆಗಳಿಗೆ ಬೇಕಾದ ಎಲ್ಲ ಬೆಂಬಲವನ್ನೂ ರಾಜ್ಯವು ಒದಗಿಸುತ್ತಿದೆ.  ಇದಕ್ಕೆ ತಕ್ಕಂತೆ ದುಬೈನಲ್ಲಿ ನೆಲೆಯೂರಿರುವ ನವೋದ್ಯಮಗಳಲ್ಲಿ ಕರ್ನಾಟಕ ಮೂಲದ ಸ್ಟಾರ್ಟಪ್ ಗಳ ಸಂಖ್ಯೆ ದೊಡ್ಡದಿರುವುದು ಶ್ಲಾಘನೀಯ ಸಂಗತಿ ಎಂದು ಅಶ್ವತ್ಥನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕವು ಭಾರತದ ಪ್ರಗತಿಪರ ರಾಜ್ಯಗಳಲ್ಲಿ ಒಂದಾಗಿದ್ದು, ಅತ್ಯುತ್ತಮವಾದ ತಂತ್ರಜ್ಞಾನ ಮತ್ತು ಡಿಜಿಟಲ್ ಕಾರ್ಯ ಪರಿಸರವನ್ನು ಹೊಂದಿದೆ. ದೇಶದ ಒಟ್ಟು ಆದಾಯಕ್ಕೆ ರಾಜ್ಯವು ವಾರ್ಷಿಕ 220 ಶತಕೋಟಿ ಡಾಲರ್ ಕೊಡುಗೆ ನೀಡುತ್ತಿದ್ದು, ಐಟಿ, ಬಿಟಿ, ಐಟಿ ಆಧಾರಿತ ಸೇವೆಗಳು, ಎಲೆಕ್ಟ್ರಾನಿಕ್ಸ್, ಮಶೀನ್ ಟೂಲ್ಸ್ ಮತ್ತು ವೈಮಾಂತರಿಕ್ಷ ಕ್ಷೇತ್ರಗಳಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಅವರು ವಿವರಿಸಿದರು.

ಭಾರತವು ತನ್ನ ನೆರೆಹೊರೆಯ ದೇಶಗಳೊಂದಿಗೆ ಬಾಂಧವ್ಯ ವೃದ್ಧಿಗೆ ಆದ್ಯ ಗಮನ ನೀಡಿದ್ದು, ಪಶ್ಚಿಮ ಏಷ್ಯಾದ ರಾಷ್ಟ್ರಗಳೊಂದಿಗಿನ ಸಂಬಂಧವನ್ನು ಹೊಸ ಸ್ತರಕ್ಕೆ ಕೊಂಡೊಯ್ಯುತ್ತಿದೆ. ಅದರಲ್ಲೂ ಹೂಡಿಕೆ, ತಂತ್ರಜ್ಞಾನ ಮತ್ತು ಜ್ಞಾನಾಧಾರಿತ ಆರ್ಥಿಕತೆಗಳಲ್ಲಿ ಹೆಚ್ಚಿನ ಸಹಕಾರ ವಿಸ್ತರಣೆಯಾಗಿದೆ. ಯುಎಇ ಜತೆಯಲ್ಲಿ ಕರ್ನಾಟಕವು ಈ ಹಾದಿಯಲ್ಲಿ ಹೆಜ್ಜೆ ಇಡಲು ಆಸಕ್ತವಾಗಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಐಪಿಎಲ್ ನೆನಪಿಸಿಕೊಂಡ ಸಚಿವರು: ದುಬೈ ಎಕ್ಸ್-ಪೋ ಮೇಳವು ಭಾರತದ ಪ್ರಾಚೀನ ಸಂಸ್ಕೃತಿಯನ್ನು ಮತ್ತು ಆಧುನಿಕ ತಂತ್ರಜ್ಞಾನದಲ್ಲಿ ಸಾಧಿಸಿರುವ ಪಾರಮ್ಯವನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟಿದೆ ಎಂದ ಅವರು, ನಿನ್ನೆಯಷ್ಟೇ ದುಬೈನಲ್ಲಿ ಮುಗಿದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯನ್ನೂ ನೆನಪಿಸಿಕೊಂಡರು.

ಇದನ್ನು ಪ್ರಸ್ತಾಪಿಸಿದ ಅವರು, `ಜಗತ್ತು ಈಗ ಕೊರೋನ ಸಂಕಷ್ಟದಲ್ಲಿದೆ. ಇಂತಹ ಸಂದರ್ಭದಲ್ಲಿ ದುಬೈ ನಮ್ಮ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದಕ್ಕೆ ನಾವು ಕೃತಜ್ಞರಾಗಿದ್ದೇವೆ. ಇದರ ಫೈನಲ್ ಪಂದ್ಯ ನಿನ್ನೆಯಷ್ಟೇ ಮುಗಿದಿದೆ. ಈಗಿನ ಕಷ್ಟದ ಸಮಯದಲ್ಲಿ ದುಬೈ ಈ ಪಂದ್ಯಗಳ ಆತಿಥ್ಯವನ್ನು ವಹಿಸಿಕೊಂಡಿದ್ದು ಖುಷಿಯ ಸಂಗತಿಯಾಗಿದ್ದು, ಒಂದು ಸಕಾರಾತ್ಮಕ ಸಂಕೇತವಾಗಿ ಹೊರಹೊಮ್ಮಿದೆ,’ ಎಂದು ಗುಣಗಾನ ಮಾಡಿದರು.

ಈ ಸಂದರ್ಭದಲ್ಲಿ ಕೈಮಗ್ಗ ನಿಗಮದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಬೃಹತ್ ಕೈಗಾರಿಕೆ, ಐಟಿ ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X