Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರತಿ ತಿಂಗಳು ಕಾರ್ಮಿಕ ಅದಾಲತ್: ಸಚಿವ...

ಪ್ರತಿ ತಿಂಗಳು ಕಾರ್ಮಿಕ ಅದಾಲತ್: ಸಚಿವ ಶಿವರಾಂ ಹೆಬ್ಬಾರ್

ವಾರ್ತಾಭಾರತಿವಾರ್ತಾಭಾರತಿ16 Oct 2021 10:10 PM IST
share
ಪ್ರತಿ ತಿಂಗಳು ಕಾರ್ಮಿಕ ಅದಾಲತ್: ಸಚಿವ ಶಿವರಾಂ ಹೆಬ್ಬಾರ್

ಬೆಂಗಳೂರು, ಅ. 16: `ರಾಜ್ಯಾದ್ಯಂತ ನಡೆದ ಕಾರ್ಮಿಕ ಅದಾಲತ್ ಅತ್ಯಂತ ಯಶಸ್ವಿಗೊಂಡಿದ್ದು, ದಾಖಲೆಯ ಪ್ರಮಾಣದಲ್ಲಿ ಪ್ರಕರಣಗಳು ಇತ್ಯರ್ಥಗೊಳಿಸಿ 1.54 ಲಕ್ಷ ಕಾರ್ಮಿಕರಿಗೆ 89.05 ಕೋಟಿ ರೂ.ಪಾವತಿಸಿದೆ. ಕೋವಿಡ್ ಸಹಾಯ ಧನ, ಕನಿಷ್ಠ ವೇತನ, ಪಿಂಚಣಿ, ಮಾಲೀಕ ಕಾರ್ಮಿಕರ ನಡುವೆ ವಿವಾದ ಹಾಗೂ ವಿವಿಧ ಯೋಜನೆ ಸಹಾಯ ಧನ ಸೇರಿದಂತೆ 2.83 ಲಕ್ಷ ಪ್ರಕರಣಗಳು ಕಾರ್ಮಿಕ ಅದಾಲತ್ ಮೂಲಕವಾಗಿ ಇತ್ಯರ್ಥಗೊಂಡಿದೆ, ಈ ಕಾರ್ಯಕ್ರಮದ ಮೂಲಕವಾಗಿ ರಾಜ್ಯದ ಶ್ರಮಿಕ ವರ್ಗದಲ್ಲಿ ನವ ಚೈತನ್ಯ ಮೂಡಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ.

ಕೆಲವು ವರ್ಷಗಳಿಂದ ವಿವಿಧ ಕಾರಣಗಳಿಂದ ಬಾಕಿ ಉಳಿದಿದ್ದ ಕಾರ್ಮಿಕರ ಸಮಸ್ಯೆಗಳು ಮತ್ತು ಪರಿಹಾರ ಅರ್ಜಿಗಳನ್ನು ಒಂದೇ ಬಾರಿಗೆ ವಿಲೇವಾರಿ ಮಾಡುವ ಸಲುವಾಗಿ ಸಚಿವ ಶಿವರಾಂ ಹೆಬ್ಬಾರ್ ಅವರು ರೂಪಿಸಿ ಜಾರಿಗೊಳಿಸಿದ `ಕಾರ್ಮಿಕ ಅದಾಲತ್' ಯಶಸ್ಸಿನ ನಂತರ ಇದೀಗ ಪ್ರತಿ ತಿಂಗಳು ಇದೇ ಮಾದರಿ `ಕಾರ್ಮಿಕ ಅದಾಲತ್' ನಡೆಸಲು ಇಲಾಖೆ ಮುಂದಡಿ ಇರಿಸಿದೆ.

ಕಾರ್ಮಿಕರ ಸಹಾಯಧನ ಅರ್ಜಿ, ಪರಿಹಾರ ಅರ್ಜಿ ಸೇರಿದಂತೆ ಕೆಲ ವಿವಾದಗಳು ಅಂತ್ಯ ಕಾಣದೆ ವರ್ಷಾನುಗಟ್ಟಲೆಯಿಂದ ಬಾಕಿ ಇದ್ದದ್ದನ್ನು ಮನಗಂಡ ಶಿವರಾಂ ಹೆಬ್ಬಾರ್ ಅವರು `ಕಾರ್ಮಿಕ ಅದಾಲತ್' ಕಾರ್ಯಕ್ರಮ ರೂಪಿಸುವ ಮೂಲಕ ಈ ಅರ್ಜಿಗಳ ವಿಲೇವಾರಿಗೆ ಕ್ರಮವಹಿಸಿದರು. ಇದರ ಪ್ರತಿಫಲವಾಗಿ ರಾಜ್ಯದ ಎಲ್ಲ ತಾಲೂಕುಗಳಲ್ಲಿ ಭಾರೀ ಪ್ರಚಾರದೊಂದಿಗೆ ನಡೆದ ಈ ಅದಾಲತ್‍ನಲ್ಲಿ 2.83 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ.

`ಕಾರ್ಮಿಕ ಅದಾಲತ್' ಯೋಜನೆ ಯಶಸ್ವಿ ಜಾರಿಗೆ ಅನುವಾಗುವಂತೆ ಇಲಾಖೆಯು ಹಲವು ಕ್ರಮಗಳನ್ನು ಕೈಗೊಂಡಿತ್ತಲ್ಲದೆ, ತಾಲ್ಲೂಕು ಮತ್ತು ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಂದ ನಿಗದಿತ ಅರ್ಜಿಗಳ ವಿವರ ಮತ್ತು ಪರಿಹಾರದ ಕ್ರಮಗಳ ಬಗ್ಗೆ ಪದೇ ಪದೇ ಮಾಹಿತಿ ಪಡೆಯುವ ಮೂಲಕ ಕಾರ್ಯಕ್ರಮ ಅನುಷ್ಠಾನಕ್ಕೆ ಶ್ರಮಿಸಿದರೆ, ಶಿವರಾಂ ಹೆಬ್ಬಾರ್ ಅವರು ಕಾರ್ಮಿಕ ಅದಾಲತ್ ಜಾರಿ ಮತ್ತು ನಿರ್ವಹಣೆಗೆ ಅನುವಾಗಲು ನೋಡಲ್ ಅಧಿಕಾರಿಗಳನ್ನು ನೇಮಿಸಿ ಹೆಚ್ಚಿನ ಕಾರ್ಮಿಕರಿಗೆ ಅನುಕೂಲವಾಗುವಂತೆ ಅದಾಲತ್ ಕಾರ್ಯಕ್ರಮ ರೂಪಿಸಿದರು.

ಇಲಾಖೆ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ನಡೆದ ಇಂತಹ ಅದಾಲತ್‍ನಲ್ಲಿ ಕಟ್ಟಡ ಮತ್ತು ಇತರೆ ಕಾರ್ಮಿಕ ನಿರ್ಮಾಣ ಕಾರ್ಮಿಕ ಮಂಡಳಿ ಹಾಗೂ ಕರ್ನಾಟಕ ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿದ್ದ ಹೆಚ್ಚಿನ ಅರ್ಜಿಗಳು ವಿಲೇವಾರಿಯಾಗಿದ್ದು, ಅರೆ ನ್ಯಾಯಿಕ ಪ್ರಕರಣಗಳು, ಕೈಗಾರಿಕಾ ವಿವಾದ ಮತ್ತು ದೂರುಗಳಿಗೆ ಸಂಬಂಧಿಸಿದ ಅರ್ಜಿಗಳು ಬಾಕಿ ಇರುವ ಪರಿಣಾಮ ಶಿವರಾಂ ಹೆಬ್ಬಾರ್ ಅವರ ಸೂಚನೆಯಂತೆ ಇಲಾಖೆಯು ಪ್ರತಿ ತಿಂಗಳ ಒಂದು ದಿನ ತಾಲೂಕು ಮಟ್ಟದಲ್ಲಿ ಕಾರ್ಮಿಕ ಅದಾಲತ್ ನಡೆಸುವಂತೆ ಇಲಾಖೆಯು ಆದೇಶಿಸಿದೆ.

ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಕಾರ್ಮಿಕ ಅದಾಲತ್ ಯಶಸ್ಸಿನ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಹಾಗೂ ಕಾರ್ಮಿಕರಿಗೆ ಶೀಘ್ರ ನ್ಯಾಯ ಒದಗಿಸಲು ಹಾಗೂ ಅರ್ಹ ಸೌಲಭ್ಯಗಳನ್ನು ತಲುಪಿಸುವ ಹಿತದೃಷ್ಟಿಯಿಂದ ಇಲಾಖೆಯ ಹಿರಿಯ ಕಾರ್ಮಿಕರ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು ವಿವಿಧ ಕಾರ್ಮಿಕ ಕಾಯ್ದೆಗಳಡಿ ಹಾಗೂ ವಿವಿಧ ಮಂಡಳಿಗಳ ಮೂಲಕ ಅನುಷ್ಠಾನಗೊಳಿಸುವ ಯೋಜನೆಗಳಡಿ ಸ್ವೀಕೃತವಾಗಿ ಬಹಳ ಕಾಲದಿಂದ ಇತ್ಯರ್ಥವಾಗದೆ ಬಾಕಿ ಉಳಿದಿರುವ ಪ್ರಕರಣಗಳು/ ಕಡತಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಪ್ರತಿ ತಾಲೂಕುಗಳಲ್ಲಿ ತಿಂಗಳಲ್ಲಿ ಒಂದು ದಿನ ಕಾರ್ಮಿಕ ಅದಾಲತ್ ನಡೆಸಲು ಇಲಾಖೆ ಆಯುಕ್ತ ಅಕ್ರಂ ಪಾಷ ಆದೇಶಿಸಿದ್ದಾರೆ.

ಕಾರ್ಮಿಕ ಅದಾಲತ್ ಅನ್ನು ನಿರಂತರವಾಗಿ ಸಮರೋಪಾದಿಯಲ್ಲಿ ಸಂಘಟಿಸುವ ಮೂಲಕ ಬಡ ಕಾರ್ಮಿಕರಿಗೆ ನೆರವು ಒದಗಿಸಲು ಹಾಗೂ ಬಾಕಿ ಇರುವ ಗರಿಷ್ಠ ಮಟ್ಟದ ಪ್ರಕರಣಗಳನ್ನು ಶೂನ್ಯಕ್ಕೆ ಇಳಿಸಬೇಕೆಂಬ ರಾಜ್ಯ ಸರಕಾರದ ಸ್ಪಷ್ಟ ಸೂಚನೆ ನೀಡಿದ್ದು, ಅದಾಲತ್ ಜಾರಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಆದೇಶದಲ್ಲಿ ಸೂಚಿಸಲಾಗಿದ್ದು, ಅದಾಲತ್‍ಗೆ ಸ್ಥಳೀಯವಾಗಿಯೇ ಸೂಕ್ತ ದಿನಾಂಕ ನಿರ್ಧರಿಸಿ ಪ್ರಚಾರ ಕೈಗೊಂಡು ಕಾರ್ಯಕ್ರಮ ನಡೆಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಪ್ರಾದೇಶಿಕ ವ್ಯಾಪ್ತಿಯ ಎಲ್ಲ ಉಪ ಕಾರ್ಮಿಕ ಆಯುಕ್ತರು, ವಿಭಾಗೀಯ ಮಟ್ಟದ ಅಧಿಕಾರಿಗಳಾದ ಸಹಾಯಕ ಕಾರ್ಮಿಕ ಆಯುಕ್ತರು ತಮ್ಮ ಕಚೇರಿಗಳ ವ್ಯಾಪ್ತಿಯಲ್ಲಿ ಬಾಕಿ ಇರುವ ಪ್ರಕರಣಗಳ ಮತ್ತು ಅರ್ಜಿಗಳ ವಿಲೇವಾರಿಗೆ ಕ್ರಮಕೈಗೊಂಡು ಅಧೀನ ಅಧಿಕಾರಿಗಳಾದ ಕಾರ್ಮಿಕ ಅಧಿಕಾರಿ, ಹಿರಿಯ ಕಾರ್ಮಿಕ ನಿರೀಕ್ಷಕರು ಮತ್ತು ಕಾರ್ಮಿಕ ನಿರೀಕ್ಷಕರುಗಳು ತಮ್ಮ ವ್ಯಾಪ್ತಿಯ ಪ್ರಕರಣಗಳ ಬಗ್ಗೆ ಆಗ್ಗಿಂದಾಗ್ಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ನೀಡುವ ಮೂಲಕ ಅರ್ಜಿಗಳ ವಿಲೇವಾರಿಯಲ್ಲಿ ತೊಡಗಿಕೊಳ್ಳಬೇಕೆಂದು ಸೂಚಿಸಲಾಗಿದೆ.

ಕಾರ್ಮಿಕ ಅದಾಲತ್ ಸಮರ್ಥ ಜಾರಿಗೆ ಅನುವಾಗುವಂತೆ ಅದಾಲತ್‍ನಲ್ಲಿ ವಿಲೇವಾರಿಯಾದ ಅರ್ಜಿಗಳ ಬಗ್ಗೆ ಜಿಲ್ಲಾವಾರು ಮಾಹಿತಿಯನ್ನು ಎಲ್ಲ ಉಪ ಕಾರ್ಮಿಕ ಆಯುಕ್ತರು ಕ್ರೋಡೀಕರಿಸಿ ಪ್ರತಿ ತಿಂಗಳ 10ನೆ ತಾರೀಕಿಗೂ ಮುನ್ನ ಕೇಂದ್ರ ಕಚೇರಿಗೆ ತಲುಪಿಸುವಂತೆ ಆಯುಕ್ತರು ತಮ್ಮ ಆದೇಶದಲ್ಲಿ ಸೂಚನೆ ನೀಡುವ ಮೂಲಕ ಅದಾಲತ್ ಯಶಸ್ಸಿನ ಬಗ್ಗೆ ನಿಗಾವಹಿಸುವ ಮುನ್ಸೂಚನೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X