Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. `ಶುದ್ಧ ಹಸ್ತದ ಶ್ರೀನಿವಾಸ ಮಾನೆ ಬೇಕೋ?...

`ಶುದ್ಧ ಹಸ್ತದ ಶ್ರೀನಿವಾಸ ಮಾನೆ ಬೇಕೋ? ಭ್ರಷ್ಟ ಶಿವರಾಜ್ ಸಜ್ಜನರ್ ಬೇಕೋ? ತೀರ್ಮಾನಿಸಿ': ಸಿದ್ದರಾಮಯ್ಯ

ಹಾನಗಲ್ ವಿಧಾನಸಭೆ ಉಪ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ16 Oct 2021 10:40 PM IST
share
`ಶುದ್ಧ ಹಸ್ತದ ಶ್ರೀನಿವಾಸ ಮಾನೆ ಬೇಕೋ? ಭ್ರಷ್ಟ ಶಿವರಾಜ್ ಸಜ್ಜನರ್ ಬೇಕೋ? ತೀರ್ಮಾನಿಸಿ: ಸಿದ್ದರಾಮಯ್ಯ

ಹಾವೇರಿ, ಅ. 16: ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರ ಪರ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಕ್ಷೇತ್ರ ವ್ಯಾಪ್ತಿಯ ಮಲಗುಂದ, ಹೇರೂರು, ತಿಳವಳ್ಳಿ, ಗೊಂದಿ ಸೇರಿದಂತೆ ವಿವಿಧೆಡೆಗಳಲ್ಲಿ ಅಬ್ಬರದ ಪ್ರಚಾರ ನಡೆಸಿದರು.

ಶನಿವಾರ ಇಲ್ಲಿನ ಮಲಗುಂದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಸಿದ್ದರಾಮಯ್ಯ, `ಉದಾಸಿ ಮತ್ತು ಶಿವರಾಜ್ ಸಜ್ಜನರ್ ಇಬ್ಬರೂ ಸೇರಿ ಹಾವೇರಿಯ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ನುಂಗಿ ನೀರು ಕುಡಿದರು. ಖಾಲಿ ಸಕ್ಕರೆ ಚೀಲಗಳನ್ನು ಬಿಡದೆ ಮಾರಾಟ ಮಾಡಿದ್ದಾರೆ. ಈಗ ಕಾರ್ಖಾನೆ ಖಾಸಗಿಯವರ ಪಾಲಾಗಿದೆ. ಇಂತಹವರು ಈಗ ಬಿಜೆಪಿ ಅಭ್ಯರ್ಥಿಯಾಗಿ ನಿಮ್ಮ ಬಳಿ ಮತ ಕೇಳುತ್ತಾರೆ, ಮತ ನೀಡುತ್ತೀರೋ, ಬಿಡುತ್ತೀರೋ ಕ್ಷೇತ್ರದ ಜನರೇ ಯೋಚನೆ ಮಾಡಬೇಕು' ಎಂದು ಹೇಳಿದರು.

`ಕೈ ಬಾಯಿ ಶುದ್ಧವಾಗಿರುವ ಶ್ರೀನಿವಾಸ್ ಮಾನೆಯಂತಹ ಶಾಸಕರು ಹಾನಗಲ್ ಕ್ಷೇತ್ರಕ್ಕೆ ಬೇಕೋ? ಅಥವಾ ಭ್ರಷ್ಟ ಶಿವರಾಜ್ ಸಜ್ಜನರ್ ಬೇಕೋ? ಎಂದು ಜನತೆ ತೀರ್ಮಾನ ಮಾಡಬೇಕು' ಎಂದು ಸಲಹೆ ಮಾಡಿದ ಸಿದ್ದರಾಮಯ್ಯ, `ಕಳೆದ ಚುನಾವಣೆಯಲ್ಲಿ ಜನ ಯಾವೊಂದು ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಿರಲಿಲ್ಲ, ನಾವು ಹೆಚ್ಚು ಸ್ಥಾನ ಗೆದ್ದಿದ್ದರೂ ಕೋಮುವಾದಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಜೆಡಿಎಸ್‍ಗೆ ಬೆಂಬಲ ನೀಡಿದೆವು. ಯಡಿಯೂರಪ್ಪ ಆಪರೇಷನ್ ಕಮಲ ಮಾಡಿ ಕಾಂಗ್ರೆಸ್-ಜೆಡಿಎಸ್‍ನ 17 ಮಂದಿ ಶಾಸಕರನ್ನು ಖರೀದಿ ಮಾಡಿ, ಸರಕಾರ ಮಾಡಿದರೂ, ಹೆಚ್ಚು ದಿನ ಸಿಎಂ ಆಗಿ ಅಧಿಕಾರದಲ್ಲಿ ಇರಲಿಲ್ಲ. ಈಗ ಬೊಮ್ಮಾಯಿ ಕೈಕಾಲು ಹಿಡಿದು ಚುನಾವಣಾ ಪ್ರಚಾರಕ್ಕೆ ಬರುವಂತೆ ಗೋಗರೆದಿದ್ದಾರೆ. ಹಾಗಾಗಿ ಈ ಕಡೆ ಬರಬಹುದು' ಎಂದು ಲೇವಡಿ ಮಾಡಿದರು.

`ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ನಾವು ನೀಡುತ್ತಿದ್ದ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು ಕಡಿತ ಮಾಡಿದರು. ಬಡವರ ಹೊಟ್ಟೆ ಮೇಲೆ ಹೊಡೆಯುವಂತಾ ನೀಚ ಬುದ್ಧಿ ಯಾಕೆ ಮಾಡಬೇಕು? ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಹಾಲು ಕೊಡ್ತಿದ್ವಿ, ಈಗ ಅದು ಇದೆಯಾ? ಸಾಲಮನ್ನಾ, ಇಂದಿರಾ ಕ್ಯಾಂಟೀನ್, ಭಾಗ್ಯಜ್ಯೋತಿ, ಉಚಿತ ಮನೆಗಳು, ಶೂಭಾಗ್ಯ, ಶಾದಿಭಾಗ್ಯ, ಕೃಷಿಭಾಗ್ಯ ಇವುಗಳಲ್ಲಿ ಯಾವ ಯೋಜನೆ ಈಗಿದೆ? ಎಲ್ಲವನ್ನೂ ನಿಲ್ಲಿಸಿದ್ದಾರೆ' ಎಂದು ಸಿದ್ದರಾಮಯ್ಯ ಟೀಕಿಸಿದರು.

`ನಾನು ಸಿಎಂ ಆಗಿದ್ದಾಗ 15 ಲಕ್ಷ ಮನೆ ನೀಡಿದ್ದೆ. ಹಾವೇರಿಯ ಬಡ ಜನರಿಗೆ ಬಿಜೆಪಿ ಸರಕಾರ ಒಂದೇ ಒಂದು ಮನೆಯನ್ನು ಕಟ್ಟಿಸಿ ಕೊಟ್ಟಿದೆಯಾ? ಕುರಿ, ಹಸು, ಎತ್ತುಗಳು ಸತ್ತಾಗ ಪರಿಹಾರ ನೀಡುವ ಅನುಗ್ರಹ ಯೋಜನೆ ಈಗಿಲ್ಲ, ಇದರಿಂದ ಹಿಂದುಳಿದ ವರ್ಗಗಳ ಜನ ಎಷ್ಟು ನಷ್ಟ ಅನುಭವಿಸಿದ್ದಾರೆಂದು ಸರಕಾರಕ್ಕೆ ಗೊತ್ತೇ? ಇಷ್ಟೆಲ್ಲಾ ಮಾಡಿದ್ರೂ ಬಿಜೆಪಿಗೆ ಮತ ನೀಡಬೇಕಾ? ಇದೂ ಸಾಕಾಗಿಲ್ಲ ಎಂದು ಕೊಳವೆ ಬಾವಿಗೆ ಮೀಟರ್ ಹಾಕಿ ರೈತರ ಬದುಕು ಕಸಿಯಲು ಹೊರಟಿದ್ದಾರೆ' ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

`ಮೋದಿ ಪ್ರಧಾನಿಯಾದ ಮೇಲೆ ಹಸಿವಿನಿಂದ ನರಳುತ್ತಿರುವ ದೇಶಗಳ ಪಟ್ಟಿಯಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ನಮಗಿಂತ ಉತ್ತಮ ಸ್ಥಾನದಲ್ಲಿವೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಹಸಿವಿನ ಸೂಚ್ಯಂಕದಲ್ಲಿ ಭಾರತ 55ನೆ ಸ್ಥಾನದಲ್ಲಿ ಇತ್ತು. ಇದೇನಾ ಮೋದಿಯ ಅಚ್ಚೇದಿನ್? ರಸಗೊಬ್ಬರ, ಸಿಮೆಂಟ್, ಕಬ್ಬಿಣ, ಸಿಲಿಂಡರ್, ಪೆಟ್ರೋಲ್, ಡೀಸೆಲ್, ಆಸ್ಪತ್ರೆ ಬಿಲ್, ಅಡುಗೆ ಎಣ್ಣೆ ಬೆಲೆ ಏನಾಗಿದೆ? ಬಡವರು ಕೊಳ್ಳಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

`ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 46 ರೂ.ಇದ್ದ ಡೀಸೆಲ್ ಬೆಲೆ ಇಂದು 100 ರೂ.ಆಗಿದೆ, ಪೆಟ್ರೋಲ್ ಬೆಲೆ 72 ರೂ.ಗಳಿಂದ 110 ರೂ.ಆಗಿದೆ, ಅಡುಗೆ ಎಣ್ಣೆ 80 ರೂ.ಇತ್ತು, 200 ರೂ.ಆಗಿದೆ. ಇವರೆಲ್ಲಾ ಇನ್ನೂ ಅಧಿಕಾರದಲ್ಲಿ ಇರಬೇಕಾ? ನಾವು ಅಧಿಕಾರಕ್ಕೆ ಬಂದರೆ ಉಚಿತವಾಗಿ 10 ಕೆ.ಜಿ ಅಕ್ಕಿ ಕೊಡ್ತೀವಿ. ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡ್ತೀವಿ. ಹೀಗಾಗಿ ಕಾಂಗ್ರೆಸ್‍ಗೆ ಮತ ನೀಡಬೇಕು. ಗೌರಾಪುರ ಗುಡ್ಡದ 21 ಎಕರೆಯನ್ನು ಸರಕಾರ ಅಗ್ಗದ ಬೆಲೆಗೆ ಶಿವರಾಜ್ ಸಜ್ಜನರ್‍ಗೆ ಕೊಟ್ಟಿದೆ. ಗುಡ್ಡ ನುಂಗಲು ಹೊರಟಿರುವವರು ಸಜ್ಜನರೋ? ದುರ್ಜನರೋ? ಇಂತಹವರಿಗೆ ಮತ ನೀಡುತ್ತೀರಾ? ಇನ್ನೊಮ್ಮೆ ಯೋಚಿಸಿ' ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

`ಹಾನಗಲ್ ಕ್ಷೇತ್ರದ ಉಪ ಚುನಾವಣೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಇದು ನಿಜವೇ ಆದರೂ, ಇಷ್ಟೆಲ್ಲಾ ಅನ್ಯಾಯ ಮಾಡಿರುವ ಬಿಜೆಪಿಗೆ ಬುದ್ಧಿ ಕಲಿಸಬೇಕಲ್ಲವೇ? ಅದಕ್ಕಾಗಿಯಾದರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರಿಗೆ ಮತ ನೀಡಿ ಗೆಲ್ಲಿಸಿ ಎಂದು ಕೈಮುಗಿದು ಮನವಿ ಮಾಡುತ್ತೇನೆ'

-ಸಿದ್ದರಾಮಯ್ಯ ಪ್ರತಿಪಕ್ಷ ನಾಯಕ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X