ಸಂಘಪರಿವಾರದಿಂದ ಉದ್ರೇಕಕಾರಿ ಭಾಷಣ; ಕ್ರಮಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿ ಆಗ್ರಹ

ಮಂಗಳೂರು, ಅ.16: ದ.ಕ. ಜಿಲ್ಲೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಂ ಸಮುದಾಯದ ಬಗ್ಗೆ ಉದ್ರೇಕಕಾರಿ ಭಾಷಣ ಮಾಡಿ ಶಾಂತಿಭಂಗ ಸೃಷ್ಟಿಸುತ್ತಿರುವುದರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವತಿಯಿಂದ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಉಪಾಧ್ಯಕ್ಷ ಹಾಜಿ ಇಬ್ರಾಹಿಂ ಕೋಡಿಜಾಲ್, ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್, ಕಾರ್ಯದರ್ಶಿ ಹಾಜಿ ಬಿ. ಅಬೂಬಕರ್, ಕಾರ್ಯದರ್ಶಿಗಳಾದ ಸಿ.ಎಂ. ಮುಸ್ತಫ, ಹಾಜಿ ಮುಹಮ್ಮದ್ ಬಪ್ಪಳಿಗೆ, ಅಹ್ಮದ್ ಬಾವ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.
Next Story