ಡಾ. ಭಾರತಿ ಪಿಲಾರ್‌ಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು, ಅ.17: ಮಂಗಳೂರು ವಿವಿ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಿಕೆ ಡಾ. ಭಾರತಿ ಪಿಲಾರ್‌ಗೆ ರಾಜ್ಯ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಎನ್ನೆಸ್ಸೆಸ್ 2018-19ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
ಕಾಲೇಜಿನ ಎನ್ನೆಸ್ಸೆಸ್ ಘಟಕಕ್ಕೆ 2018-19ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಎನ್ನೆಸ್ಸೆಸ್ ಘಟಕ ಪ್ರಶಸ್ತಿ ಲಭಿಸಿದೆ. ಪ್ರಾಂಶುಪಾಲೆ ಡಾ. ಅನಸೂಯರೈ ಪ್ರಶಸ್ತಿ ಸ್ವೀಕರಿಸಿದರು.
ರಾಜ್ಯ ಕ್ರೀಡಾ ಸಚಿವ ಡಾ. ಕೆ.ಸಿ. ನಾರಾಯಣಗೌಡ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಸಚಿವರಾದ ಡಾ.ಸಿ.ಎನ್ ಅಶ್ವಥ ನಾರಾಯಣ, ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಇಲಾಖೆ ಆಯುಕ್ತ ವೆಂಕಟೇಶ್ ಕುಮಾರ್, ರಾಜ್ಯ ಎನ್ನೆಸ್ಸೆಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ ಮತ್ತಿತರರು ಉಪಸ್ಥಿತರಿದ್ದರು.
Next Story





