ಬೆಂಗಳೂರಿಗೆ ವರ್ಗಾವಣೆಗೊಂಡ ಪತ್ರಕರ್ತೆಯರಿಗೆ ಬೀಳ್ಕೊಡುಗೆ

ಉಡುಪಿ, ಅ.18: ಬೆಂಗಳೂರಿಗೆ ವರ್ಗಾವಣೆಗೊಂಡಿರುವ ಹೊಸದಿಗಂತ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾದ ನವ್ಯ ಜ್ಯೋತಿ ನೆಲ್ಲಿಜೆ ಹಾಗೂ ಉದಯವಾಣಿ ಉಡುಪಿ ವರದಿಗಾರರಾದ ತೃಪ್ತಿ ಕುಮ್ರಗೋಡು ಅವರಿಗೆ ಬೀಳ್ಕೊಡುಗೆ ಸಮಾರಂಭ ವನ್ನು ಸೋಮವಾರ ಉಡುಪಿ ಪತ್ರಿಕಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ನವ್ಯಜ್ಯೋತಿ ನೆಲ್ಲಿಜೆ ಹಾಗೂ ತೃಪ್ತಿ ಕುಮ್ರಗೋಡು ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು. ಸಂಘದ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಪ್ರಮೋದ್ ಸುವರ್ಣ ಹಾಗೂ ಹರ್ಷಿಣಿ ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ಚೇತನ್ ಕಾರ್ಯಕ್ರಮ ನಿರೂಪಿಸಿದರು.
Next Story





