Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. “ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ...

“ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು?”

ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮೂಲಕ ಜೆಡಿಎಸ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ19 Oct 2021 10:54 AM IST
share
“ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು?”

ಬೆಂಗಳೂರು, ಅ.19: “ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ…” ಈ ರೀತಿ ಸರಣಿ ಟ್ವೀಟ್ ಮೂಲಕ ಜೆಡಿಎಸ್ ಪಕ್ಷವು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಸ್ವಯಂ ಘೋಷಿತ ಸೇವಾ ಸಂಸ್ಥೆ ಆರೆಸ್ಸೆಸ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವ್ನನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ.

ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. "ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ" ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ.

ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು?

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ.

ಕುಮಾರಸ್ವಾಮಿ ಅವರು ಆರ್ ಎಸ್ ಎಸ್ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯು.ಪಿ.ಎಸ್.ಸಿ ಗೆ ಸಮೀಕರಣ ಮಾಡಿ ಕೆ.ಪಿ.ಎಸ್.ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆ.ಪಿ.ಎಸ್.ಸಿ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ?

ಕುಮಾರಸ್ವಾಮಿ ಅವರೆಂದೂ ಕೆ.ಪಿ.ಎಸ್.ಸಿ ಯನ್ನು ದುರುಪಯೋಗ ಮಾಡಿಕೊಂಡಿಲ್ಲ. 2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು?

ಕೆ.ಪಿ.ಎಸ್.ಸಿ ಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆ.ಪಿ.ಎಸ್.ಸಿ ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ.

ಸ್ವಯಂ ಘೋಷಿತ ಸೇವಾ ಸಂಸ್ಥೆ ಅರ್ ಎಸ್ ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವ್ನನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ. 1/7

— Janata Dal Secular (@JanataDal_S) October 19, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X