ಉಡುಪಿ ಸವಿತಾ ಸಮಾಜದಿಂದ ಉಚಿತ ನೇತ್ರ ತಪಾಸಣೆ ಶಿಬಿರ

ಉಡುಪಿ, ಅ.19: ಜಿಲ್ಲಾ ಸವಿತಾ ಸಮಾಜ, ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ, ಉಡುಪಿ ತಾಲೂಕು ಮತ್ತು ನಗರ ಘಟಕ ಸವಿತಾ ಸಮಾಜದ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಅಂಧತ್ವ ನಿವಾರಣಾ ವಿಭಾಗ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಅಂಬಲಪಾಡಿ ಜಿಲ್ಲಾ ಸವಿತಾ ಸಮಾಜ ಸಮುದಾಯ ಭವನದಲ್ಲಿ ಮಂಗಳವಾರ ಏರ್ಪಡಿಸಲಾಗಿತ್ತು.
ಶಿಬಿರವನ್ನು ಉದ್ಘಾಟಿಸಿದ ಬಾರಕೂರು ಕಚ್ಚೂರು ಶ್ರೀನಾಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಕಡಂದಲೆ ಸುರೇಶ್ ಭಂಡಾರಿ ಮಾತ ನಾಡಿ, ಅಂಧತ್ವ ನಿವಾರಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ಕ್ಲಪ್ತ ಸಮಯಕ್ಕೆ ನೇತ್ರ ತಪಾಸಣೆ ನಡೆಸಿ, ಕಣ್ಣಿನ ದೃಷ್ಟಿಯ ಆರೈಕೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಇಂತಹ ಶಿಬಿರಗಳು ಸಹಾರಿಯಾಗುತ್ತಿದೆ ಎಂದು ತಿಳಿಸಿದರು.
ಸವಿತಾ ಸಮಾಜದ ಉಡುಪಿ ನಗರ ಘಟಕ ಅಧ್ಯಕ್ಷ ಅಶೋಕ್ ಭಂಡಾರಿ ರಾಂಪುರ ಅಧ್ಯಕ್ಷತೆ ವಹಿಸಿದ್ದರು. ಪ್ರಸಾದ್ ನೇತ್ರಾಲಯದ ಡಾ.ಸಚಿನ್, ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಜಿಲ್ಲಾ ಪರಿಯಾಳ ಸಮಾಜ ಸುಧಾರಕ ಸಂಘ ಉಚ್ಚಿಲ ಅಧ್ಯಕ್ಷ ಶಂಕರ್ ಸಾಲ್ಯಾನ್, ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಅಶೋಕ್ ಭಂಡಾರಿ, ಜಿಲ್ಲಾ ಮನೆ ಕೆಲಸಗಾರರ ಸಂಘದ ಅಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ, ಉಡುಪಿ ಜಿಲ್ಲಾ ಸವಿತಾ ಸಮಾಜ ಅಧ್ಯಕ್ಷ ವಿಶ್ವನಾಥ್ ಭಂಡಾರಿ ನಿಂಜೂರು, ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ನವೀನ್ ಚಂದ್ರ ಭಂಡಾರಿ, ಜಿಲ್ಲಾ ಸವಿತಾ ಸಮಾಜದ ಕೋಶಾಧಿಕಾರಿ ಶೇಖರ್ ಸಾಲ್ಯಾನ್ ಆದಿಉಡುಪಿ, ತಾಲೂಕು ಪ್ರಧಾನ ಕಾರ್ಯದರ್ಶಿ ಹರೀಶ್ ಭಂಡಾರಿ ಕರಂಬಳ್ಳಿ, ಸಿಇಒ ಮಾಲತಿ ಅಶೋಕ್, ನಗರ ಘಟಕ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಭಂಡಾರಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಸವಿತಾ ಸಮಾಜ ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು ಸ್ವಾಗತಿಸಿದರು. ಉಡುಪಿ ತಾಲೂಕು ಸವಿತಾ ಸಮಾಜ ಅಧ್ಯಕ್ಷ ರಾಜು ಭಂಡಾರಿ ಕಿನ್ನಿಮುಲ್ಕಿ ವಂದಿಸಿದರು. ಮಂಜುನಾಥ್ ಭಂಡಾರಿ ಪಡುಕರೆ ಕಾರ್ಯಕ್ರಮ ನಿರೂಪಿಸಿದರು.







