Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ : ಸುಂದರಗೊಂಡಿತು ಗ್ರಾಮದ ತ್ಯಾಜ್ಯ...

ಉಡುಪಿ : ಸುಂದರಗೊಂಡಿತು ಗ್ರಾಮದ ತ್ಯಾಜ್ಯ ಎಸೆಯುವ ‘ಬ್ಲ್ಯಾಕ್ ಸ್ಪಾಟ್’

ವಾರ್ತಾಭಾರತಿವಾರ್ತಾಭಾರತಿ19 Oct 2021 7:53 PM IST
share
ಉಡುಪಿ : ಸುಂದರಗೊಂಡಿತು ಗ್ರಾಮದ ತ್ಯಾಜ್ಯ ಎಸೆಯುವ ‘ಬ್ಲ್ಯಾಕ್ ಸ್ಪಾಟ್’

ಉಡುಪಿ, ಅ.19: ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆಯಡಿ ಉಡುಪಿ ಜಿಲ್ಲಾ ಪಂಚಾಯತ್ ಜಿಲ್ಲೆಯಾದ್ಯಂತ ನಡೆಸಿದ ತ್ಯಾಜ್ಯ ಎಸೆಯುವ ‘ಬ್ಲ್ಯಾಕ್ ಸ್ಪಾಟ್’ ಸುಂದರೀಕರಣ ಯೋಜನೆ ಉತ್ತಮ ಜನಸ್ಪಂದನೆಯನ್ನು ಪಡೆದಿದ್ದು, ಇದುವರೆಗೆ 150ಕ್ಕೂ ಹೆಚ್ಚಿನ ಇಂಥ ಸ್ಥಳಗಳು ತ್ಯಾಜ್ಯಗಳಿಂದ ಮುಕ್ತವಾಗಿ ಹಸಿರು ಗಿಡಗಳೊಂದಿಗೆ ನಳನಳಿಸುತ್ತಿವೆ.

ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಸಾರ್ವಜನಿಕ ಸ್ಥಳಗಳಲ್ಲಿ ಅದರಲ್ಲೂ ಮುಖ್ಯವಾಗಿ ರಸ್ತೆ, ಬಸ್‌ನಿಲ್ದಾಣ, ನದಿಯ ಪಕ್ಕದಲ್ಲಿ ತ್ಯಾಜ್ಯ ಎಸೆಯುವ ಜಾ ಗಳನ್ನು ಗುರುತಿಸುವ ಜಿಪಂನ ಪ್ರಯತ್ನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರಕಿದೆ. ಜನರ ಮೂಲಕವೇ ಜಿಲ್ಲೆಯಲ್ಲಿ ಇದುವರೆಗೆ ಗುರುತಿಸಲಾದ 150ಕ್ಕೂ ಅಧಿಕ ಕಡೆಗಳಲ್ಲಿದ್ದ ‘ಕಪ್ಪು ತಾಣ’ಗಳನ್ನು ನಿರ್ಮೂಲನೆ ಮಾಡಲಾಗಿದೆ.

ಈವರೆಗೆ ಒಟ್ಟು 55 ಕಡೆಗಳಲ್ಲಿ ಇಂಥ ‘ಕಪ್ಪು ಪ್ರದೇಶ’ ಇರುವ ಬಗ್ಗೆ ವಾಟ್ಸಪ್ ನಂ.: 9483330564ಕ್ಕೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಇದರಲ್ಲಿ ಜಿಪಂ ವ್ಯಾಪ್ತಿಯ ಗ್ರಾಮೀಣ ಭಾಗಕ್ಕೆ ಸೇರಿದ 42 ಪ್ರದೇಶಗಳಿದ್ದು ಇವುಗಳಲ್ಲಿ ಈವರೆಗೆ 40ನ್ನು ಸಂಪೂರ್ಣ ಸ್ವಚ್ಛಗೊಳಿಸಲಾಗಿದೆ. ಉಳಿದಂತೆ ನಗರ ವ್ಯಾಪ್ತಿಗೆ ಸೇರಿದ ಕಸ-ತ್ಯಾಜ್ಯಗಳಿರುವ ಕಪ್ಪು ತಾಣಗಳನ್ನು ಸ್ವಚ್ಛಗೊಳಿಸುವ ಬಗ್ಗೆ ನಗರಸಭೆಗೆ ಮಾಹಿತಿ ನೀಡಲಾಗಿದೆ.

ಇದರೊಂದಿಗೆ ಸುಮಾರು 100 ಕ್ಕೂ ಹೆಚ್ಚು ಕಡೆಗಳಲ್ಲಿ ತ್ಯಾಜ್ಯ ಎಸೆಯುವ ಸ್ಥಳಗಳನ್ನು ಗ್ರಾಮ ಪಂಚಾಯತ್‌ಗಳು ತಾವೇ ಗುರುತಿಸಿದ್ದು, ಅವುಗಳನ್ನು ಸಹ ಸ್ವಚ್ಛಗೊಳಿಸಿಲಾಗಿದೆ.ಬಹುತೇಕ ಕಡೆಗಳಲ್ಲಿ ಗಿಡ ನೆಡುವುದು, ಸಿಸಿಟಿವಿ ಅಳವ ಡಿಕೆ, ಬ್ಯಾನರ್, ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಕೋಟೇಶ್ವರ, ಕೋಡಿಬೆಟ್ಟು, ಬೊಮ್ಮರಬೆಟ್ಟು ಗ್ರಾಪಂ ವ್ಯಾಪ್ತಿಯಲ್ಲಿ ಕಸ ಎಸೆಯುವ ‘ಕಪ್ಪು ಪ್ರದೇಶ’ಗಳನ್ನು ನಿರ್ಮೂಲನಗೊಳಿಸುವ ಜೊತೆಗೆ ಕೆಲವಡೆ ಅದನ್ನು ಹೂದೋಟವಾಗಿ ಪರಿವರ್ತಿಸಿ ಅದಕ್ಕೆ ಕಲಾತ್ಮಕತೆಯ ಸ್ಪರ್ಶ ನೀಡಲಾಗಿದೆ.

ತ್ಯಾಜ್ಯ ಎಸೆಯುವ ಜಾಗವನ್ನು ಗುರುತಿಸಿ ಮಾಹಿತಿ ನೀಡುವ ಕರೆಗೆ ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ದೊರೆತಿದ್ದು, ಕೆಲವು ಕಡೆಗಳಲ್ಲಿ ತ್ಯಾಜ್ಯ ಎಸೆದವರಿಗೆ ದಂ ವಿಧಿಸುವುದರೊಂದಿಗೆ ಅವರಿಂದಲೇ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಕಾರ್ಯವೂ ಭರದಿಂದ ನಡೆಯುತ್ತಿದೆ. 

ಸಿದ್ಧಾಪುರ ಗ್ರಾಪಂನಲ್ಲಿ ಸ್ಮಶಾನದ ಬಳಿ ತ್ಯಾಜ್ಯ ಎಸೆದವರನ್ನು ಪತ್ತೆ ಹಚ್ಚಿ 1000 ರೂ ದಂಡ ವಿಧಿಸಲಾಗಿದೆ. ಸಾಣೂರು ಗ್ರಾಪಂನಲ್ಲಿ 2000 ರೂ., ಬಡಾ ಗ್ರಾಪಂನಲ್ಲಿ 2000 ರೂ. ದಂಡ ವಿಧಿಸಲಾಗಿದೆ. ಕೋಡಿಬೆಟ್ಟು ಗ್ರಾಪಂನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದವರನ್ನು ಪತ್ತೆ ಹಚ್ಚಿ ಅವರಿಂದಲೇ ಕಸ ಹೆಕ್ಕಿಸುವ ಕಾರ್ಯವೂ ನಡೆದಿದೆ. ಅಲೆವೂರು ಗ್ರಾಪಂನಲ್ಲಿ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದವರನ್ನು ಪತ್ತೆ ಮಾಡಿ ಅವರಿಂದಲೇ ಕಸ ಹೆಕ್ಕಿಸಿ 2000ರೂ. ದಂಡವನ್ನು ಕೂಡ ವಸೂಲಿ ಮಾಡಲಾಗಿದೆ.

ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವವರ ಪೋಟೋ/ ಕಸ ತಂದು ಸುರಿಯುವ ವಾಹನಗಳ ಪೋಟೋ/ ಕಸ ಬಿದ್ದಿರುವ ಜಾಗದ ಪೋಟೋಗಳನ್ನು ಮತ್ತು ಸ್ಥಳದ ಮಾಹಿತಿಯನ್ನು ವಾಟ್ಸಪ್ ನಂಬರ್: 9483330564ನಲ್ಲಿ ನೀಡಿದ್ದಲ್ಲಿ ಮಾಹಿತಿ ನೀಡಿದವರಿಗೆ ಗ್ರಾಮ ಪಂಚಾಯತ್ ನಿಂದ ಸೂಕ್ತ ಬಹುಮಾನ ನೀಡಲಾಗುವುದು. ಈ ಮಾಹಿತಿ ನೀಡಿದವರ ಮೊಬೈಲ್ ಸಂಖ್ಯೆ ಮತ್ತು ಹೆಸರನ್ನು ಬಹಿರಂಗ ಪಡಿಸುವುದಿಲ್ಲ.

ಜಿಲ್ಲೆಯಲ್ಲಿ ಕಸ-ತ್ಯಾಜ್ಯ ನಿರ್ಮೂಲನಾ ಕಾರ್ಯ ನಿರಂತರ ಪ್ರಕ್ರಿಯೆ ಯಾಗಿದ್ದು, ಸಾರ್ವಜನಿಕರು ಬ್ಲ್ಯಾಕ್‌ ಸ್ಪಾಟ್‌ಗಳ ಬಗ್ಗೆ ವಾಟ್ಸಾಪ್ ಮೂಲಕ ಮಾಹಿತಿ ನೀಡಿ ‘ನಮ್ಮ ಊರು ಸ್ವಚ್ಛ ಊರು’ ಅಭಿಯಾನವನ್ನು ಮತ್ತಷ್ಟು ಯಶಸ್ವಿಗೊಳಿಸಿ, ಇಡೀ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಮಾಡಲು ಸಹಕರಿಸಬೇಕು.

-ಡಾ.ನವೀನ್ ಭಟ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಡುಪಿ ಜಿಪಂ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X